Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ನಾಡಿನ ಸಮೃದ್ಧಿಗೆ ನ್ಯಾಯಯುತ ತೆರಿಗೆ...

ನಾಡಿನ ಸಮೃದ್ಧಿಗೆ ನ್ಯಾಯಯುತ ತೆರಿಗೆ ಹಂಚಿಕೆಗೆ ಚಳುವಳಿ ಅಗತ್ಯ: ಪ್ರಿಯಾಂಕ್ ಖರ್ಗೆ

ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ1 Nov 2024 2:33 PM IST
share
ನಾಡಿನ ಸಮೃದ್ಧಿಗೆ ನ್ಯಾಯಯುತ ತೆರಿಗೆ ಹಂಚಿಕೆಗೆ ಚಳುವಳಿ ಅಗತ್ಯ: ಪ್ರಿಯಾಂಕ್ ಖರ್ಗೆ

ಕಲಬುರಗಿ: ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ನ್ಯಾಯಯುತವಾಗಿ ತೆರಿಗೆಯಲ್ಲಿನ ಪಾಲು ನೀಡದೇ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ತೋರುತ್ತಿದ್ದು, ನಮ್ಮ ಏಳಿಗೆಗೆ ನಾವು ದುಡಿದು ಕಳುಹಿಸಿದ ತೆರಿಗೆಯಲ್ಲಿ ನಮ್ಮ ಪಾಲಿನ ಕೂಲಿ (ತೆರಿಗೆ ಹಣ) ಪಡೆಯಲು ಚಳುವಳಿ ಮಾಡುವ ಅನಿವಾರ್ಯತೆ ಒದಗಿಬಂದಿದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಶುಕ್ರವಾರ ಕಲಬುರಗಿ ನಗರದ ಗಂಜ್ ಪ್ರದೇಶದ ನಗರೇಶ್ವರ ಶಾಲೆಯಲ್ಲಿ ಕಲಬುರಗಿ ಜಿಲ್ಲಾಡಳಿತದಿಂದ ಆಯೋಜಿಸಿದ 69ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟçಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಹನ್ನೆರಡನೇ ಶತಮಾನದಲ್ಲಿಯೇ ಸಾಮಾಜಿಕ ಕ್ರಾಂತಿ ಮತ್ತು ವಚನ ಚಳುವಳಿಗೆ ನಾಂದಿ ಹಾಡಿದ ನಾಡು ನಮ್ಮದಾಗಿದೆ. ಭಕ್ತಿ ಚಳುವಳಿ, ಸ್ವಾತಂತ್ರ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿ, ಗೋಕಾಕ್ ಚಳುವಳಿ, ಅಪ್ಪಿಕೋ ಚಳುವಳಿ, ದಲಿತ ಚಳುವಳಿ, 371ಜೆ ಚಳುವಳಿ ಹೀಗೆ ಅನೇಕ ಚಳುವಳಿ ಕಂಡ ನಾವು ಇದೀಗ ನಮ್ಮ ನಾಡಿನ ಪ್ರಗತಿಗೆ ಕೇಂದ್ರದಿಂದ ಬರಬೇಕಾದ ತೆರಿಗೆಯ ಪಾಲು ಪಡೆಯಲು ಚಳುವಳಿ ಮಾಡಬೇಕಿದೆ. ಬಸವಣ್ಣನವರು ಹೇಳಿದಂತೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬಂತೆ ಕೇಂದ್ರ ಸರ್ಕಾರ ನಮ್ಮ ಪಾಲಿನ ತೆರಿಗೆ ನೀಡಬೇಕು. ಸಾರ್ವಜನಿಕರು, ಪ್ರಜ್ಞಾವಂತರು ಧ್ವನಿ ಎತ್ತಬೇಕಿದೆ ಎಂದರು.

ಶ್ರೀಮಂತ ಇರಿಹಾಸ ಹೊಂದಿರುವ ಕನ್ನಡ ನಾಡು ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿದೆ. ಕಲೆ, ಸಾಹಿತ್ಯ, ಭಾಷೆ, ಆಹಾರ ಪದ್ದತಿಯಿಂದ ಇಡೀ ವಿಶ್ವದ ಗಮನ ಸೆಳೆದ ಕರ್ನಾಟಕವು ದೇಶದ ಪ್ರಗತಿಗೆ ಅಭೂತಪೂರ್ವ ಕೊಡುಗೆ ನೀಡಿದೆ. ಜಿ.ಎಸ್.ಟಿ. ತೆರಿಗೆ ಸಂಗ್ರಹಣೆಯಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕ ಕೌಶಲ್ಯದ ರಾಜ್ಯಧಾನಿಯಾಗಿದೆ. ಎಫ್.ಡಿ.ಐ.ನಲ್ಲಿ ಶೇ.32 ಹೂಡಿಕೆ ನಮ್ಮಲ್ಲಾಗುತ್ತಿದೆ. ಐ.ಟಿ., ರೇಷ್ಮೆ ರಫ್ತಿನಲ್ಲಿ ಬಹುಪಾಲು ನಮ್ಮದೆಯಾಗಿದೆ. ನವೋದ್ಯಮ ಸ್ಥಾಪನೆಯಲ್ಲಿ 4ನೇ ಸ್ಥಾನ ನಮ್ಮದು ಎಂದು ರಾಜ್ಯದ ಸಾಧನೆಗಳನ್ನು ವಿವರಿಸಿದರು.

ಹನ್ನೊಂದನೇ ಹಣಕಾಸು ಆಯೋಗದ ಪ್ರಕಾರ ರಾಜ್ಯದಿಂದ 100 ರೂ. ತೆರಿಗೆ ಕಟ್ಟಿದರೆ ಮರಳಿ ರಾಜ್ಯಕ್ಕೆ 21 ರೂ. 10 ಪೈಸೆ ಬರುತ್ತಿತ್ತು. ಇದೀಗ 15ನೇ ಹಣಕಾಸು ಆಯೋಗದ ಪ್ರಕಾರ 100 ರೂ. ತೆರಿಗೆ ಕಟ್ಟಿದರೆ ಮರಳಿ ರಾಜ್ಯಕ್ಕೆ ಬರುತ್ತಿರುವುದು ಕೇವಲ 15 ರೂ. 8 ಪೈಸೆ. ಅಂದರೆ ಸುಮಾರು ಶೇ.5.3 ತೆರಿಗೆ ಕಡಿಮೆಯಾಗಿದೆ. ವಾರ್ಷಿಕ ಸುಮಾರು 78,000 ಕೋಟಿ ರೂ. ತೆರಗಿ ಹಣ ರಾಜ್ಯಕ್ಕೆ ಬರುತ್ತಿಲ್ಲ.ರಿಷ್ಟು ಮೊತ್ತದ ಬೃಹತ್ ಹಣ ನಾಡಿಗೆ ಬಂದಲ್ಲಿ ರಾಜ್ಯದಲ್ಲಿ ಮತ್ತಷ್ಟು ಮೂಲಸೌಕರ್ಯ ಬಳಗೊಳಿಸಬಹುದು. ಉದ್ಯೋಗ ಸೃಷ್ಠಿಬಹುದು ಎಂದರು.

ಉತ್ತರ ಪ್ರದೇಶ ರಾಜ್ಯ ಕೇಂದ್ರ ಸರ್ಕಾರಕ್ಕೆ 100 ರೂ. ತೆರಿಗೆ ಕಟ್ಟಿದರೆ 333 ರೂ., ಮಧ್ಯಪ್ರದೇಶ 100 ರೂ. ಗಳಿಗೆ 297 ರೂ., ಬಿಹಾರ 100 ರೂ. ಗಳಿಗೆ 927ರೂ., ಓರಿಸ್ಸಾ 100 ರೂ. ಗಳಿಗೆ 187 ರೂ. ಮರಳಿ ಪಡೆಯುತ್ತಿದೆ. ಆದರೆ ಕರ್ನಾಟಕ ಮಾತ್ರ 100 ರೂ. ಗಳಿಗೆ ಕೇವಲ 12 ರೂ. ಪಡೆಯುತ್ತಿದೆ. ಇದು ಕೇಂದ್ರದಿಂದ ಆಗುತ್ತಿರುವ ಅನ್ಯಾಯ. ಇದಕ್ಕೆ ಧ್ವನಿ ಎತ್ತಬೇಕಿದೆ. ನಾಡಿನ ಏಕೀಕರಣಕ್ಕೆ ದುಡಿದ ಮಹನೀಯರಿಗೆ ಗೌರವ ಸಲ್ಲಿಸಬೇಕಾದರೆ ನಾಡಿನ ಪ್ರಗತಿಗೆ ತೆರಿಗೆ ಅನ್ಯಾಯದ ವಿರುದ್ಧ ಚಳುವಳಿ ರೂಪಿಸಬೇಕಿದೆ. ಇಂದು ಭಾರತ 3ನೇ ಅತೀ ದೊಡ್ಡ ಆರ್ಥಿಕ ರಾಷ್ಟçವಾಗಿದ್ದರೆ ಅದರ ಹಿಂದೆ ಕನ್ನಡಿಗರ ಬೆವರು ಇದೆ ಎಂದರು.

ಕ್ಷೇತ್ರ ಪುನರ್ ವಿಂಗಡಣೆಯಿಂದ ರಾಜ್ಯಕ್ಕೆ ಅನ್ಯಾಯ:

ದೇಶದಲ್ಲಿ ಇದೀಗ ಕ್ಷೇತ್ರ ಪುನರ್ ವಿಂಗಡಣೆಯ ಮಾತು ಜೋರಾಗುತ್ತಿದೆ. ಪುನರ್ ವಿಂಗಡಣೆ ಜನಸಂಖ್ಯೆ ಆಧಾರದ ಮೇಲೆ ಮಾಡಲಾಗುತ್ತದೆ. ಈಗಿನ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯಯಾದರೆ ಪ್ರಸ್ತುತ ಇರುವ ಲೋಕಸಭಾ ಸದಸ್ಯರ ಸಂಖ್ಯೆ 543 ರಿಂದ 846ಕ್ಕೆ ತಲುಪಲಿದೆ. ಇದರಲ್ಲಿ ಉತ್ತರ ಭಾರತದಲ್ಲಿ 294 ಮತ್ತು ದಕ್ಷಿಣ ಭಾರತದಲ್ಲಿ ಕೇವಲ 23 ಸಂಖ್ಯೆ ಹೆಚ್ಚಲಿದೆ. ಇದರಿಂದ ನಾಡಿನ ಧ್ವನಿ ದಿಲ್ಲಿಗೆ ಮುಟ್ಟಿಸುವುದು ಕಷ್ಟವಾಗುವುದರಿಂದ ಪುನರ್ ವಿಂಗಡಣೆ ಅನಾಹುತ ತಪ್ಪಿಸಬೇಕಿದೆ ಎಂದರು.

ಕ್ಷೇತ್ರಗಳ ಪುನರ್ ವಿಂಗಡಣೆಯಾದರೆ ದಕ್ಷಿಣ ಭಾರತದ ಆಂಧ್ರ ಪ್ರದೇಶ ರಾಜ್ಯ 25 ರಿಂದ 20ಕ್ಕೆ, ತಮಿಳನಾಡು 39 ರಿಂದ 30ಕ್ಕೆ, ಕರ್ನಾಟಕ 28 ರಿಂದ 24ಕ್ಕೆ, ತೆಲಂಗಾಣಾ 17 ರಿಂದ 15ಕ್ಕೆ ಸಂಸತ್ ಸದಸ್ಯರ ಸ್ಥಾನ ಕುಸಿಯಲಿದೆ. ಉತ್ತರ ಭಾರತದಲ್ಲಿ ಜನಸಂಖ್ಯೆ ಹೆಚ್ಚಿರುವ ಕಾರಣ ಅಲ್ಲಿ ಸದಸ್ಯರ ಸಂಖ್ಯೆ ಸಹ ಹೆಚ್ಚಳವಾಗಲಿದೆ. ಪ್ರಗತಿ ಪರ ರಾಜ್ಯವನ್ನಾಗಿಸಲು ಜನಸಂಖ್ಯೆ ನಿಯಂತ್ರಿಸಿ ಅಭಿವೃದ್ಧಿಪರ ದಾಪುಗಾಲು ಇಡುತ್ತಿರುವ ನಮ್ಮ ರಾಜ್ಯಗಳಿಗೆ ಇದರಿಂದ ಅನ್ಯಾಯವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಕುರಿತು ಹಳ್ಳಿಯಿಂದ ದಿಲ್ಲಿ ವರೆಗೆ ಕೂಗು ಏಳಬೇಕಿದೆ ಎಂದರು.

ಭುವನೇಶ್ವರಿ ಪ್ರತಿಮೆ ಸ್ಥಾಪನೆಗೆ ಸೂಚನೆ:

ಪ್ರತಿ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಯ ಫ್ಲೆಕ್ಸ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಪರಿಪಾಠಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಮುಂದಿನ ಒಂದು ವರ್ಷದೊಳಗೆ ಶಾಸಕರ ಅಭಿಪ್ರಾಯ ಪಡೆದು ಕಲಬುರಗಿ ನಗರದ ಯಾವುದಾದರು ವೃತ್ತದಲ್ಲಿ ತಾಯಿ ಭುವನೇಶ್ವರಿಯ ಪ್ರತಿಮೆ ಸ್ಥಾಪನೆ ಮಾಡಬೇಕೆಂದು ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಾಲ್ವರಿಗೆ ಸನ್ಮಾನ:

ಸುಗಮ ಸಂಗೀತ ಕ್ಷೇತ್ರದಲ್ಲಿನ ಕೊಡುಗೆಗೆ ಬಸಯ್ಯ ಬಿ. ಗುತ್ತೇದಾರ, ಜಾನಪದ-ತತ್ವಪದದಲ್ಲಿನ ಸೇವೆಗೆ ಸೂರ್ಯಕಾಂತ ಪೂಜಾರಿ, ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನಾಧರಿಸಿ ಸಾಹಿತಿ ಭೀಮಣ್ಣ ಬೋನಾಳ ಹಾಗೂ ಡೊಳ್ಳು ಕುಣಿತ ಕ್ಷೇತ್ರದಿಂದ ಸಂಜು ಬರಗಾಲಿ ಅವರಿಗೆ ಜಿಲ್ಲಾಡಳಿತ ವತಿಯಿಂದ ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಸ್ಥಬ್ದಚಿತ್ರಗಳ ಮೆರವಣಿಗೆ:

ನಂತರ ನಗರೇಶ್ವರ ಶಾಲೆಯಿಂದ ಆರಂಭವಾದ ವಿವಿಧ ಇಲಾಖೆಯ ಪ್ರಗತಿ ಬಿಂಬಿಸುವ ಸ್ಥಬ್ದಚಿತ್ರಗಳ ಮೆರವಣಿಗೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು. ಮೆರವಣಿಗೆಯುದ್ದಕ್ಕೂ ಕಲಾ ತಂಡಗಳ ಅದ್ಭುತ ಕಲಾ ಪ್ರರ್ದಶನ ಕಂಡುಬಂತು. ನೂರಾರು ಸಂಖ್ಯೆಯಲ್ಲಿ ಶಾಲಾ ಮಕ್ಕಳು ಭಾಗಿಯಾದರು.

ಈ ಸಂದರ್ಭದಲ್ಲಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕರಾದ ಶಶೀಲ ನಮೋಶಿ, ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಕಲಬುರಗಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಅಪರ ಜಿಲ್ಲಾದಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಸೇರಿದಂತೆ ಅನೇಕ ಜಿಲ್ಲಾ ಮಟ್ಟದ ಅಧಿಕಾರಿಗಳು, ಕ್ನನಡಪರ ಹೋರಾಟಗಾರರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು, ಶಾಲಾ ಮಕ್ಕಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X