ಕಲಬುರಗಿ | ಜಿಲ್ಲಾಧಿಕಾರಿಗೆ ಅವಹೇಳನ ಪ್ರಕರಣ: ವಿಚಾರಣೆಗೆ ಹಾಜರಾದ ಎನ್.ರವಿಕುಮಾರ್

ಕಲಬುರಗಿ: ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಸೋಮವಾರ ಇಲ್ಲಿನ ದಕ್ಷಿಣ ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.
"ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿರಬಹುದು' ಎಂದು ಹೇಳಿಕೆ ನೀಡಿದ್ದ ಎನ್.ರವಿಕುಮಾರ್, ಪೊಲೀಸ್ ಅಧಿಕಾರಿಗಳ ವಿರುದ್ಧ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೂಡ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಅಲ್ಲದೆ ಜಾತಿ ನಿಂದನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಅವರ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿತ್ತು.
ಹೈಕೋರ್ಟ್ ಸೂಚನೆ ಮೇರೆಗೆ ಎನ್.ರವಿಕುಮಾರ್ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ದಕ್ಷಿಣ ಎಸಿಪಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
Next Story





