Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಯಾವ ಮಾನದಂಡಗಳ ಅಡಿಯಲ್ಲಿ ಕದನ ವಿರಾಮ...

ಯಾವ ಮಾನದಂಡಗಳ ಅಡಿಯಲ್ಲಿ ಕದನ ವಿರಾಮ ಘೋಷಿಸಲಾಗಿದೆ ಎಂದು ಸರಕಾರ ಜನರಿಗೆ ತಿಳಿಸಲಿ: ಪ್ರಿಯಾಂಕ್ ಖರ್ಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ12 May 2025 3:32 PM IST
share
ಯಾವ ಮಾನದಂಡಗಳ ಅಡಿಯಲ್ಲಿ ಕದನ ವಿರಾಮ ಘೋಷಿಸಲಾಗಿದೆ ಎಂದು ಸರಕಾರ ಜನರಿಗೆ ತಿಳಿಸಲಿ: ಪ್ರಿಯಾಂಕ್ ಖರ್ಗೆ ಒತ್ತಾಯ

ಕಲಬುರಗಿ: ಭಯೋತ್ಪಾದಕ ತಾಣಗಳನ್ನು ನಮ್ಮ ಸೈನಿಕರು ಧ್ವಂಸ ಮಾಡಿದ್ದಾರೆ. ಆದರೆ, ಕೇಂದ್ರ ಸರಕಾರ ಕದನ ವಿರಾಮದ ನಿರ್ಧಾರದಿಂದ ಸೇನೆಗೆ ಹಾಗೂ ಭಾರತೀಯ ಸಾಮಾನ್ಯ ನಾಗರಿಕರಿಗೆ ನಿರಾಸೆ ತಂದಿದೆ ಎಂದು ಗಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ನಂಬಿಕೆಗೆ ಅರ್ಹ ರಾಷ್ಟ್ರವಲ್ಲ. ನಮ್ಮ ನಾಗರಿಕರ ಮೇಲೆ ದಾಳಿ ಮಾಡಿದ ಭಯೋತ್ಪಾದಕರ ನೆಲೆಗಳ ಮೇಲೆ ಸೈನಿಕರು ದಾಳಿ ಮಾಡಿ ನಾಶ ಮಾಡಿದ್ದಾರೆ. ಆದರೆ, ಕದನ ವಿರಾಮ ಘೋಷಿಸಲಾಗಿದೆ. ಅದನ್ನು ಯಾರು ಘೋಷಿಸಬೇಕು.? ಯಾವ ಮಾನದಂಡಗಳ ಅಡಿಯಲ್ಲಿ ಮಾಡಲಾಗಿದೆ? ಕದನ ವಿರಾಮ ಉಲ್ಲಂಘನೆ ಮಾಡಿದರೆ ಯಾವ ಕ್ರಮ ಕೈಗೊಳ್ಳಬೇಕು ಎನ್ನುವ ಬಗ್ಗೆ ಸರಕಾರ ಅಧಿವೇಶನ ಕರೆದು ರಾಷ್ಟ್ರದ ಜನರಿಗೆ ವಾಸ್ತವ ತಿಳಿಸಲಿ ಎಂದು ಒತ್ತಾಯಿಸಿದರು.

"ಕಾಶ್ಮೀರ ವಿಚಾರ ದ್ವೀಪಕ್ಷೀಯ ವಿಷಯವಾಗಿದ್ದು, ಪಾಕಿಸ್ತಾನ ಹಾಗೂ ಭಾರತ ನಡುವಿನ ವಿಚಾರವನ್ನು ಈಗ ಅಮೆರಿಕ ಮಧ್ಯೆ ಪ್ರವೇಶಿಸುವ ಮೂಲಕ ಅಂತಾರಾಷ್ಟ್ರೀಯ ವಿಚಾರವನ್ನಾಗಿ ಮಾಡಲಾಗಿದೆ. ಕದನ ವಿರಾಮ ಘೋಷಣೆ ಮಾಡಲು ಟ್ರಂಪ್ ಯಾರು ? ಅವರ ಟ್ವೀಟ್ ನಲ್ಲಿರುವ ಅಂಶಗಳನ್ನು ಗಮನಿಸಿದ್ದೀರಾ? ಕಾಮನ್ ಸೆನ್ಸ್ ಎನ್ನುವ ಪದ ಬಳಸಿ, ಭಾರತಕ್ಕೆ ಬುದ್ದಿ ಹೇಳಿರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ, ವಿದೇಶಾಂಗ ಸಚಿವರು ಹಾಗೂ ರಾಷ್ಟ್ರೀಯ ಭದ್ರತೆ ಸಲಹೆಗಾರರು ಕದನ ವಿರಾಮದ ಬಗ್ಗೆ ಯಾಕೆ ಜನರಿಗೆ ವಾಸ್ತವ ತಿಳಿಸುತ್ತಿಲ್ಲ" ಎಂದು ಅಸಮಧಾನ ವ್ಯಕ್ತಪಡಿಸಿದರು.

ವಿದೇಶಾಂಗ ನೀತಿಗಳು ಬಲಿಷ್ಠಗೊಳ್ಳಬೇಕಾದರೆ ಪ್ರಧಾನಿಗಳು ಹೊರದೇಶದ ಪ್ರಧಾನ ಮಂತ್ರಿಗಳನ್ನು ಅಪ್ಪಿಕೊಂಡರೆ ಸಾಲದು, ಅವರೊಂದಿಗೆ ಮಾತುಕತೆ ನಡೆಸಬೇಕಾಗುತ್ತದೆ. ಭಯೋತ್ಪಾದಕ ಕೃತ್ಯವನ್ನು ಅಮೆರಿಕ ಖಂಡಿಸಿಲ್ಲ. ಚೀನಾ ಹಾಗೂ ಟರ್ಕಿ ದೇಶಗಳು ಪಾಕಿಸ್ತಾನಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಈ ನಡುವೆ ಅಂತಾರಾಷ್ಟ್ರೀಯ ವಿತ್ತೀಯ ನಿಧಿ ( IMF) ಪಾಕಿಸ್ತಾನಕ್ಕೆ ಸಾಲ ಘೋಷಿಸಿದೆ ಎಂದರೆ ಭಾರತ ಸರ್ಕಾರ ಭಯೋತ್ಪಾದನೆಗೆ ಬೆಂಬಲವಾಗಿರುವ ಪಾಕಿಸ್ತಾನಕ್ಕೆ ಸಾಲ ನೀಡದಂತೆ ಮನವರಿಕೆ ಮಾಡಲು ವಿಫಲವಾಗಿದೆ. ಇದು ವಿದೇಶಾಂಗ ನೀತಿಗಳು ಎಡವುತ್ತಿವೆ ಎನ್ನುವ ಅಭಿಪ್ರಾಯ ಮೂಡುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ದೇಶದ ಹಿತಾಸಕ್ತಿ ಕಾಪಾಡಲು ಕೇಂದ್ರ ಸರಕಾರಕ್ಕೆ ಕಾಂಗ್ರೆಸ್ ಪಕ್ಷ ಬೆಂಬಲ ಘೋಷಿಸಿದೆ. ಪಹಲ್ಗಾಂ ದಾಳಿಯ ಭಯೋತ್ಪದಾಕರು ಏನಾದರು?; ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ ಸಚಿವರು, ಭಯೋತ್ಪಾದಕ ದಾಳಿ, ಹಾಗೂ ಕದನ ವಿರಾಮದ ಬಗ್ಗೆ ಪ್ರಧಾನಿ ಸಂಸತ್ತಿನ ಅಧಿವೇಶನ ಕರೆದು ದೇಶದ ನಾಗರಿಕರಿಗೆ ತಿಳಿಸಲಿ ಎಂದು ಒತ್ತಾಯಿಸಿದರು.

ಮಾಧ್ಯಮಗಳಲ್ಲಿ ಯುದ್ಧದ ರಂಜನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಖರ್ಗೆ, ದೇಶದ ಹಿತಾಸಕ್ತಿ ಹಾಗೂ ವಾಸ್ತವಾಂಶಗಳಿಗಿಂತ ವ್ಯಕ್ತಿಯ ವೈಭವೀಕರಣವಾಗುತ್ತಿದೆ. ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಪ್ರಸಾರ ವಾಗುತ್ತಿದೆ. ಪ್ಯಾನೆಲ್ ಚರ್ಚೆಯಲ್ಲಿ ಭಾಗವಹಿಸುವವರು ಹಾಗೂ ಬಿಜೆಪಿಯ ಬಾಡಿಗೆ ಭಾಷಣಕಾರರು ತಪ್ಪು ಮಾಹಿತಿಯನ್ನೇ ಹೇಳುತ್ತಿದ್ದಾರೆ. ಕರಾಚಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ, ಪಾಕಿಸ್ತಾನ ನಾಲ್ಕು ಭಾಗವಾಗುತ್ತದೆ ಎಂದು ಹೇಳಿದ್ದರು ಎಂದರು.

ಶೈಕ್ಷಣಿಕ ಗುಣಮಟ್ಟ ಅಭಿವೃಧ್ಧಿಗೆ ನೀಲನಕ್ಷೆ

ಜಿಲ್ಲೆಯಲ್ಲಿ ಎಸೆಸೆಲ್ಸಿ ಫಲಿತಾಂಶ ಕುಸಿಯುತ್ತಿರುವುದಕ್ಕೆ ತಾವು ಹೊಣೆಗಾರರಾಗುವುದಾಗಿ ಹೇಳಿದ ಸಚಿವರು, ಶೈಕ್ಷಣಿಕ ಗುಣಮಟ್ಟ ಅಭಿವೃಧ್ಧಿಪಡಿಸುವ ನಿಟ್ಟಿನಲ್ಲಿ ನೀಲನಕ್ಷೆ ತಯಾರಿಸಲಾಗುತ್ತಿದೆ. ಬೆಂಗಳೂರು ಮೂಲದ ಎರಡು ಎನ್ ಜಿ ಓ ಗಳೊಂದಿಗೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಇದರ ಫಲಿತಾಂಶ ಮುಂದಿನ ಮಾರ್ಚ್ ತಿಂಗಳಲ್ಲಿ ಗೊತ್ತಾಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ಶಾಸಕಿ ಖನೀಝ್ ಫಾತಿಮಾ, ಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X