Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ11 May 2026 5:21 PM IST
share
ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಬ್ಯಾಚಿನ ಐಎಎಸ್ ಅಧಿಕಾರಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಹೂಗುಚ್ಚ ನೀಡಿ ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಫೌಝಿಯಾ ತರನ್ನುಮ್ ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರಾಗಿ ನಿಯುಕ್ತಿಗೊಳಿಸಲಾಗಿದೆ. ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ಅವರು ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದರು.

ನೂತನ ಜಿಲ್ಲಾಧಿಕಾರಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ ಅವರು ಇದುವರೆಗೆ ಹಣಕಾಸು ಇಲಾಖೆಯ (ಬಜೆಟ್ ಮತ್ತು ಸಂಪನ್ಮೂಲ) ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮುಂದಿನ ಆದೇಶದವರೆಗೆ ಅವರು ಕಲಬುರಗಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಜನಸ್ನೇಹಿ ಅಡಳಿತಕ್ಕೆ ಒತ್ತು:

ಅಧಿಕಾರ ವಹಸಿಕೊಂಡ ನಂತರ ಮಾತನಾಡಿದ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು, ಸಾರ್ವಜನಿಕರ ಸಮಸ್ಯೆಗ ಸ್ಪಂದಿಸುವ ಮೂಲಕ ಜನಸ್ನೇಹಿ ಆಡಳಿತಕ್ಕೆ ಒತ್ತು ನೀಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತಿದ್ದು, ಜಿಲ್ಲೆಯಲ್ಲಿ ಆರೋಗ್ಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಜಿಲ್ಲೆಯಲ್ಲಿ ಅನೇಕ ಬೃಹತ್ ಯೋಜನೆಗಳು ಜಾರಿಯಲ್ಲಿದ್ದು, ಅದೆಲ್ಲವನ್ನು ಚುರುಕುಗೊಳಿಸಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು ಎಂದರು.

ಇದಲ್ಲದೆ ಉದ್ಯೋಗ ದೊರಕಿಸುವ ಕೈಗಾರಿಕೆಗಳ ಸ್ಥಾಪನೆ, ಸ್ಥಳೀಯ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿ ಸೇರಿದಂತೆ ಒಟ್ಟಾರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಗುರಿ ಹೊಂದಿದ್ದು, ಜಿಲ್ಲೆಯ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಸಾರ್ವಜನಿಕರು ಸಹಕಾರ ನೀಡಬೇಕೆಂದು‌ ಡಿಸಿ ಅವರು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತರಾದ ಸಾಹಿತ್ಯ ಆಲದಕಟ್ಟಿ, ಪ್ರಭುರೆಡ್ಡಿ ಸೇರಿದಂತೆ ತಾಲೂಕಿನ ತಹಶೀಲ್ದಾರರು, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದು ನೂತನ ಜಿಲ್ಲಾಧಿಕಾರಿಗಳಿಗೆ ಶುಭಕೋರಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X