Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬಿದ್ದವರ ಬಾಳಿಗೆ ಬೆಳಕಾದ ವಚನ ಸಾಹಿತ್ಯ:...

ಬಿದ್ದವರ ಬಾಳಿಗೆ ಬೆಳಕಾದ ವಚನ ಸಾಹಿತ್ಯ: ಡಾ.ಶಿವರಂಜನ ಸತ್ಯಂಪೇಟೆ

ವಾರ್ತಾಭಾರತಿವಾರ್ತಾಭಾರತಿ14 April 2025 11:11 AM IST
share
ಬಿದ್ದವರ ಬಾಳಿಗೆ ಬೆಳಕಾದ ವಚನ ಸಾಹಿತ್ಯ: ಡಾ.ಶಿವರಂಜನ ಸತ್ಯಂಪೇಟೆ

ಕಲಬುರಗಿ: ವಚನ ಸಾಹಿತ್ಯವೂ ಮಾನವನ ವ್ಯಕ್ತಿತ್ವ ಮತ್ತು ವಿಕಾಸನಕ್ಕೆ ಕಾರಣವಾಗಿದೆ. ಹನ್ನೆರಡನೇ ಶತಮಾನದ ವಚನ ಸಾಹಿತ್ಯ ಇಂದಿಗೂ ಮತ್ತು ಎಂದೆಂದಿಗೂ ಪ್ರಸ್ತುತವಾಗಿದೆ ಎಂದು ಶರಣ ಚಿಂತಕ ಡಾ.ಶಿವರಂಜನ ಸತ್ಯಂಪೇಟೆ ಹೇಳಿದ್ದಾರೆ.

ಲಿಂ ಮಹಾದೇವಿಯಮ್ಮ ಗುರುಪಾದಪ್ಪ ಮಾಲಿಪಾಟೀಲ ಸ್ಮರಣಾರ್ಥ ಶರಣ ಸಾಹಿತ್ಯ ಪರಿಷತ್ ಕಮಲಾಪುರ ತಾಲ್ಲೂಕು ಘಟಕದ ವತಿಯಿಂದ ಮಹಾಗಾಂವ ಕ್ರಾಸ್ ಮೌಂಟವೇವ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 'ವಚನ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಕಾಸ' ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಜಾತಿ, ಮತ, ವರ್ಣ, ವರ್ಗ ಸೇರಿದಂತೆ ಎಲ್ಲ ಭೇಧವನ್ನು ತೊಡೆದು ಸಮಾನತೆ, ಸೌಹಾರ್ದ, ಸತ್ಯ, ಶಾಂತಿ, ವಿಶ್ವಮಾನವತೆಯ ಜೊತೆಗೆ ಸಕಲ ಜೀವರಾಶಿಗಳ ಒಳಿತನ್ನೆ ಬಯಸುವ ಶರಣರ ನುಡಿಗಡಣಗಳಾದ ವಚನ ಸಾಹಿತ್ಯ ಸಾತ್ವಿಕ ಬದುಕಿಗೆ ಸೂಕ್ತ ಮಾರ್ಗದರ್ಶಿಗಳಾಗಿವೆ ಎಂದರು.

ಸಹಿತವಾದದು ಸಾಹಿತ್ಯ. ನುಡಿದಂತೆ ನಡೆದ ಜೀವನಾನುಭವ ಸಹಿತ ಸಾಹಿತ್ಯವೆ ವಚನ ಸಾಹಿತ್ಯ. ನೈತಿಕ ಮೌಲ್ಯ, ಸಾಮಾಜಿಕ ಸಾಮರಸ್ಯ ಸತ್ಯದ ದಾರಿಯಲ್ಲಿ ನಡೆಯುವಾಗ ಎದುರಾಗುವ ಸವಾಲುಗಳನ್ನು ಮೆಟ್ಟಿ ಮುನ್ನಡೆಯುವ ಎದೆಗಾರಿಕೆಯಂಥಹ ಹಲವು ಶಕ್ತಿಗಳ ಸಂಗಮ ವ್ಯಕ್ತಿತ್ವ. ವಚನಗಳು ಮಾತುಗಳಲ್ಲ ಅನುಭಾವದ ನುಡಿಗಳು. ಅನುಭಾವಿ ಶರಣ ಈ ಅನುಭವದ ನುಡಿಗಳನ್ನು ನಾವು ಅಳವಡಿಸಿಕೊಂಡರೆ ಮೌಲ್ಯಯುತ ವ್ಯಕ್ತಿತ್ವ ನಮ್ಮದಾಗುತ್ತದೆ ಎಂದು ಹೇಳಿದರು.

ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಶಿವಶರಣಪ್ಪ ದಬಾ ಮಾತನಾಡಿ, ಕಾಯಕ ನಿಷ್ಠೆಯ ಶರಣರು ಸಾಮಾಜಿಕ ಕ್ರಾಂತಿಕಾರರು. ವಿದ್ಯಾರ್ಥಿಗಳು ಪರಿಶ್ರಮದಿಂದ ಓದಿ ನಿಮ್ಮ ಜೀವನ ಹಾಗೂ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಬೇಕು ಎಂದರು.

ದತ್ತಿ ದಾಸೋಹಿ, ನಿವೃತ್ತ ಪ್ರಾಧ್ಯಾಪಕ ಕಲ್ಯಾಣರಾವ ಜಿ. ಪಾಟೀಲ ಮಾತನಾಡಿ, ಒತ್ತಡದ ಬದುಕಿಗೆ ವಚನ, ಶರಣರ ಜೀವನ, ಸಂದೇಶಗಳು ನೆಮ್ಮದಿ ತಂದುಕೊಡುತ್ತವೆ. ಹಿರಿಯರು ಬುದ್ದಿವಾದ ಹೇಳಿದರೆ ನಕಾರಾತ್ಮಕ ಯೋಚಿಸಬೇಡಿ. ಸದಾ ಕ್ರಿಯಾಶೀಲತೆಯ ಜೊತೆಗೆ ಪಂಚೇಂದ್ರಿಯಗಳ ಕಾರ್ಯಗಳು ಶುದ್ಧವಾಗಿದ್ದರೆ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದರು.

ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಡಾ. ಶರಣಬಸಪ್ಪ ವಡ್ಡನಕೇರಿ ಪ್ರಾಸ್ತಾವಿಕ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಮಹಾದೇವ ಬಡಾ ಅಧ್ಯಕ್ಷತೆ ವಹಿಸಿದರು. ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕ ಡಾ.ತೀರ್ಥಕುಮಾರ ಬೆಳಕೋಟಾ, ಉಪನ್ಯಾಸಕರಾದ ಕುಶ ಮಂಠಾಳ, ಅನಂತಕುಮಾರ್ ಪಾಟೀಲ್, ಡಾ. ಲಕ್ಮೀಕಾಂತ ಪಾಂಚಾಳ ಮುಂತಾದವರಿದ್ದರು.

ಶರಣ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಅಂಬಾರಾಯ ಮಡ್ಡೆ ಕಾರ್ಯಕ್ರಮ ನಿರೂಪಿಸಿದರು. ಭವಾನಿ ಕರೆಪ್ಪ ಸ್ವಾಗತ ಗೀತೆ ಹೇಳಿದರು.

ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ

ಇದೇ ಸಂದರ್ಭದಲ್ಲಿ ಮೌಂಟ್ ವೇವ್ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಾದ ಅಕ್ಷತಾ ಚಂದ್ರಕಾಂತ, ಪ್ರೀತಿ ಶಿವಶರಣಪ್ಪ, ಕಾವೇರಿ ಅಣ್ಣಪ್ಪ, ಕೀರ್ತಿ ಭರತ, ಸಂಜನಾ ಸಿದ್ದಣ್ಣ ಹಾಗೂ ಚಾಮುಂಡಿ ಸುಭಾಷ್ ಎಂಬವರನ್ನು ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X