Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮುಂಬೈ–ಬೆಂಗಳೂರು ವಂದೇ ಭಾರತ್‌ ಸ್ಲೀಪರ್...

ಮುಂಬೈ–ಬೆಂಗಳೂರು ವಂದೇ ಭಾರತ್‌ ಸ್ಲೀಪರ್ ರೈಲು ಕಲಬುರಗಿ ಮಾರ್ಗವಾಗಿ ಸಂಚಾರ

ವಾರ್ತಾಭಾರತಿವಾರ್ತಾಭಾರತಿ13 April 2026 7:47 PM IST
share
ಮುಂಬೈ–ಬೆಂಗಳೂರು ವಂದೇ ಭಾರತ್‌ ಸ್ಲೀಪರ್ ರೈಲು ಕಲಬುರಗಿ ಮಾರ್ಗವಾಗಿ ಸಂಚಾರ

ಕಲಬುರಗಿ : ಮುಂಬೈ–ಬೆಂಗಳೂರು ನಡುವಿನ ವಂದೇ ಭಾರತ ಸ್ಲೀಪರ್ ರೈಲು ಕಲಬುರಗಿ ಮಾರ್ಗವಾಗಿ ಸಂಚರಿಸಲಿರುವ ಮಹತ್ವದ ನಿರ್ಧಾರಕ್ಕೆ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಹರ್ಷ ವ್ಯಕ್ತಪಡಿಸಿದೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇತ್ತೀಚೆಗೆ ಮುಂಬೈ–ಬೆಂಗಳೂರು ನಡುವೆ ವಂದೇ ಭಾರತ ಸ್ಲೀಪರ್ ರೈಲು ಆರಂಭಿಸುವುದಾಗಿ ಘೋಷಿಸಿದ್ದರೂ, ಮಾರ್ಗದ ಬಗ್ಗೆ ಸ್ಪಷ್ಟತೆ ಇಲ್ಲದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿತ್ತು.

ಕಲಬುರಗಿ–ಬೆಂಗಳೂರು ನಡುವೆ ವೇಗವಾದ ರೈಲು ಸಂಪರ್ಕ ಕಲ್ಪಿಸುವುದು ಈ ಭಾಗದ ಜನರ ದೀರ್ಘಕಾಲದ ಬೇಡಿಕೆಯಾಗಿದ್ದು, ಈ ಕುರಿತು ಕೆಕೆಸಿಸಿಐ ಹಲವು ಬಾರಿ ಕೇಂದ್ರ ರೈಲ್ವೆ ಸಚಿವಾಲಯದ ಗಮನ ಸೆಳೆದಿತ್ತು.

ಈ ಸಂಬಂಧ 2025 ಡಿಸೆಂಬರ್ 17ರಂದು ಕೆಕೆಸಿಸಿಐ ನಿಯೋಗ ದೆಹಲಿಯಲ್ಲಿ ರೈಲ್ವೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಬಳಿಕ 2026 ಏಪ್ರಿಲ್ 8ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ ಹೊಸ ರೈಲು ಸೇವೆ ಆರಂಭಿಸುವಂತೆ ಒತ್ತಾಯಿಸಿತ್ತು.

ಇದೀಗ ಏಪ್ರಿಲ್ 13ರಂದು ಪ್ರಹ್ಲಾದ್ ಜೋಶಿ ಅವರು ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಎಂ. ಪಪ್ಪಾ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿ, ಮುಂಬೈ–ಬೆಂಗಳೂರು ವಂದೇ ಭಾರತ ಸ್ಲೀಪರ್ ರೈಲು ಕಲಬುರಗಿ ಮಾರ್ಗವಾಗಿ ಸಂಚರಿಸಲಿದೆ ಎಂದು ತಿಳಿಸಿದ್ದಾರೆ.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ಹಾಗೂ ಪ್ರಹ್ಲಾದ್ ಜೋಶಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯನ್ನು ಐತಿಹಾಸಿಕ ಸಾಧನೆ ಎಂದು ಕೆಕೆಸಿಸಿಐ ಪರಿಗಣಿಸಿದ್ದು, ಮುಂಬೈ–ಕಲಬುರಗಿ–ಬೆಂಗಳೂರು ಸಂಪರ್ಕ ಬಲಗೊಳ್ಳಲಿದೆ. ಇದರಿಂದ ವ್ಯಾಪಾರ, ಕೈಗಾರಿಕೆ, ಉದ್ಯಮಗಳಿಗೆ ಉತ್ತೇಜನ ದೊರೆಯಲಿದ್ದು, ಪ್ರಯಾಣಿಕರಿಗೆ ವೇಗವಾದ ಹಾಗೂ ಸುಗಮ ಸಂಚಾರ ಸಾಧ್ಯವಾಗಲಿದೆ. ಜೊತೆಗೆ ಕಲ್ಯಾಣ ಕರ್ನಾಟಕ ಭಾಗದ ಆರ್ಥಿಕ ಅಭಿವೃದ್ಧಿಗೂ ಇದು ಮಹತ್ವದ ಉತ್ತೇಜನ ನೀಡಲಿದೆ ಎಂದು ಮಂಡಳಿ ವಿಶ್ವಾಸ ವ್ಯಕ್ತಪಡಿಸಿದೆ.

Tags

MumbaiBengaluruVande Bharat trainKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X