ಕಲಬುರಗಿ | ಚಿತ್ತಾಪುರದಲ್ಲಿ ಪಥಸಂಚಲನ: ಮತ್ತೊಂದು ಸಭೆಗೆ ಸೂಚಿಸಿ ನ.7ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಕಲಬುರಗಿ : ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಅಕ್ಟೋಬರ್ 28 ರಂದು ನಡೆದಿದ್ದ ಸಭೆ ಯಶಸ್ವಿಯಾಗದ ಕಾರಣ ಅಡ್ವೊಕೇಟ್ ಜನರಲ್ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಬೇಕೆಂದು ಸೂಚಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿಕೆ ಮಾಡಿದೆ.
ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ ವಿಚಾರಣೆ ನಡೆಸಿದ್ದ ಕಲಬುರಗಿ ಹೈಕೋರ್ಟ್ ಪೀಠ, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಕಚೇರಿಯಲ್ಲಿ ನವೆಂಬರ್ 5 ರಂದು ಮತ್ತೊಂದು ಸಭೆಯನ್ನು ನಡೆಸಿ, ತೀರ್ಮಾನ ಕೈಗೊಳ್ಳಲು ಸೂಚಿಸಿದೆ. ಇದಕ್ಕೆ ಸರಕಾರ ವ್ಯವಸ್ಥೆ ಮಾಡಬೇಕು ಎಂದು ಹೇಳಿದೆ.
Next Story





