ಜು.4ರಂದು ಕಲಬುರಗಿಗೆ ನಿಖಿಲ್ ಕುಮಾರಸ್ವಾಮಿ ಆಗಮನ : ಬಾಲರಾಜ್ ಗುತ್ತೇದಾರ

ಕಲಬುರಗಿ: ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಜುಲೈ 4 ರಂದು ಕಲಬುರಗಿ ನಗರ ಹಾಗೂ ಜೇವರ್ಗಿಯಲ್ಲಿ ನಡೆಯಲಿರುವ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ, ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ 58 ದಿನ 110 ವಿಧಾನಸಭಾ ಕ್ಷೇತ್ರಗಳಲ್ಲಿ ಜನರೊಂದಿಗೆ ಬೆರೆಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಜು.3ಕ್ಕೆ ಬೀದರ್ ನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ, 4 ರಂದು ಕಲಬುರಗಿ ಪ್ರವಾಸ ಮಾಡಲಿದ್ದಾರೆ ಎಂದರು.
ಜು.4 ರಂದು ಬೆಳಗ್ಗೆ 10 ಗಂಟೆಗೆ ನಗರದಲ್ಲಿ ಬೈಕ್ ರ್‍ಯಾಲಿ ನಡೆಸಿದ ಬಳಿಕ ಇಲ್ಲಿನ ಸಾರ್ವಜನಿಕ ಉದ್ಯಾನವನದಲ್ಲಿರುವ ವೀರಶೈವ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ 12 ಗಂಟೆಗೆ ಯಡ್ರಾಮಿ ಹಾಗೂ ಜೇವರ್ಗಿ ತಾಲ್ಲೂಕು ಘಟಕದದಿ೦ದ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶ ಹಾಗೂ ಸದಸ್ಯತ್ವ ಅಭಿಯಾನಯನ್ನು ಜೇವರ್ಗಿ ಪಟ್ಟಣದ ಭೂತಪೂರ ಕಲ್ಯಾಣ ಮಂಟಪದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಈ ಸಮಾವೇಶದಲ್ಲಿ ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ಬಂಡೆಪ್ಪ ಕಾಶೆಂಪೂರ, ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ, ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಸಚಿವ ಹಣಮಂತಪ್ಪ ಅಲ್ನೋಡ, ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ರಶ್ಮಿ ರಾಮೇಗೌಡ , ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ , ರಾಜ್ಯ ಕಾರ್ಯದರ್ಶಿ ಶಿವಕುಮಾರ ನಾಟಿಕಾರ್ ಸೇರಿದಂತೆ ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು ಆಗಮಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಶಿವಕುಮಾರ್ ನಾಟಿಕಾರ್, ಮಹೇಶ್ವರಿ ವಾಲಿ, ಬಸವರಾಜ್ ಬಿರಬಿಟ್ಟೆ, ಶ್ಯಾಮರಾವ್ ಸೂರನ್, ರಾಮಚಂದ್ರ ಅಟ್ಟೂರು, ಮಲ್ಲಿಕಾರ್ಜುನ್ ಸಂಗಾಣಿ, ಮಹಾಂತಪ್ಪ ಮದ್ರಿ, ಪ್ರವೀಣ್ ಜಾಧವ್, ರಾಜಾ ಪಟೇಲ್, ದೇವೇಂದ್ರ ಹಾಸನಾಪುರ, ಚಂದ್ರಕಾಂತ್ ಮೋರೆ ಮತ್ತಿತರರು ಇದ್ದರು.







