ಕಾಳಗಿಯಲ್ಲಿ ಗಣೇಶೋತ್ಸವ ಅಂಗವಾಗಿ ಶಾಂತಿ ಸಭೆ
ಶಾಂತಿ, ಸೌಹಾರ್ದತೆಯಿಂದ ಗಣೇಶೋತ್ಸವ ಆಚರಿಸಲು ಡಿವೈಎಸ್ಪಿ ಮನವಿ

ಕಾಳಗಿ: ಗಣೇಶೋತ್ಸವದ ಅಂಗವಾಗಿ ಪಟ್ಟಣದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರ ನೇತೃತ್ವದಲ್ಲಿ ಗುರುವಾರ ಶಾಂತಿ ಸಭೆ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಾರ್ವಜನಿಕರು ಹಾಗೂ ಗಣೇಶ ಮಂಡಳಿಗಳ ಪದಾಧಿಕಾರಿಗಳು ಗಣೇಶೋತ್ಸವವನ್ನು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು.
ಉತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕರಿಸಿ, ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.
ಸರ್ವಧರ್ಮೀಯರು ಭಾಗವಹಿಸಿದ್ದ ಸಭೆಯಲ್ಲಿ ಶಾಂತಿ, ಸಹಬಾಳ್ವೆ ಮತ್ತು ಸೌಹಾರ್ದತೆಯಿಂದ ಗಣೇಶೋತ್ಸವ ಆಚರಿಸುವ ಸಂಕಲ್ಪ ಮಾಡಲಾಯಿತು.
ಗ್ರೇಡ್-1ತಹಶೀಲ್ದಾರ್ ಪೃಥ್ವಿ ರಾಜ ಪಾಟೀಲ, ಸಿಪಿಐ ಜಗದೇವಪ್ಪ ಪಾಳಾ, ಪಿಎಸ್ ಐ ಸಿದ್ದಲಿಂಗ, ತಾಪಂ.ಎಡಿ ಗಂಗಾಧರ ವಿಶ್ವಕರ್ಮ, ಪಪಂ.ಆರೋಗ್ಯ ಅಧಿಕಾರಿ ರವೀಂದ್ರ, ಜೇಸ್ಕಾಂ. ಅಧಿಕಾರಿ ಗೋವಿಂದ, ಗ್ರಾಪಂ.ಮಾಜಿ ಅಧ್ಯಕ್ಷ ರಾಘವೇಂದ್ರ ಗುತ್ತೇದಾರ, ಜೀಯಾವೋದ್ದಿನ್ ಸೌದಾಗಾರ, ಜಗನ್ನಾಥ ಚಂದನಕೇರಿ, ದತ್ತು ಗುತ್ತೇದಾರ, ಪ್ರಶಾಂತ ಕದಂ, ತಾಯಪ್ಪ ದಂಡಗೂಲಕರ, ಪುರುಶೋತ್ತಮ ಗುತ್ತೇದಾರ, ಇಬ್ರಾಹಿಂ ಶಾಹಾ, ಸಂತೋಷ ನರನಾಳ, ಸುಂದರ ಡಿ.ಸಾಗರ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಗಣೇಶ ಮಂಡಳಿಗಳ ಪದಾಧಿಕಾರಿಗಳು, ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.






