Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್...

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಫೋನ್ ಪತ್ತೆ; ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ1 Oct 2026 8:04 PM IST
share
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಫೋನ್ ಪತ್ತೆ; ಪ್ರಕರಣ ದಾಖಲು

ಕಲಬುರಗಿ: ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಫೋನ್ ಪತ್ತೆಯಾದ ಹಿನ್ನೆಲೆಯಲ್ಲಿ ಸಮೀಪದ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬುಧವಾರ ಮಧ್ಯಾಹ್ನ ಕೇಂದ್ರ ಕಾರಾಗೃಹದ ವೀಕ್ಷಕ ರಾಚಯ್ಯ ಸ್ವಾಮಿ ಅವರು ಠಾಣೆಗೆ ಹಾಜರಾಗಿ, ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ಚನ್ನಪ್ಪ ಅವರ ಪರವಾಗಿ ದೂರು ಸಲ್ಲಿಸಿದ್ದಾರೆ.

ದೂರಿನ ಪ್ರಕಾರ, ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ಲೋಕೇಶ್ ಟಿ.ಕೆ. ಹಾಗೂ ಜೈಲರ್ ಕಾಂತಪ್ಪ ಪಾಟೀಲ ಅವರು ಸೆ.26ರಂದು ಕಾರಾಗೃಹದೊಳಗೆ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬ್ಯಾರಕ್ ಸಂಖ್ಯೆ 14ರಲ್ಲಿದ್ದ ಶಿಕ್ಷಾಬಂದಿ ಸಂಖ್ಯೆ 1761ರ ನಾಗೇಂದ್ರ ಕೆ. ಅಲಿಯಾಸ್ ನಾಗೇಶ್ ಕಾಣಿಸದಿರುವುದು ಗಮನಕ್ಕೆ ಬಂದಿದೆ.

ಬಳಿಕ ಬ್ಯಾರಕ್‌ನ ಶೌಚಾಲಯದ ಬಳಿ ಪರಿಶೀಲನೆ ನಡೆಸಿದಾಗ, ನಾಗೇಂದ್ರ ತನ್ನ ಬಳಿ ಇದ್ದ ಮೊಬೈಲ್ ಫೋನ್ ಅನ್ನು ಶೌಚಾಲಯದ ಕಿಟಕಿಯಿಂದ ಹೊರಗೆ ಎಸೆದಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನಂತರ ಹೊರ ಆವರಣದಲ್ಲಿ ತಪಾಸಣೆ ನಡೆಸಿದಾಗ ಬ್ಯಾರಕ್ ಸಂಖ್ಯೆ 14 ಮತ್ತು 16ರ ಮಧ್ಯಭಾಗದಲ್ಲಿ ಮೊಬೈಲ್ ಫೋನ್ ಹಾಗೂ ಸಿಮ್ ಕಾರ್ಡ್ ಪತ್ತೆಯಾಗಿದೆ ಎಂದು ತಿಳಿಸಲಾಗಿದೆ.

ಪತ್ತೆಯಾದ ವಸ್ತುಗಳಲ್ಲಿ ತಿಳಿ ನೀಲಿ ಬಣ್ಣದ ಮೊಟೊ ಕಂಪನಿಯ ಸ್ಮಾರ್ಟ್‌ಫೋನ್ ಹಾಗೂ ಏರ್‌ಟೆಲ್ ಸಿಮ್ ಕಾರ್ಡ್ ಸೇರಿವೆ. ಕಾರಾಗೃಹದಲ್ಲಿ ಮೊಬೈಲ್ ಫೋನ್ ಹಾಗೂ ಸಿಮ್ ಕಾರ್ಡ್ ನಿಷೇಧಿತ ವಸ್ತುಗಳಾಗಿರುವ ಹಿನ್ನೆಲೆಯಲ್ಲಿ ಅವುಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Tags

KalaburagiKalaburagi Central Jailmobile phone
share
ವಾರ್ತಾಭಾರತಿ
ವಾರ್ತಾಭಾರತಿ
Next Story
X