Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಎನ್‌ಎಸ್‌ಎಸ್‌ನಿಂದ ವ್ಯಕ್ತಿತ್ವ ವಿಕಸನ:...

ಎನ್‌ಎಸ್‌ಎಸ್‌ನಿಂದ ವ್ಯಕ್ತಿತ್ವ ವಿಕಸನ: ನೀಲಕಂಠ ಶಿವಾಚಾರ್ಯ

ವಾರ್ತಾಭಾರತಿವಾರ್ತಾಭಾರತಿ9 Jan 2025 9:10 PM IST
share
ಎನ್‌ಎಸ್‌ಎಸ್‌ನಿಂದ ವ್ಯಕ್ತಿತ್ವ ವಿಕಸನ: ನೀಲಕಂಠ ಶಿವಾಚಾರ್ಯ

ಕಲಬುರಗಿ: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿನ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದು ನಿಂಬರ್ಗಾದ ಗದ್ದಿಗೇಶ್ವರ ವಿರಕ್ತಮಠದ ನೀಲಕಂಠಶಿವಾಚಾರ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಆಳಂದ ತಾಲೂಕಿನ ನಿಂಬರ್ಗಾದ ಸರಕಾರಿ ಪದವಿಪೂರ್ವ ಕಾಲೇಜಿನ ವತಿಯಿಂದ ಶ್ರೀಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದ ೨೦೨೪-೨೫ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ರಾಷ್ಟ್ರೀಯ ಸೇವಾಯೋಜನೆಯ ಮುಖ್ಯ ಉದ್ದೇಶ ಭಾರತೀಯ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸಾರ್ವಜನಿಕ ಸೇವೆಯ ಮೂಲಕ ಅಭಿವೃದ್ದಿಗೊಳಿಸುವುದಾಗಿದೆ ಇದು ಮಹಾತ್ಮಾಗಾಂಧಿಜೀಯವರ ಕನಸಾಗಿತ್ತು. ಪ್ರಸ್ತುತ ದೇಶ-ವಿದೇಶಗಳ ನಡುವೆ, ಮನುಷ್ಯ- ಮನುಷ್ಯರ ನಡುವೆ ಅನೇಕ ಸಂಘರ್ಷಗಳು ನಡೆಯುತ್ತಿವೆ. ಇಂತಹ ಕಾಲದಲ್ಲಿ ಗಾಂಧಿಜೀಯವರ ತತ್ವಾದರ್ಶಗಳು ಪ್ರಸಕ್ತ ಜಗತ್ತಿಗೆ ಬೇಕಾಗಿವೆ. ರಾಷ್ಟ್ರ ಪ್ರಗತಿಯಾಗಬೇಕಾದರೆ ಅದರಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನರಿತು ಬದುಕಬೇಕು ಎಂದರು.

ಎನ್‌ಎಸ್‌ಎಸ್‌ನಿಂದ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಪ್ರಜ್ಙೆ ಜಾಗೃತಗೊಳ್ಳುತ್ತದೆ, ನಮ್ಮಲ್ಲಿರುವ ಶ್ರಮ, ವಿದ್ಯೆ, ಬುದ್ದಿ, ಕೌಶಲ್ಯ ಇವುಗಳನ್ನು ಸಮಾಜದ,ದೇಶದ ಒಳತಿಗಾಗಿ ಫಲಾಪೇಕ್ಷೆ ಇಲ್ಲದೆ ಅಪರ್ಣಾ ಮನೋಭಾವದಿಂದ ನೀಡುವ ಸಹಾಯವೇ ಸೇವೆ ಆದ್ದರಿಂದ ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಮಲ್ಲಿನಾಥ ನಾಟೀಕಾರ, ಶಿಬಿರದ ಮುಖ್ಯ ಉದ್ದೇಶ ಮಕ್ಕಳಲ್ಲಿ ಶಿಸ್ತು, ಸಂಯಮ ಮತ್ತು ಸಹಭಾಳ್ವೆ ಕಲ್ಲಿಸುವುದು. ಎನ್‌ಎಸ್‌ಎಸ್ ಮೂಲಕ ಸಮಾನತೆಯ ಭಾವ ಮೂಡುವುದಕ್ಕೆ ಸಾಧ್ಯವಾಗುತ್ತದೆ. ಈ ಶಿಬಿರಗಳಿಂದ ಗ್ರಾಮದ ಜನರಲ್ಲಿ ಆರೋಗ್ಯ, ಪರಿಸರ, ನೈರ್ಮಲ್ಯ, ಶಿಕ್ಷಣ, ಸಾಮಾಜಿಕ ಪಿಡುಗುಗಳು, ಭ್ರಷ್ಟಾಚಾರ ನಿರ್ಮೂಲನೆಯಂತ ವಿಷಯಗಳ ಕುರಿತು ಅರಿವು ಉಂಟಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಅಧ್ಯಕ್ಷೆ ರೇಖಾಬಬಾಯಿ ಚವ್ಹಾಣ,ಶರಣಬಸವೇಶ್ವರ ಟ್ರಸ್ಟನ ಕಾರ್ಯದರ್ಶಿ ಈರಣ್ಣ ಬಿರಾದಾರ ಆಗಮಿಸಿದ್ದರು. ಕಾಲೇಜಿನ ಉಪನ್ಯಾಸಕರುಗಳಾದ ಲಕಪತಿರಾಜ ಬಡದಾಳ, ಸಿದ್ದರಾಮ ಸನಗುಂದಿ, ತೇಜಶ್ವಿನಿ ಪಾಟೀಲ್, ಸಪ್ನಾ ಕಣ್ಣಿ, ನಿಂಗಮ್ಮ ಹಾಗೂ ಕಾಲೇಜಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಸರ್ವರನ್ನು ಕನ್ನಡ ಉಪನ್ಯಾಸಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ರವಿಶಂಕರ ವಮ್ಮಾ ಸ್ವಾಗತಿಸಿದರು. ಪ್ರಶಾಂತ ಮಸ್ತಕರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X