ಸ್ಪರ್ಧಾತ್ಮಕ ವಿಷಯಗಳ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ : ಪಾಟೀಲ್

ಕಲಬುರಗಿ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪರೀಕ್ಷೆಗಳು ಎದುರಿಸುವ ದೃಷ್ಟಿಯಿಂದ ಸ್ಪರ್ಧಾತ್ಮಕ ವಿಷಯಗಳ ಅಧ್ಯಯನದಿಂದ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಕನ್ನಡ ಜಾನಪದ ಪರಿಷತ್ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಡಿ.ಎಂ.ಪಾಟೀಲ್ ಅಭಿಪ್ರಾಯಪಟ್ಟರು.
ಆಳಂದ ಪಟ್ಟಣದ ದೇವರಾಜ ಅರಸ್ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ ಹಮ್ಮಿಕೊಂಡ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯುವ ಸಮೂಹ ದಾರಿ ತಪ್ಪದೆ ಬದುಕು ರೂಪಿಸಿಕೊಳ್ಳಲು ಸತತ ಅಧ್ಯಯನ ಶೀಲರಾಗುವಂತೆ ಮನವರಿಕೆ ಮಾಡಿಕೊಟ್ಟರು. ಸಾಧನೆಗೆ ಅಸಾಧ್ಯವಾದದು ಯಾವುದು ಇಲ್ಲ. ಸಾಧಿಸುವ ಛಲ ಇದ್ದಾಗ ಮಾತ್ರ ಪ್ರತಿಭೆ ಅನಾವರಣಗೊಂಡು ಉನ್ನತ ಹುದ್ದೆಗೇರಲು ಸಾಧ್ಯವಾಗುತ್ತದೆ ಎಂದರು.
ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶರಣಬಸಪ್ಪ ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಸತಿ ನಿಲಯಗಳಲ್ಲಿ ಇದ್ದು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಇನ್ನು ಶೈಕ್ಷಣಿಕವಾಗಿ ಹೆಚ್ಚಿನ ಓದು, ಬದುಕಿನ ದಾರಿ ಕಟ್ಟಿಕೊಳ್ಳಲು ಮಾಡಬೇಕಾದ ಪ್ರಯತ್ನಗಳ ಕುರಿತು ಕೌಶಲಾಭಿವೃದ್ದಿ ಮಾಹಿತಿ ನೀಡಲಾಗುತ್ತಿದ್ದು, ಇದರ ಪ್ರಯೋಜನ ಪಡೆಯಬೇಕು ಎಂದರು.
ಅರಣ್ಯ ಇಲಾಖೆಯ ಉಪ ಅರಣ್ಯಾಧಿಕಾರಿ ರಾಘವೇಂದ್ರ ಗಾಯಕವಾಡ ಅವರು ಪರಿಸರ ಸಂರಕ್ಷಣೆ ಮತ್ತು ಪ್ರವಾಸೋಧ್ಯಮ ಕುರಿತು ಮಕ್ಕಳಿಗೆ ಮನಮುಟ್ಟುವಂತೆ ಅರಣ್ಯದ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು.
ನಿಲಯ ಮೇಲ್ವಿಚಾರಕ ಹಣಮಂತ ಬಿರಾದಾರ ಇವರು ಶಿಬಿರಗಳ ಉದ್ದೇಶದ ಬಗ್ಗೆ ವಿವರಿಸಿದರು. ಮೇಲ್ವಿಚಾರಕಿ ಕವಿತಾ, ಶಿವಬಸಂತಾಬಾಯಿ ಇದ್ದರು. ಮಹಾದೇವ ಸ್ವಾಗತಿಸಿದರು. ಭಾಗ್ಯಶ್ರೀ ಪ್ರಾರ್ಥಿಸಿದರು. ಆಳಂದ, ಕಡಗಂಚಿ ವಸತಿ ನಿಲಯಗಳ ಬಾಲಕರು ಮತ್ತು ಬಾಲಕಿಯರು ಭಾಗವಹಿಸಿದ್ದರು







