Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಹರವಾಳ ಸೇತುವೆ–ಬಾಂದಾರ ಕಾಮಗಾರಿ...

ಹರವಾಳ ಸೇತುವೆ–ಬಾಂದಾರ ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಬೇಡ: ಸಚಿವ ಅಜಯ್ ಧರ್ಮಸಿಂಗ್

ಸಚಿವರಿಂದ 130 ಕೋಟಿ ರೂ. ವೆಚ್ಚದ ಹರವಾಳ ಸೇತುವೆ–ಬಾಂದಾರ ಕಾಮಗಾರಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ8 Oct 2026 7:01 PM IST
share
ಹರವಾಳ ಸೇತುವೆ–ಬಾಂದಾರ ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಬೇಡ: ಸಚಿವ ಅಜಯ್ ಧರ್ಮಸಿಂಗ್

ಜೇವರ್ಗಿ: ಜೇವರ್ಗಿ ತಾಲೂಕಿನ ಹರವಾಳ ಗ್ರಾಮದ ಸಮೀಪ ಭೀಮಾ ನದಿಗೆ ಅಡ್ಡಲಾಗಿ ಸುಮಾರು 130 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೇತುವೆ–ಬಾಂದಾರ ಯೋಜನೆಯ ಕಾಮಗಾರಿಯನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಜಯ್ ಧರ್ಮಸಿಂಗ್ ಗುರುವಾರ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಾಮಗಾರಿಯ ಪ್ರಗತಿ, ತಾಂತ್ರಿಕ ಅಂಶಗಳು ಹಾಗೂ ಬಾಕಿ ಇರುವ ಕೆಲಸಗಳ ಕುರಿತು ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದುಕೊಂಡರು. ಕಾಮಗಾರಿಯಲ್ಲಿ ಯಾವುದೇ ರೀತಿಯ ಗುಣಮಟ್ಟದ ರಾಜಿ ಮಾಡಿಕೊಳ್ಳದೆ, ನಿಗದಿತ ಅವಧಿಯೊಳಗೆ ಯೋಜನೆಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸುಮಾರು 368.60 ಮೀಟರ್ ಉದ್ದ ಹಾಗೂ 4 ಮೀಟರ್ ಎತ್ತರ ಹೊಂದಿರುವ ಸೇತುವೆ–ಬಾಂದಾರ ನಿರ್ಮಾಣವಾಗುತ್ತಿದ್ದು, ಯೋಜನೆ ಪೂರ್ಣಗೊಂಡ ಬಳಿಕ ಭೀಮಾ ನದಿಯ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಲಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರಿನ ಲಭ್ಯತೆ ಸುಧಾರಿಸುವುದರ ಜೊತೆಗೆ ಹರವಾಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಂಪರ್ಕ ವ್ಯವಸ್ಥೆಯೂ ಮತ್ತಷ್ಟು ಬಲಪಡಲಿದೆ.

ನೀರಾವರಿ ಯೋಜನೆಗಳು ಕೇವಲ ನೀರು ಸಂಗ್ರಹಿಸುವ ಕಾಮಗಾರಿಗಳಾಗದೆ, ರೈತರ ಕೃಷಿ ಚಟುವಟಿಕೆ, ಗ್ರಾಮೀಣ ಸಂಪರ್ಕ ಹಾಗೂ ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗಬೇಕು. ಹರವಾಳ ಸೇತುವೆ–ಬಾಂದಾರ ಯೋಜನೆಯಿಂದ ಈ ಭಾಗದ ರೈತರು ಹಾಗೂ ಗ್ರಾಮಸ್ಥರಿಗೆ ದೀರ್ಘಕಾಲಿಕ ಪ್ರಯೋಜನ ದೊರೆಯಲಿದೆ ಎಂದು ಸಚಿವ ಡಾ. ಅಜಯ್ ಧರ್ಮಸಿಂಗ್ ಹೇಳಿದರು.

ಜೇವರ್ಗಿ ಹಾಗೂ ಅಫಜಲಪುರ ಭಾಗಗಳಲ್ಲಿ ನೀರಾವರಿ, ಸಂಪರ್ಕ ವ್ಯವಸ್ಥೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ. ಜನರ ಅಗತ್ಯಗಳನ್ನು ಅರಿತು, ದೀರ್ಘಕಾಲಿಕ ಹಾಗೂ ಶಾಶ್ವತ ಪರಿಹಾರ ಕಲ್ಪಿಸುವ ಅಭಿವೃದ್ಧಿ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಕಾಮಗಾರಿ ಪರಿಶೀಲನೆ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Tags

Dr.Ajay Dharam SinghbridgeHaravala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X