Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅ.18 ರಂದು ನಡೆಯುವ ದಾಸ ಸಾಹಿತ್ಯ...

ಅ.18 ರಂದು ನಡೆಯುವ ದಾಸ ಸಾಹಿತ್ಯ ಸಮ್ಮೇಳನಾಧ್ಯಕ್ಷ ಶ್ರೀನಿವಾಸ ಸಿರನೂರಕರ್ ಅವರಿಗೆ ಅಧಿಕೃತ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ16 Oct 2025 8:43 PM IST
share
ಅ.18 ರಂದು ನಡೆಯುವ ದಾಸ ಸಾಹಿತ್ಯ ಸಮ್ಮೇಳನಾಧ್ಯಕ್ಷ ಶ್ರೀನಿವಾಸ ಸಿರನೂರಕರ್ ಅವರಿಗೆ ಅಧಿಕೃತ ಆಹ್ವಾನ

ಕಲಬುರಗಿ: ಸಾಹಿತ್ಯ ಕಾರ್ಯ ಚಟುವಟಿಕೆಗಳಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೊಡುಗೆ ಅನನ್ಯವಾಗಿದೆ ಎಂದು ಮೂರನೇ ದಾಸ ಸಾಹಿತ್ಯ ಸಮ್ಮೇಳನದ ನಿಯೋಜಿತ ಸಮ್ಮೇಳನಾಧ್ಯಕ್ಷ ಡಾ. ಶ್ರೀನಿವಾಸ ಸಿರನೂರಕರ್ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ವಲಯದ ವತಿಯಿಂದ ಅಕ್ಟೋಬರ್ 18 ರಂದು ನಗರದ ಕನ್ನಡ ಭವನದಲ್ಲಿ ಏರ್ಪಡಿಸಿರುವ ಒಂದು ದಿನದ ಕಲಬುರಗಿ ವಿಭಾಗ ದಾಸ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಶ್ರೀನಿವಾಸ ಸಿರನೂರಕರ್ ಅವರಿಗೆ ಅವರ ನಿವಾಸದಲ್ಲಿ ಅಧಿಕೃತ ಆಹ್ವಾನ ಸ್ವೀಕರಿಸಿ ಮಾತನಾಡಿದ ಅವರು, ಶರಣರು, ಸಂತರು ಹಾಗೂ ಸೂಫಿ ಸಂತರ ನಾಡಿನಲ್ಲಿ ಇಂಥ ಸಮನ್ವಯ ಸಾಹಿತ್ಯ ಹುಟ್ಟಿ ಬೆಳೆದಿರುವುದು ಹೆಮ್ಮೆಯ ಸಂಗತಿ. ಸಾಹಿತ್ಯ ಮನುಷ್ಯನನ್ನು ಮಾನವೀಯ ನೆಲೆಯಲ್ಲಿ ರೂಪಿಸುತ್ತದೆ. ಜತೆಗೆ ಸಮಾಜ ಪರಿವರ್ತನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದಾಸ ಸಾಹಿತ್ಯ ಸಮ್ಮೇಳನ ಈ ನಾಡಿನ ಆಚಾರ, ಅರಿವು ಮೂಡಿಸಿ ಸಮಷ್ಟಿ ಪ್ರಜ್ಞೆ ಬೆಳೆಸುತ್ತದೆ. ಈ ದಿಸೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಂಗಾಯಣ ಮಾಜಿ ನಿರ್ದೇಶಕ ಪ್ರಭಾಕರ ಜೋಶಿ ಮಾತನಾಡಿ, ದಾಸ ಸಾಹಿತ್ಯ ಬಗ್ಗೆ ಅಧ್ಯಯನ, ಸಂಶೋಧನೆ ಮಾಡಿರುವ ಓರ್ವ ಸಾಹಿತಿಯನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಕಸಾಪದ ಘನತೆ ಮತ್ತಷ್ಟು ಹೆಚ್ಚಿದೆ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಸಾಹಿತ್ಯ ಕ್ಷೇತ್ರದಿಂದ ವಿಮುಖರಾಗುತ್ತಿರುವ ಯುವ ಪೀಳಿಗೆಯನ್ನು ಇಂಥ ಸಮಾಜಮುಖಿ ಕಾರ್ಯಕ್ರಮಗಳ ಆಯೋಜನೆಯ ಮೂಲಕ ಸಾಹಿತ್ಯ ಕ್ಷೇತ್ರದತ್ತ ಆಕರ್ಷಿಸುವ ಪ್ರಯತ್ನ ಮಾಡಲಾಗುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯಲ್ಲಿ ಅನೇಕ ಪ್ರಥಮ ಸಮ್ಮೇಳನಗಳಿಗೆ ಮುನ್ನುಡಿ ಬರೆದಿದೆ. ನಿತ್ಯ ನೂತನ ಕಾರ್ಯಕ್ರಮಗಳ ಮೂಲಕ ಕನ್ನಡ ನಿತ್ಯೋತ್ಸವದ ರೀತಿಯಲ್ಲಿ ಕಾರ್ಯಕ್ರಮಗಳು ಆಯೋಜಿಸಲಾಗುತ್ತಿದೆ ಎಂದರು.

ಶರಣಗೌಡ ಪಾಟೀಲ ಪಾಳಾ, ಕಸಾಪ ದಕ್ಷಿಣ ವಲಯದ ಅಧ್ಯಕ್ಷ ರವಿಕುಮಾರ ಶಹಾಪೂರಕರ್, ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಶರಣರಾಜ ಛಪ್ಪರಬಂದಿ, ಕಲ್ಯಾಣಕುಮಾರ ಶೀಲವಂತ, ರವೀಂದ್ರಕುಮಾರ ಭಂಟನಳ್ಳಿ, ಧರ್ಮರಾಜ ಜವಳಿ, ಶಿವಾನಂದ ಸುರವಸೆ, ಎಂ.ಎನ್. ಸುಗಂಧಿ, ಮಂಜುನಾಥ ಕಂಬಾಳಿಮಠ, ಮಲ್ಲಿನಾಥ ಸಂಗಶೆಟ್ಟಿ, ಗಣೇಶ ಚಿನ್ನಾಕಾರ, ಬಾಬುರಾವ ಪಾಟೀಲ, ಗಂಗಾಧರ, ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ರಾಜೇಂದ್ರ ಮಾಡಬೂಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X