Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಬಿಜೆಪಿ ಕಚೇರಿಯಲ್ಲಿ ನಾರಾಯಣ...

ಕಲಬುರಗಿ | ಬಿಜೆಪಿ ಕಚೇರಿಯಲ್ಲಿ ನಾರಾಯಣ ಗುರು 172ನೇ ಜಯಂತಿ

ವಾರ್ತಾಭಾರತಿವಾರ್ತಾಭಾರತಿ28 Aug 2026 9:47 PM IST
share
ಕಲಬುರಗಿ | ಬಿಜೆಪಿ ಕಚೇರಿಯಲ್ಲಿ ನಾರಾಯಣ ಗುರು 172ನೇ ಜಯಂತಿ

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಬ್ರಹ್ಮಶ್ರೀ ನಾರಾಯಣ ಗುರು ಅವರ 172ನೇ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಪಕ್ಷದ ಸ್ಥಳೀಯ ಅಧ್ಯಕ್ಷ ವೀರಣ್ಣ ಯಾರಿ, ಶ್ರೀ ನಾರಾಯಣ ಗುರುಗಳನ್ನು ಪೂಜಿಸಿದರೆ ಸಾಲದು ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆದಾಗ ಮಾತ್ರ ಅವರ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದರು.

ನಾರಾಯಣ ಗುರುಗಳು ಸಮಾಜದಲ್ಲಿದ್ದ ಜಾತಿ ತಾರತಮ್ಯ ಎಂಬ ಅನಿಷ್ಟ ಪದ್ಧತಿ ವಿರುದ್ಧ ಜನರನ್ನು ಜಾಗೃತಗೊಳಿಸಿದರು. ಅವರ ಜೀವನದುದ್ದಕ್ಕೂ ಶೋಷಿತರ ಏಳಿಗೆಗಾಗಿ ಶ್ರಮಿಸಿದ್ದಾರೆ. ಅವರು ಅನೇಕ ಸಾಮಾಜಿಕ ಸುಧಾರಣೆಗಳನ್ನು ತಂದಿದ್ದಾರೆ. ಆದ್ದರಿಂದ ನಾವೆಲ್ಲರೂ ಗುರುಗಳ ತತ್ವ, ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಈಡಿಗ ಸಮಾಜದ ಯುವ ಮುಖಂಡ ಸಂತೋಷ ಗುತ್ತೆದಾರ ಮಾತನಾಡಿ, ಬುದ್ಧ, ಬಸವಣ್ಣರಂತೆ ಸಮಾನತೆಗಾಗಿ ಶಾಂತಿ ಮತ್ತು ಮಾನವತಾ ಸಂದೇಶಗಳನ್ನು ಸಾರಿದ್ದಾರೆ. ಶೋಷಿತ ಸಮುದಾಯದ ಜನರನ್ನು ಜಾಗೃತಗೊಳಿಸಿದ ನಾರಾಯಣ ಗುರುಗಳು ಪ್ರತ್ಯೇಕ ದೇಗುಲಗಳನ್ನು ಸ್ಥಾಪಿಸಿದರು. ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದರು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಯುವ ಮುಖಂಡ ವಿಠಲ ನಾಯಕ, ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್.ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ, ಮುಖಂಡರಾದ ಗಿರಿಮಲ್ಲಪ್ಪ ಕಟ್ಟಿಮನಿ, ಅರ್ಜುನ ಕಾಳೆಕರ, ಹರಿ ಗಲಾಂಡೆ, ಅಂಬದಾಸ ಜಾಧವ, ಯಂಕಮ್ಮ ಗೌಡಗಾಂವ, ಈಡಿಗ ಸಮಾಜದ ಮುಖಂಡರಾದ ಸೂರ್ಯಕಾಂತ ಗಢಕರ, ಮಲ್ಲಿಕಾರ್ಜುನ ಸಾತಖೇಡ, ಸಂತೋಷ ಗುತ್ತೆದಾರ, ದೀಪಕ ಸಾತಖೇಡ, ಬಾಬು ಗುತ್ತೆದಾರ, ಸುರೇಶ ಗುತ್ತೆದಾರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Tags

Narayana GuruBJP office
share
ವಾರ್ತಾಭಾರತಿ
ವಾರ್ತಾಭಾರತಿ
Next Story
X