Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಕೋಟೆ ಪುನಶ್ಚೇತನಕ್ಕೆ 20 ಕೋಟಿ...

ಕಲಬುರಗಿ ಕೋಟೆ ಪುನಶ್ಚೇತನಕ್ಕೆ 20 ಕೋಟಿ ರೂ. ಯೋಜನೆ: ಕೇಂದ್ರ ಸಚಿವರನ್ನು ಭೇಟಿಯಾಗಿ ಸಂಸದ ರಾಧಾಕೃಷ್ಣ ಮನವಿ

ವಾರ್ತಾಭಾರತಿವಾರ್ತಾಭಾರತಿ10 Aug 2026 11:57 PM IST
share
ಕಲಬುರಗಿ ಕೋಟೆ ಪುನಶ್ಚೇತನಕ್ಕೆ 20 ಕೋಟಿ ರೂ. ಯೋಜನೆ: ಕೇಂದ್ರ ಸಚಿವರನ್ನು ಭೇಟಿಯಾಗಿ ಸಂಸದ ರಾಧಾಕೃಷ್ಣ ಮನವಿ

ಕಲಬುರಗಿ: ನಗರದ ಐತಿಹಾಸಿಕ ಕಲಬುರಗಿ ಕೋಟೆಯ ಸಂರಕ್ಷಣೆ ಮತ್ತು ಪುನಶ್ಚೇತನಕ್ಕಾಗಿ ರೂಪಿಸಲಾದ ₹20 ಕೋಟಿ ವೆಚ್ಚದ ಯೋಜನೆಗೆ ತಕ್ಷಣದ ಆಡಳಿತಾತ್ಮಕ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದಾರೆ.

ಅಮೃತ್ 2.0 (AMRUT 2.0) ಯೋಜನೆಯಡಿ ಈ ಯೋಜನೆಯನ್ನು ಪ್ರಸ್ತಾಪಿಸಲಾಗಿದ್ದು, ಕೋಟೆಯ ಕಂದಕದ ಜಲಮೂಲ ಮರುಜೀವಗೊಳಿಸುವುದು, ಉದ್ಯಾನವನ ಅಭಿವೃದ್ಧಿ, ಭೂದೃಶ್ಯ ನಿರ್ಮಾಣ (ಲ್ಯಾಂಡ್‌ಸ್ಕೇಪಿಂಗ್), ಸಸಿ ನೆಡುವುದು ಹಾಗೂ ವಿವಿಧ ಪರಿಸರ ಸುಧಾರಣಾ ಕಾಮಗಾರಿಗಳನ್ನು ಒಳಗೊಂಡಿದೆ. ಸ್ಮಾರಕವನ್ನು ಸಂರಕ್ಷಿಸುವುದರ ಜೊತೆಗೆ ಇದನ್ನು 'ಹಸಿರು ಪಾರಂಪರಿಕ ತಾಣ'ವಾಗಿ (Green Heritage Landmark) ಅಭಿವೃದ್ಧಿಪಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಸಂಸದರು ಈ ಸಂದರ್ಭದಲ್ಲಿ ಕೇಂದ್ರ ಸಚಿವರಿಗೆ ವಿವರಿಸಿದರು.

ಈ ಪ್ರಸ್ತಾವನೆಯು ಪ್ರಸ್ತುತ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ASI) ಕೇಂದ್ರ ಕಚೇರಿಯಲ್ಲಿ ಬಾಕಿಯಿದ್ದು, ಕೇಂದ್ರ ಸಂಸ್ಕೃತಿ ಸಚಿವರು ಮಧ್ಯಪ್ರವೇಶಿಸಿ ಶೀಘ್ರ ಆಡಳಿತಾತ್ಮಕ ಮಂಜೂರಾತಿ ದೊರಕಿಸಿಕೊಡಲು ಎಎಸ್‌ಐ ಜೊತೆ ಸಮನ್ವಯ ಸಾಧಿಸಬೇಕೆಂದು ಸಂಸದರು ಈ‌ ಸಂದರ್ಭದಲ್ಲಿ ಒತ್ತಾಯಿಸಿದರು.

ಕಲಬುರಗಿಯ ಶ್ರೀಮಂತ ಐತಿಹಾಸಿಕ ಪರಂಪರೆಯನ್ನು ರಕ್ಷಿಸುವುದರ ಜೊತೆಗೆ ಪ್ರವಾಸೋದ್ಯಮ ಪ್ರೋತ್ಸಾಹ, ಪರಿಸರ ಸುಧಾರಣೆ ಹಾಗೂ ಪ್ರಾದೇಶಿಕ ಅಭಿವೃದ್ಧಿಗೆ ಈ ಉಪಕ್ರಮವು ಪ್ರಮುಖ ಬಲ ನೀಡಲಿದೆ ಎಂದು ರಾಧಾಕೃಷ್ಣ ದೊಡ್ಡಮನಿ‌ ಈ ಸಂದರ್ಭದಲ್ಲಿ ಆಶಾಭಾವ ವ್ಯಕ್ತಪಡಿಸಿದರು.

Tags

KalaburagiRadhakrishna Doddamani
share
ವಾರ್ತಾಭಾರತಿ
ವಾರ್ತಾಭಾರತಿ
Next Story
X