Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಇಂದಿನ ದಿನಗಳಲ್ಲಿ ನೈತಿಕ, ಮಾನವೀಯ...

ಇಂದಿನ ದಿನಗಳಲ್ಲಿ ನೈತಿಕ, ಮಾನವೀಯ ಮೌಲ್ಯಾಧಾರಿತ ಶಿಕ್ಷಣ ಅಗತ್ಯವಿದೆ: ನಮೋಶಿ

ವಾರ್ತಾಭಾರತಿವಾರ್ತಾಭಾರತಿ25 April 2025 10:15 AM IST
share
ಇಂದಿನ ದಿನಗಳಲ್ಲಿ ನೈತಿಕ, ಮಾನವೀಯ ಮೌಲ್ಯಾಧಾರಿತ ಶಿಕ್ಷಣ ಅಗತ್ಯವಿದೆ: ನಮೋಶಿ

ಕಲಬುರಗಿ: ಇಂದಿನ ದಿನಗಳಲ್ಲಿ ಎಲ್ಲರಿಗೂ ನೈತಿಕ, ಮಾನವೀಯ ಮೌಲ್ಯಾಧಾರಿತ ಶಿಕ್ಷಣ ಅಗತ್ಯವಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಹೇಳಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಸ್ಯಾಕ್ ಬಿಲ್ಡಿಂಗ್ ನಲ್ಲಿ ನಡೆದ ಎಐಸಿಟಿಇ ದೇಹಲಿ ಪ್ರಾಯೋಜಿತ 3 ದಿನಗಳ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ ಪ್ರೋಗ್ರಾಂ ಆನ್ ಯುನಿವರ್ಸಲ್ ಹ್ಯೂಮನ್ ವ್ಯಾಲ್ಯೂ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಪ್ರಸ್ತುತ ಶಿಕ್ಷಣ ವ್ಯವಸ್ಥೆಯು ಹೆಚ್ಚಾಗಿ ಕೌಶಲ್ಯ ಆಧಾರಿತವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಮೇಲೆ ಪ್ರಮುಖ ಒತ್ತು ನೀಡಲಾಗಿದೆ. ಆದಾಗ್ಯೂ, ವಿಜ್ಞಾನ ಮತ್ತು ತಂತ್ರಜ್ಞಾನವು ಸೌಲಭ್ಯಗಳ ವಿಷಯದಲ್ಲಿ ಮೌಲ್ಯಯುತವೆಂದು ಪರಿಗಣಿಸಲ್ಪಟ್ಟದ್ದನ್ನು ಸಾಧಿಸಲು ಸಾಧನಗಳನ್ನು ಒದಗಿಸಲು ಮಾತ್ರ ಸಹಾಯ ಮಾಡುತ್ತದೆ. ಮೌಲ್ಯ ಶಿಕ್ಷಣ ಹಾಗೂ ನೈತಿಕ ಶಿಕ್ಷಣ ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಕಾಣೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಶಿಕ್ಷಕರು ನಿರಂತರ ಅಧ್ಯಯನ ಕೈಗೊಂಡು ಉನ್ನತ ಗುರಿಮುಟ್ಟಲು ವಿದ್ಯಾರ್ಥಿಗಳಿಗೆ ಸಹಾಯ ಮಾಡಬೇಕಾಗಿರುವದು ಆದ್ಯ ಕರ್ತವ್ಯವಾಗಿದೆ. ಇಂದಿನ ದಿನಗಳಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ನಿರಂತರವಾಗಿ ನವನವೀನ ಕೌಶಲ್ಯಗಳನ್ನು ಬಳಸಿಕೊಂಡು ತಾವು ಬೆಳೆಯುವದರೊಂದಿಗೆ ಸಮಾಜ ಸೇವೆಯೊಂದಿಗೆ ಸಂಸ್ಥೆಯ ಅಭಿವೃದ್ಧಿಗೆ ಕಾರಣವಾಗಬೇಕು ಎಂದು ಹೇಳಿದರು.

30 ವರ್ಷಗಳ ಹಿಂದೆ ಶಿಕ್ಷಣದಲ್ಲಿ ಮಾನವೀಯ ಮೌಲ್ಯಗಳ ಶಿಕ್ಷಣದ ಅವಶ್ಯಕತೆ ಇರಲಿಲ್ಲ, ಏಕೆಂದರೆ ಅಂದಿನ ಶಿಕ್ಷಣ ಹಾಗೂ ಶಿಕ್ಷಕರು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಆದರೆ ಇಂದು ಶಿಕ್ಷಣದಲ್ಲಿ ಮಾನವೀಯ ಮೌಲ್ಯಗಳನ್ನು ಬೋಧಿಸುವುದು ಅನಿವಾರ್ಯ ಪರಿಸ್ಥಿತಿ ಬಂದೋದಗಿದೆ, ಸುಮಾರು 200 ಕ್ಕಿಂತಲೂ ಹೆಚ್ಚು ಈ ವಿಷಯದ ಕುರಿತ ಕೋರ್ಸ್ ಗಳಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಐಸಿಟಿಇ ಯುನಿವರ್ಸಲ್ ಹ್ಯೂಮನ್ ವ್ಯಾಲ್ಯೂ ವಿಭಾಗದ ರಾಷ್ಟ್ರೀಯ ಸಮಿತಿಯ ವೈಸ್ ಚೇರ್ಮನ್ ರಾಜು ಅಸ್ಥಾನಾ, ಸಂಪನ್ಮೂಲ ವ್ಯಕ್ತಿಗಳಾದ ಔರಂಗಾಬಾದ್ ನ ಉಮೇಶ್ ಜಾಧವ್, ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ.ಕೈಲಾಸ ಪಾಟೀಲ್, ಆಡಳಿತ ಮಂಡಳಿ ಸದಸ್ಯರಾದ ಡಾ.ಶರಣಬಸಪ್ಪ ಹರವಾಳ, ಅನಿಲಕುಮಾರ ಮರಗೋಳ, ನಾಗಣ್ಣ ಘಂಟಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ಡಾ.ಎಸ್ ಆರ್ ಪಾಟೀಲ್, ಸಹ ಸಂಯೋಜಕರಾದ ಡಾ. ಅನಿತಾ ಮಾನೆ, ಸೌಮ್ಯ ಪರಿವೀಕ್ಷಕರಾದ ಡಾ.ಶಶಿಕಾಂತ ಕುರೋಡಿ ಕಾರ್ಯಕ್ರಮದ ಸಂಘಟಕರಾದ ಡಾ.ಅಮರೇಶ ಪಾಟೀಲ್, ಶ್ರೀಶೈಲ್ ಪತಾಟೆ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು, ಕಾರ್ಯದರ್ಶಿ ಉದಯಕುಮಾರ್ ಚಿಂಚೋಳಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X