Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ...

ಆಳಂದದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ30 Jun 2026 6:20 PM IST
share
ಆಳಂದದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ ಯಶಸ್ವಿ

ಆಳಂದ: ಮಕ್ಕಳನ್ನು ಜೀವಮಾನದ ಅಂಗವೈಕಲ್ಯದಿಂದ ರಕ್ಷಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನವನ್ನು ಆಳಂದ ಪಟ್ಟಣದಲ್ಲಿ ಯಶಸ್ವಿಯಾಗಿ ನಡೆಸಲಾಯಿತು.

ಅಭಿಯಾನದ ಅಂಗವಾಗಿ 28 ವಿಶೇಷ ತಂಡಗಳನ್ನು ರಚಿಸಿ, ಪಟ್ಟಣದ ವಿವಿಧ ವಾರ್ಡ್‌ಗಳು, ಬಸ್ ನಿಲ್ದಾಣ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ದರ್ಗಾ ಪ್ರದೇಶ ಸೇರಿದಂತೆ ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ವಿಶೇಷ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿ ಐದು ವರ್ಷದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ನೀಡಲಾಯಿತು.

ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಉಮಕಾಂತ್ ರಾಜಗಿರಿ ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಂಗೀತಾ ಪಾಟೀಲ, "ಪೋಲಿಯೊ ಸಂಪೂರ್ಣ ನಿರ್ಮೂಲನೆಗೆ ಪ್ರತಿಯೊಂದು ಮಗುವಿಗೂ ನಿಗದಿತ ದಿನದಂದು ಕಡ್ಡಾಯವಾಗಿ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಬೇಕು. ಈ ಹಿಂದೆ ಲಸಿಕೆ ಪಡೆದಿದ್ದ ಮಕ್ಕಳಿಗೂ ಪ್ರತಿಯೊಂದು ಪಲ್ಸ್ ಪೋಲಿಯೊ ಅಭಿಯಾನದ ವೇಳೆ ಮತ್ತೆ ಲಸಿಕೆ ನೀಡುವುದು ರೋಗನಿರೋಧಕ ಶಕ್ತಿಯನ್ನು ಮತ್ತಷ್ಟು ಬಲಪಡಿಸುತ್ತದೆ. ಆದ್ದರಿಂದ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಪೋಷಕರು ಜವಾಬ್ದಾರಿಯಿಂದ ಸಹಕರಿಸಬೇಕು" ಎಂದು ಮನವಿ ಮಾಡಿದರು.

ಅಭಿಯಾನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರು ಸಮನ್ವಯದಿಂದ ಕಾರ್ಯನಿರ್ವಹಿಸಿದರು. ಮನೆಗಳಲ್ಲಿ ಲಭ್ಯವಿರದ ಮಕ್ಕಳು ಹಾಗೂ ಪ್ರಯಾಣಿಕರ ಮಕ್ಕಳಿಗೂ ಲಸಿಕೆ ತಲುಪಿಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿತ್ತು.

Tags

Pulse PolioCampaign
share
ವಾರ್ತಾಭಾರತಿ
ವಾರ್ತಾಭಾರತಿ
Next Story
X