Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಡಿಸೆಂಬರ್ 11ರಂದು ‘ಪಬ್ಬಾರ್’ ಸಿನಿಮಾ...

ಡಿಸೆಂಬರ್ 11ರಂದು ‘ಪಬ್ಬಾರ್’ ಸಿನಿಮಾ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ5 Nov 2026 3:34 PM IST
share
ಡಿಸೆಂಬರ್ 11ರಂದು ‘ಪಬ್ಬಾರ್’ ಸಿನಿಮಾ ಬಿಡುಗಡೆ

ಕಲಬುರಗಿ, ನ. 5: ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆಯ ನಿರೀಕ್ಷೆ ಮೂಡಿಸಿರುವ ‘ಪಬ್ಬಾರ’ ಸಿನಿಮಾ ಡಿಸೆಂಬರ್ 11ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ನಟ ಧೀರನ್ ರಾಮಕುಮಾರ್ ತಿಳಿಸಿದರು.

ನಗರದ ಲುಂಬಿನಿ ಗ್ರ್ಯಾಂಡ್ ಹೋಟೆಲ್‌ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರಕಥೆ ಮತ್ತು ನಿರ್ಮಾಣದಲ್ಲಿ ಡಾ. ಶಿವರಾಜಕುಮಾರ್ ಅವರ ಪಾತ್ರವಿದೆ ಎಂದು ಹೇಳಿದರು.

ಚಿತ್ರದಲ್ಲಿ ಅಮೃತಾ ಪ್ರೇಮ್ ನಾಯಕಿಯಾಗಿ ನಟಿಸಿದ್ದು, ಭರತ್ ಜಿ.ವಿ. ಪ್ರಮುಖ ಪಾತ್ರದಲ್ಲಿದ್ದಾರೆ. ಸಂಪೂರ್ಣ ಅಡ್ವೆಂಚರಸ್ ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರದಲ್ಲಿ ಪ್ರಬುದ್ಧ ಪ್ರೇಮಕಥೆಯೂ ಇರಲಿದೆ. ಸುಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು, ಪ್ರತಿಯೊಂದು ಹಾಡು ಕಥೆಗೆ ಪೂರಕವಾಗಿ ಮೂಡಿಬಂದಿದೆ ಎಂದರು.

ಮೈಸೂರು, ಬೆಂಗಳೂರು, ಕಾಸರಗೋಡು, ಹಿಮಾಚಲ ಪ್ರದೇಶ, ವಾರಣಾಸಿ ಹಾಗೂ ಜೈಪುರ ಸೇರಿದಂತೆ ದೇಶದ ವಿವಿಧ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂದು ತಿಳಿಸಿದರು.

ಚಿತ್ರದ ಪ್ರಚಾರ ಕಾರ್ಯ ಈಗಾಗಲೇ ಆರಂಭವಾಗಿದ್ದು, ರಾಜ್ಯದ ಕಾಲೇಜುಗಳು, ಉದ್ಯಾನಗಳು, ಚಿತ್ರಮಂದಿರಗಳು ಹಾಗೂ ಜನಸಂದಣಿ ಹೆಚ್ಚಿರುವ ಸ್ಥಳಗಳಿಗೆ ಭೇಟಿ ನೀಡಿ ಚಿತ್ರತಂಡ ಪ್ರಚಾರ ನಡೆಸುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ರಾಜ್ಯಾದ್ಯಂತ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ದೊರೆಯುವ ವಿಶ್ವಾಸವಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಡಾ. ರಾಜಕುಮಾರ್ ಹಾಗೂ ಡಾ. ಶಿವರಾಜಕುಮಾರ್ ಅಭಿಮಾನಿಗಳ ಮುಖಂಡ ಆನಂದ ತೆಗನೂರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ್ ಬಡಿಗೇರ್, ಭರತ್ ಜಿ.ವಿ. ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X