Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ:...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಲಬುರಗಿ ಜಿಲ್ಲೆಯಾದ್ಯಂತ 40 ಮತಗಟ್ಟೆ ಸ್ಥಾಪನೆ: ಇಕ್ರಮ್ ಶರೀಫ್

ವಾರ್ತಾಭಾರತಿವಾರ್ತಾಭಾರತಿ22 Oct 2026 7:13 PM IST
share
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಲಬುರಗಿ ಜಿಲ್ಲೆಯಾದ್ಯಂತ 40 ಮತಗಟ್ಟೆ ಸ್ಥಾಪನೆ: ಇಕ್ರಮ್ ಶರೀಫ್

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಒಂದು ಸ್ಥಾನ ಆಯ್ಕೆಗೆ ನಾಳೆ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ನಡೆಯುವ ಮತದಾನಕ್ಕೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತದಾನಕ್ಕೆ ಒಟ್ಟು 40 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 5,672 ಪುರುಷ, 4,980 ಮಹಿಳೆ ಸೇರಿ 10,652 ಮತದಾರರು ಮತ ಚಲಾಯಿಸಲು ಹೆಸರು ನೋಂದಣಿ ಮಾಡಿಕೊಂಡಿದ್ದು, ಪ್ರತಿ ಮತಗಟ್ಟೆಯಲ್ಲಿ ಕನಿಷ್ಠ ಮೂಲಸೌಕರ್ಯ ಕಲ್ಪಿಸಲಾಗಿದೆ. ಇನ್ನು ಮತ ಚಲಾಯಿಸುವ ಮತದಾರರಿಗೆ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಹಿ ಹಚ್ಚಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಮತದಾರರ ಗುರುತಿನ ಚೀಟಿ ಹೊಂದಿರದ ಮತದಾರರು ಚುನಾವಣಾ ಅಯೋಗದ ನಿರ್ದೇಶನದಂತೆ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಇಂಡಿಯನ್ ಪಾಸ್ ಪೋರ್ಟ್, ಕೇಂದ್ರ/ ರಾಜ್ಯ ಸರ್ಕಾರ / ನಿಗಮ-ಮಂಡಳಿ/ ಸ್ಥಳೀಯ ಸಂಸ್ಥೆ/ ಖಾಸಗಿ ಸಂಸ್ಥೆ ನೀಡಿರುವ ಗುರುತಿನ ಚೀಟಿ, ಎಂ.ಪಿ, ಎಂ.ಎಲ್.ಎ, ಎಂ.ಎಲ್.ಸಿ ಗಳಿಗೆ ನೀಲಡಾಗಿರುವ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆ ನೀಡುವ ಗುರುತಿನ ಚೀಟಿ, ವಿಶ್ವವಿದ್ಯಾಲಯ ನೀಡಿರುವ ಡಿಪ್ಲೋಮಾ-ಪದವಿ ಪ್ರಮಾಣ ಪತ್ರ, ಅಂಗವಿಕಲರಿಗೆ ಸಕ್ಷಮ‌ ಪ್ರಾಧಿಕಾರ ನೀಡಿರುವ ಗುರುತಿನ ಚೀಟಿ, ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯ‌ ವಿತರಿಸುವ ಯು.ಡಿ.ಐ.ಡಿ ಕಾರ್ಡ್ ಹೀಗೆ 14 ರಲ್ಲಿ ಯಾವುದಾದರು ಒಂದು ಮೂಲ ಗುರುತಿನ ಚೀಟಿ ತೋರಿಸಿ ಮತ‌ ಚಲಾಯಿಸಬಹುದಾಗಿದೆ.

ಈ ಚುನಾವಣೆಯಲ್ಲಿ ಮತದಾನವು ಮತಪತ್ರ ಮುಖಾಂತರ ಪ್ರಾಶಸ್ತ ಮತ ನೀಡಲು ಅವಕಾಶವಿರುತ್ತದೆ. ಚುನಾವಣಾ ಕಣದಲ್ಲಿ ಸ್ಪರ್ಧಿಸಿರುವ ಎಲ್ಲಾ ಅಭ್ಯರ್ಥಿಗೂ ಪ್ರಾಶಸ್ತ್ಯದ ರೂಪದಲ್ಲಿ ಮತದಾರ ಮತ ನೀಡಬಹುದಾಗಿದೆ. ಪ್ರಾಶಸ್ತ್ಯ ಮತ ನೀಡುವಾಗ ಕ್ರಮ ಸಂಖ್ಯೆ ಕೈಬಿಟ್ಟು ಚಲಾಯಿಸಿದ ನಂತರದ ಮತಗಳು ಅಮಾನ್ಯವಾಗಲಿದ್ದು, ಮತದಾರರು ಇದನ್ನು ಗಮನಿಸಬೇಕು. ಇನ್ನು ಮತಗಟ್ಟೆಯಲ್ಲಿ ನೀಡಲಾಗುವ ನೆರಳೆ ಬಣ್ಣದ (Violet sketch pen) ಪೆನ್ನಿನ ಮುಖಾಂತರ ಮಾತ್ರ ಮತ ಚಲಾಯಿಸಬೇಕೆಂದು ಮನವಿ ಮಾಡಿದ್ದಾರೆ.

ಎಲ್ಲೆಲ್ಲಿ ಮತಗಟ್ಟೆ?

ಕಲಬುರಗಿ ನಗರದಲ್ಲಿ ಎಂ.ಎಸ್.ಕೆ. ಮಿಲ್ ರಸ್ತೆಯ ಸರ್ಕಾರಿ ಐ.ಟಿ.ಐ ಕಾಲೇಜು ಎಡ ಭಾಗ ಮತ್ತು ಬಲ ಭಾಗ, ನೂತನ ವಿದ್ಯಾಲಯ ಕನ್ಯಾ ಪ್ರೌಢ ಶಾಲೆ ಬಲ ಭಾಗ ಮತ್ತು ಎಡ ಭಾಗ, ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜು(ಎಂ.ಪಿ.ಎಚ್.ಎಸ್), ಗಂಜ್ ಪ್ರದೇಶದಲ್ಲಿನ ನಗರೇಶ್ವರ ಪ್ರೌಢ ಶಾಲೆ, ಸರ್ಕಾರಿ ಜ್ಯೂನಿಯರ್ ಕಾಲೇಜು ಆದರ್ಶ ನಗರ ಬಲ ಭಾಗ ಮತ್ತು ಎಡ ಭಾಗ, ಕಲಬುರಗಿ ತಹಶೀಲ್ದಾರ್‌ ಕಚೇರಿ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯ ಆವರಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ಉಳಿದಂತೆ ಕಲಬುರಗಿ ತಾಲೂಕಿನ ಪಟ್ಟಣ ನಾಡ ಕಚೇರಿ, ಫರಹತಾಬಾದ ನಾಡ ಕಚೇರಿ ಹೊಸ ಬಿಲ್ಡಿಂಗ್ ಹಾಗೂ ಅವರಾದ ನಾಡ ಕಚೇರಿ, ಕಮಲಾಪೂರ ತಾಲೂಕಿನ ಕಮಲಾಪೂರ ಸರ್ಕಾರಿ ಬಾಲಕರ ಪಿ.ಯು. ಕಾಲೇಜು ಮತ್ತು ಮಹಾಗಾಂವ್ ಕ್ರಾಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಫಜಲಪೂರ ತಾಲೂಕಿನ ಅಫಜಲಪೂರ ತಹಶೀಲ್ದಾರ ಕಚೇರಿ, ಚೌಡಾಪೂರ ಗ್ರಾ.ಪಂ. ಕಚೇರಿ ಹಾಗೂ ಕರಜಗಿ ಗ್ರಾ.ಪಂ. ಕಚೇರಿ, ಆಳಂದ ತಾಲೂಕಿನ ಆಳಂದ ಹಳೇ ತಹಶೀಲ್ದಾರ ಕಚೇರಿ, ಖಜೂರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಾದನಹಿಪ್ಪರಗಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನರೋಣಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ನಿಂಬರ್ಗಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.

ಜೇವರ್ಗಿ ತಾಲೂಕಿನ ಜೇವರ್ಗಿ ಮಿನಿ ವಿಧಾನಸೌಧ ತಹಶೀಲ್ದಾರ ಕಚೇರಿ ಕೋಣೆ ಸಂಖ್ಯೆ 10, ಆಂದೋಲಾ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆ, ನೆಲೋಗಿ ಗ್ರಾ.ಪಂ. ಕಚೇರಿ, ಯಡ್ರಾಮಿ ತಾಲೂಕಿನ ಯಡ್ರಾಮಿ ತಹಶೀಲ್ದಾರ ಕಚೇರಿ ಮತ್ತು ಇಜೇರಿ ನಾಡ ಕಚೇರಿ, ಸೇಡಂ ತಾಲೂಕಿನ ಸೇಡಂ ತಹಸೀಲ್ದಾರ ಕಚೇರಿ, ಮುಧೋಳ ಗ್ರಾ.ಪಂ. ಕಚೇರಿ, ಕೋಡ್ಲಾ ಗ್ರಾ.ಪಂ. ಕಚೇರಿ ಹಾಗೂ ಅಡಕಿ ಸರ್ಕಾರಿ ಪ್ರೌಢ ಶಾಲೆ, ಚಿತ್ತಾಪುರ ತಾಲೂಕಿನ ಚಿತ್ತಾಪುರ ತಹಶೀಲ್ದಾರ ಕಚೇರಿ ಮತ್ತು ವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿಂಚೋಳಿ ತಾಲೂಕಿನ ಚಿಂಚೋಳಿ ತಹಶೀಲ್ದಾರ ಕಚೇರಿ, ಐನಾಪೂರ ನಾಡ ಕಚೇರಿ, ಸುಲೆಪೇಟ್ ಸರ್ಕಾರಿ ಪಬ್ಲಿಕ್ ಸ್ಕೂಲ್ ಹಾಗೂ ಕೋಡ್ಲಿ ನಾಡ ಕಚೇರಿ, ಕಾಳಗಿ ತಾಲೂಕಿನಲ್ಲಿ ಕಾಳಗಿ ಟೌನ್ ಪಂಚಾಯತ್ ಕಚೇರಿ, ಶಹಾಬಾದ ತಾಲೂಕಿನಲ್ಲಿ ಶಹಾಬಾದ ತಹಶೀಲ್ದಾರ ಕಚೇರಿಯಲ್ಲಿ ಮತಗಟ್ಟೆ ಸ್ಥಾಪನೆ ಮಾಡಲಾಗಿದೆ.

Tags

NorthEastTeachersConstituencyElection
share
ವಾರ್ತಾಭಾರತಿ
ವಾರ್ತಾಭಾರತಿ
Next Story
X