ಆಳಂದ: ನಿವೃತ್ತ ಸರಕಾರಿ ನೌಕರರಿಗೆ ಗೌರವ ಸನ್ಮಾನ

ಕಲಬುರಗಿ: ಆಳಂದ ತಾಲೂಕಿನ ಬಿಲಗುಂದಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ, 8ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ಸರಕಾರಿ ನೌಕರರಿಗೆ ಗೌರವ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಯಿತು.
ಮಹಾತ್ಮ ಗೌತಮ ಬುದ್ಧ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಶಿಕ್ಷಕರಿಗೆ ಮತ್ತು ನಿವೃತ್ತ ಸರಕಾರಿ ನೌಕರರಿಗೆ ಗೌರವ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮವನ್ನು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಶರಣಪ್ಪ ಬನ್ನಿಕಟ್ಟಿ ಉದ್ಘಾಟಿಸಿದರು. ಶಾಲೆಯ ಮುಖ್ಯ ಶಿಕ್ಷಕ ಸಿದ್ದಪ್ಪ ಬಿರಾದರ್ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯ ಮೇಲೆ ನರೋಣ ವಲಯದ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಎನ್.ಎಚ್. ಪಾಟೀಲ್, ಮಲ್ಲಿನಾಥ ಘೋಡಕೆ, ಶಿಕ್ಷಕರ ಪತ್ತಿನ ಸಹಕಾರ ಸಂಘದ ಆಳಂದ್ ಘಟಕದ ಅಧ್ಯಕ್ಷ ಚಂದ್ರಶೇಖರ್ ಪೂಜಾರಿ, ಮೀನಾಕುಮಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬಸವರಾಜ್ ರೋಳೆ, ವಿಜಯಕುಮಾರ್ ಬಿಲಗುಂದಿ, ವಿಜಯಲಕ್ಷ್ಮಿ ಬಿಲಗುಂದಿ ಸೇರಿದಂತೆ ಶಾಲೆಯ ಶಿಕ್ಷಕರು, ಗ್ರಾಮದ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಿಕ್ಷಕಿ ಸಂಗೀತಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಯೋಗೇಶ್ವರಿ ಸ್ವಾಗತ ಭಾಷಣ ಮಾಡಿದರು. ಚಂದ್ರಕಾಂತ್ ಕರಹರಿ ಕಾರ್ಯಕ್ರಮ ನಿರೂಪಿಸಿದರು. ಲತಾ ವಂದಿಸಿದರು.