Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಹೊಸತನದ ಬದುಕಿಗೆ ಪ್ರೇರಣೆ...

ಕಲಬುರಗಿ| ಹೊಸತನದ ಬದುಕಿಗೆ ಪ್ರೇರಣೆ ನೀಡುವ ʼನೀಲಾಂಜನʼ ಗ್ರಂಥ: ಬಸವರಾಜ ಪಾಟೀಲ್ ಸೇಡಂ

ವಾರ್ತಾಭಾರತಿವಾರ್ತಾಭಾರತಿ6 July 2025 7:54 PM IST
share
ಕಲಬುರಗಿ| ಹೊಸತನದ ಬದುಕಿಗೆ ಪ್ರೇರಣೆ ನೀಡುವ ʼನೀಲಾಂಜನʼ ಗ್ರಂಥ: ಬಸವರಾಜ ಪಾಟೀಲ್ ಸೇಡಂ

ಕಲಬುರಗಿ: ಕನ್ನಡ ಸಾಹಿತ್ಯದಲ್ಲಿ ಚಿಂತನೆಯ ಬರಹಗಳಿಂದ ಪ್ರಖ್ಯಾತರಾಗಿ ಬಾಳಿಗೊಂದು ಬುತ್ತಿ ನೀಡಿದ ಡಾ. ನೀಲಮ್ಮ ಕತ್ನಳ್ಳಿ ಅವರ 'ನೀಲಾಂಜನ' ಗ್ರಂಥವು ಹೊಸತನದ ಬದುಕಿಗೆ ಪ್ರೇರಣೆ ನೀಡುತ್ತದೆ ಎಂದು ರಾಜ್ಯಸಭೆಯ ಮಾಜಿ ಸದಸ್ಯ ಬಸವರಾಜ ಪಾಟೀಲ್ ಸೇಡಂ ಹೇಳಿದ್ದಾರೆ.

ಲೇಖಕಿ ನೀಲಮ್ಮ ಕತ್ನಳ್ಳಿ ಅವರ ಅಮೃತ ಮಹೋತ್ಸವದ ಪ್ರಯುಕ್ತ ಶಹಾಬಾದ್‌ನ ರೇಣುಕಾ ಪ್ರಕಾಶನ ಹಾಗೂ ಅಭಿನಂದನ ಗ್ರಂಥ ಸಂಪಾದಕ ಮಂಡಳಿಯ ಸಹಯೋಗದಲ್ಲಿ ನಗರದ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ರವಿವಾರ ಆಯೋಜಿಸಿದ್ದ ‘ನೀಲಾಂಜನ’ ಅಭಿನಂದನ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

'60 ವರ್ಷದವರೆಗೂ ಮನುಷ್ಯ ಕಲಿಕೆಗೆ ತೆರೆದುಕೊಳ್ಳುತ್ತಾನೆ. 60 ವರ್ಷ ದಾಟಿದವರು ಕ್ರಿಯಾಶೀಲರಾಗಿರುತ್ತಾರೆ. ನಾನೂ 60 ವರ್ಷಗಳ ನಂತರ ಹೆಚ್ಚು ಕೆಲಸ ಮಾಡಿದ್ದೇನೆ. ಆದ್ದರಿಂದ ಹಿರಿಯರು ಕೇವಲ ವಾಯುವಿಹಾರಕ್ಕೆ ಸೀಮಿತವಾಗಬಾರದು. ಬೇರೆ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು.

ಸಂಕಟ ಜೀವನದ ನಡುವೆ ಮೇಷ್ಟ್ರು ಆಗಿ ಕಾಯಕವನ್ನು ದೇವರ ಪೂಜೆ ಎಂದು ಅನುಭವಿಸಿದ್ದಾರೆ. ಕನ್ನಡ ಸಾಹಿತ್ಯಕ್ಕೆ 14 ಮೌಲಿಕ ಕೃತಿಗಳನ್ನು ಕೊಟ್ಟಿದ್ದಾರೆ. ಅವರ ಭವಿಷ್ಯದ ಬದುಕು ಆಧ್ಯಾತ್ಮದತ್ತ ಹೊರಳಿದೆ ಎಂದರು.

'ನೀಲಮ್ಮ ಕತ್ನಳ್ಳಿ ಅವರು ವಿಶಿಷ್ಟ ಪರಿಸ್ಥಿತಿಯಲ್ಲಿ ಮನಸ್ಸಿಗೆ ಆಘಾತವಾಗಿ ಕೆಲ ಕಾಲ ಮನೆಯಲ್ಲಿಯೇ ಕುಳಿತಿದ್ದರು. ಸಮಯಕ್ಕೆ ಮುಂಚೆಯೇ ಬಿಟ್ಟು ಹೋಗುತ್ತಾರೆ ಎಂದುಕೊಂಡಿದ್ದೆವು. ಸಮಾಜದ ಋಣ ಇರುತ್ತದೆ. ಬಸವಣ್ಣನವರ ಬದುಕನ್ನು ಆದರ್ಶವಾಗಿ ತೆಗೆದುಕೊಂಡು ಬದುಕಬೇಕು' ಎಂದು ಹೇಳಿದರು.

ಹಿರಿಯ ಸಾಹಿತಿ ಎ.ಕೆ.ರಾಮೇಶ್ವರ ಮಾತನಾಡಿ, ‘ನೀಲಮ್ಮ ತಮ್ಮ ವ್ಯಕ್ತಿತ್ವವನ್ನು ತಾವೇ ನಿರ್ಮಾಣ ಮಾಡಿಕೊಂಡಿದ್ದಾರೆ. ಪ್ರೊ. ವಸಂತ ಕುಷ್ಟಗಿಯವರ ಯೋಗ್ಯ ಮಾರ್ಗದರ್ಶನ ಅವರಿಗೆ ಸಿಕ್ಕಿತು. ಗುಮಾಸ್ತೆಯಾಗಿ ಕೆಲಸ ಮಾಡಿದ ಕಾಲೇಜಿನಲ್ಲಿಯೇ ಉಪನ್ಯಾಸಕಿಯಾಗಿ ನೇಮಕವಾಗುವ ಮಟ್ಟಕ್ಕೆ ಅವರು ಬೆಳೆದರು’ ಎಂದರು.

ಗ್ರಂಥ ಕುರಿತು ಮಾತನಾಡಿದ ಪತ್ರಕರ್ತ, ಸಾಹಿತಿ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ , ಬದುಕಿನ ಬವಣೆಗಳ ಮಡುವನ್ನು ದಾಟಿಕೊಂಡು ಬದುಕಿದ ಮಾದರಿಯ ವ್ಯಕ್ತಿತ್ವ. ಸಿಮೆಂಟು ಧೂಳಿನ ಶಹಾಬಾದ್ ನಗರಿಯಲ್ಲಿ ಕಲ್ಲರಳಿ ಹೂವಾದವರು ಎಂದರು.

ಬರಹದಲ್ಲಿ ಭಾಷೆಯ ಲಾಲಿತ್ಯ, ಪ್ರಾದೇಶಿಕ ಭಾಷೆಗೆ ತಳಕು ಹಾಕಿದ್ದಾರೆ. ಕತ್ನಳ್ಳಿ ಅವರದು ಮಾನವೀಯ ಮನೋಧರ್ಮದ ಅಂತಃಕರಣ ಎಂದು ತಿಳಿಸಿದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವವರನ್ನು ಸನ್ಮಾನಿಸಲಾಯಿತು.

ನಿವೃತ್ತ ಪ್ರಾಚಾರ್ಯ ಕೆ.ವಿಶ್ವನಾಥ ಅಧ್ಯಕ್ಷತೆ ವಹಿಸಿದ್ದರು. ಕಲಬುರಗಿ ಬಸವ ಸಮಿತಿ ಅಧ್ಯಕ್ಷೆ ವಿಲಾಸವತಿ ಖೂಬಾ, ಲೇಖಕಿ ನೀಲಮ್ಮ ಕತ್ನಳ್ಳಿ, ನಿವೃತ್ತ ಪ್ರಾಧ್ಯಾಪಕ ವಿ.ಜಿ.ಪೂಜಾರ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಅನಿಲಕುಮಾರ ಮರಗೋಳ, ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಜೇಂದ್ರ ಕೊಂಡಾ, ನಿವೃತ್ತ ಪ್ರಾಚಾರ್ಯ ಎಸ್‌.ಎಸ್‌.ಮಾಕಲ್ ಹಾಗೂ ಉದ್ಯಮಿ ಮಲ್ಲಿಕಾರ್ಜುನ ಇಂಗಳೇಶ್ವರ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X