ಛಲದಿಂದ ಮಾತ್ರ ನಿರ್ದಿಷ್ಟ ಗುರಿ ಸಾಧಿಸಲು ಸಾಧ್ಯ: ಚೈತ್ರಾ ಬಿ.

ಕಲಬುರಗಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಧನೆಯ ಛಲ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಅಂತರರಾಷ್ಟ್ರೀಯ ಖೋಖೋ ಕ್ರೀಡಾಪಟು ಚೈತ್ರಾ ಬಿ. ಹೇಳಿದರು.
ನಗರದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯವು ಶನಿವಾರ ಕಲಾ ಅಕಾಡೆಮಿ ಸಮಾರೋಪ ಮತ್ತು ಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಶಿಕ್ಷಣವು ವಿದ್ಯಾರ್ಥಿಗಳ ಜೀವನದಲ್ಲಿ ಜ್ಞಾನ ಮಾತ್ರವಲ್ಲ, ಉತ್ತಮ ವ್ಯಕ್ತಿತ್ವ, ಶಿಸ್ತು, ನೈತಿಕ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿ ಬೆಳೆಸುವ ಶಕ್ತಿಯಾಗಿದೆ. ಕಠಿಣ ಪರಿಶ್ರಮ, ಆತ್ಮವಿಶ್ವಾಸ ಮತ್ತು ನಿರಂತರ ಕಲಿಕೆಯ ಮನೋಭಾವ ಅಗತ್ಯವಿದೆ. ಸಾಧನೆ ಮೆಟ್ಟಿಲೇರಲು ತಾವು ಸಹಿಸಿದ ಕಷ್ಟಗಳನ್ನು ತಿಳಿಸಿದರು.
6ನೇ ತರಗತಿಯಲ್ಲಿರುವಾಗಲೇ ಖೋಖೋ ಆಟದಲ್ಲಿ ನಿರಂತರ ಪಯತ್ನಪಟ್ಟು ರಾಷ್ಟ್ರೀಯ, ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಮುಡಿಗೆರಿಸಿಕೊಂಡು, 2025 ರಲ್ಲಿ ಖೋಖೋ ವಿಶ್ವಕಪ್ ಪಡೆಯುವಲ್ಲಿ ಪ್ರಮುಖ ಪಾತ್ರವಹಿಸಿದಾಗಿ ತಿಳಿಸಿದರು.
ಅತಿಥಿಗಳಾದ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ದಶರಥ ಮೇತ್ರೆ ಮಾತನಾಡಿ, ಜೀವನದಲ್ಲಿ ದೊಡ್ಡ ಕನಸುಗಳನ್ನು ಕಾಣಿ, ಆ ಕನಸುಗಳನ್ನು ನನಸಾಗಿಸಲು ಸ್ಪಷ್ಟವಾದ ಗುರಿ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ. ಎಷ್ಟೇ ಕಷ್ಟಗಳು ಎದುರಾದರೂ ನಿಮ್ಮ ಗುರಿಯಿಂದ ವಿಚಲಿತರಾಗಬೇಡಿ ಎಂದು ಕಿವಿ ಮಾತು ಹೇಳಿದರು.
ಇನ್ನೋರ್ವ ಅತಿಥಿಗಳಾದ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಾಮಕೃಷ್ಣ ರೆಡ್ಡಿ ಮಾತನಾಡಿ, ಉನ್ನತ ಶಿಕ್ಷಣ, ಉದ್ಯೋಗ, ಉದ್ಯಮ ಅಥವಾ ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿದರೂ ಸಮಾಜದ ಅಭಿವೃದ್ಧಿಗೆ ನಿಮ್ಮ ಕೊಡುಗೆ ನೀಡುವ ಜವಾಬ್ದಾರಿಯುತ ನಾಗರಿಕರಾಗಿರಿ. ರಾಷ್ಟçಮಟ್ಟದಲ್ಲಿ ಸಾಧನೆಗೈದವರನ್ನು ಮಾದರಿಯಾಗಿಸಿಕೊಂಡು ಸಾಧನೆಯಶಿಖರವನ್ನೆರಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಸುರೇಶಕುಮಾರ ನಂದಗಾoವ ಮಾತನಾಡಿದರು.
ವಿವಿಧ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಾಧ್ಯಾಪಕರಾದ ಡಾ.ಲಕ್ಮ್ಷಿಪುತ್ರ ಸ್ವಾಗತಿಸಿದರೆ, ಅನಿತಾ ಗೊಬ್ಬುರ್, ಹೆಬ್ಜಿಬಾ ನಿರೂಪಿಸಿದರು. ಡಾ.ಆರತಿ ವಂದಿಸಿದರು. ಸಂಗೀತ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.






