Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ 3ನೇ ರಾಷ್ಟ್ರೀಯ ಮೇಳಕ್ಕೆ...

ಕಲಬುರಗಿ 3ನೇ ರಾಷ್ಟ್ರೀಯ ಮೇಳಕ್ಕೆ ಸಾಕ್ಷಿಯಾಗಲಿರುವ ನಮ್ಮ ʼಸರಸ್ ಮೇಳ-2025ʼ

ಸ್ವಚ್ಛತೆ, ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ಕೊಡಿ: ಬಿ.ಫೌಝಿಯಾ ತರನ್ನುಮ್

ವಾರ್ತಾಭಾರತಿವಾರ್ತಾಭಾರತಿ22 Feb 2025 7:32 PM IST
share
Photo of Metting

ಕಲಬುರಗಿ : ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನ ಜಾತ್ರೆ ಮೈದಾನದಲ್ಲಿ ಇದೇ ಫೆ.24 ರಿಂದ 10 ದಿನಗಳ ಕಾಲ ರಾಷ್ಟ್ರ ಮಟ್ಟದ ಮಹಿಳಾ ಸ್ವ-ಸಹಾಯ ಗುಂಪುಗಳು ತಯ್ಯಾರಿಸಿದ ವಸ್ತುಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುವುದರಿಂದ 10 ದಿನಯುದ್ದಕ್ಕೂ ಸ್ಬಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹೇಳಿದರು.

ಶನಿವಾರ ಇಲ್ಲಿನ ಡಿಸಿ ಕಚೇರಿ ಸಭಾಂಗಣದಲ್ಲಿ ಸರಸ್ ಮೇಳ ಸಂಬಂಧ ರಚಿಸಲಾಗಿರುವ ವಿವಿಧ ಸಮಿತಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಸ ಸಂಗ್ರಹಣೆಗೆ ಪಾಲಿಕೆ ವತಿಯಿಂದ ಹೆಚ್ಚಿನ ಪೌರಕಾರ್ಮಿಕರನ್ನು ನೇಮಿಸಬೇಕು. ಅಲ್ಲಲ್ಲಿ ಬಯೋ ಟಾಯಲೆಟ್ ವ್ಯವಸ್ಥೆ ಮಾಡಬೇಕು ಎಂದರು.

ರಾಷ್ಟ್ರ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಇದಾಗಿರುವುದರಿಂದ ಮಾರಾಟಕ್ಕೆ ಜನ ಬರ್ತಾರೆ. ಹೆಚ್ಚಿನ ರೀತಿಯಲ್ಲಿ ಪ್ರಚಾರ ಮಾಡಬೇಕು. ಪ್ರತಿ ದಿನ ಸಂಜೆ ಸಾಂಸ್ಕ್ರತಿಕ ಕಾರ್ಯಕ್ರಮಗಳು ಇರುವುದರಿಂದ ಸಹಜವಾಗಿಯೇ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಪಾರ್ಕಿಂಗ್ ವ್ಯವಸ್ಥೆ ತುಂಬಾ ಅಚ್ಚುಕಟ್ಟಾಗಿ ಮಾಡಬೇಕು. ಸುಗಮ ಸಂಚಾರಕ್ಕೆ ಹೆಚ್ಚಿನ ಟ್ರಾಫಿಕ್ ಸಿಬ್ಬಂದಿ ನಿಯೋಜನೆ ಜೊತೆಗೆ ಜಾತ್ರೆ ಮೈದಾನ ಸುತ್ತ ಸೈನೇಜ್ ಬೋರ್ಡ್ ಅಳವಡಿಸಬೇಕು ಎಂದರು.

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಬೇಕು ಎಂದ ಜಿಲ್ಲಾಧಿಕಾರಿಗಳು, ಎರಡು ಶಿಪ್ಟ್ ನಲ್ಲಿ ವೈದ್ಯರು ಕೆಲಸ ನಿರ್ವಹಿಸುವಂತೆ ಅಂಬುಲೆನ್ಸ್ ವಾಹನದ ಜೊತೆಗೆ ಒಂದು ವೈದ್ಯಕೀಯ ತಂಡ ಮತ್ತು ಮುಂಜಾಗ್ರತೆಯಾಗಿ ಅಗ್ನಿ ಅವಘಡ ನಿಯಂತ್ರಣಕ್ಕೆ ಅಗ್ನಿಶಾಮಕ ತಂಡ ಸ್ಥಳದಲ್ಲಿ ತೈನಾತಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಡಿ.ಸಿ. ನಿರ್ದೇಶನ ನೀಡಿದರು.

ಬೇಸಿಗೆ ಇರುವ ಕಾರಣ ಕುಡಿಯುವ ನೀರು ನಿರಂತರ ಪೂರೈಸುವ ವ್ಯವಸ್ಥೆ ಆಗಬೇಕು. ವಿವಿಧ ರಾಜ್ಯಗಳಿಂದ ಬರುವ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಊಟದ ವ್ಯವಸ್ಥೆ, ವಸತಿ ಎಲ್ಲವು ಅಚ್ಚುಕಟಾಗಿ ಮಾಡಲು ಪರಸ್ಪರ ಅಧಿಕಾರಿಗಳು ಸಮನ್ವಯ ಸಾಧಿಸಬೇಕು. ಮೇಳ ಯಶಸ್ಸಿಗೆ ವೇದಿಕೆ, ಆಹಾರ, ಸಆರಿಗೆ, ಸಾಂಸ್ಕೃತಿಕ, ಮಾಧ್ಯಮ, ನೀರು ಸರಬರಾಜು ಹಾಗೂ ನೈರ್ಮಲ್ಯ, ಸುರಕ್ಷಾ, ಅಗ್ನಿಶಾಮಕ ಹೀಗೆ ಒಟ್ಟು 8 ಸಮಿತಿಗಳನ್ನು ರಚಿಸಿ ಕೆಲಸ ಕಾರ್ಯ ಹಂಚಿಕೆ ಮಾಡಿದ್ದು, ಅದರಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಚಾಚು ತಪ್ಪದೆ ಮಾಡಬೇಕು ಎಂದರು.

ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನದ ಕಾರ್ಯಕ್ರಮ ವ್ಯವಸ್ಥಾಪಕ ಎಂ.ಕೆ.ಅಲಿ ಮಾತನಾಡಿ, 2018 ರಿಂದ ಈ ರೀತಿಯ ರಾಷ್ಟ್ರ ಮಟ್ಟದ ಸರಸ್ ಮೇಳ ಆಯೋಜಿಸಲಾಗುತ್ತಿದೆ. ಬೆಂಗಳೂರು, ಬೆಳಗಾವಿಯಲ್ಲಿ ಈಗಾಗಲ ಮಾಡಿದ್ದು, ಕಲಬುರಗಿ ಮೂರನೇ ಮೇಳಕ್ಕೆ ಸಾಕ್ಣಿಯಾಗಲಿದೆ. ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಾರಾಟ ಮೇಳ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನದ ಕಾರ್ಯಕ್ರಮ ವ್ಯವಸ್ಥಾಪಕ ಬೆಳ್ಳಿಗೌಡ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗದೇವಪ್ಪ ಸೇರಿದಂತೆ ವಿವಿಧ ಸಮಿತಿಯ ಅನೇಕ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X