Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯ ಬಹಮನಿ ಕೋಟೆಯನ್ನು ‘ಮನ್ ಕಿ...

ಕಲಬುರಗಿಯ ಬಹಮನಿ ಕೋಟೆಯನ್ನು ‘ಮನ್ ಕಿ ಬಾತ್’ನಲ್ಲಿ ಉಲ್ಲೇಖಿಸಿದ ಪ್ರಧಾನಿ ಮೋದಿ

ರಾಷ್ಟ್ರ ಮಟ್ಟದಲ್ಲಿ ಪ್ರಶಂಸೆ ಸಲ್ಲಿಸುವುದಷ್ಟೇ ಸಾಕಾಗುವುದಿಲ್ಲ, ನೆಲಮಟ್ಟದ ವಾಸ್ತವಿಕತೆಯ ನಿರ್ಲಕ್ಷ್ಯವಾಗಿದೆ : ಸಂಶೋಧಕರ ಆರೋಪ

ವಾರ್ತಾಭಾರತಿವಾರ್ತಾಭಾರತಿ29 July 2025 4:56 PM IST
share
ಕಲಬುರಗಿಯ ಬಹಮನಿ ಕೋಟೆಯನ್ನು ‘ಮನ್ ಕಿ ಬಾತ್’ನಲ್ಲಿ ಉಲ್ಲೇಖಿಸಿದ ಪ್ರಧಾನಿ ಮೋದಿ

ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಕಲಬುರಗಿಯ ಬಹಮನಿ ಕೋಟೆಯನ್ನು ಉಲ್ಲೇಖಿಸಿರುವುದು ಸ್ವಾಗತಾರ್ಹವಾಗಿದೆ. ಪುರಾತತ್ವ ಇಲಾಖೆಯ ವಶದಲ್ಲಿರುವ ಈ ಸ್ಮಾರಕವನ್ನು ಇಲಾಖೆಯೇ ಪ್ರಧಾನಮಂತ್ರಿಗಳಿಗೆ ಪರಿಚಯಿಸಿರಬಹುದು ಎಂಬ ಅಭಿಪ್ರಾಯವಿದೆ. ಆದರೆ, ರಾಷ್ಟ್ರ ಮಟ್ಟದಲ್ಲಿ ಪ್ರಶಂಸೆ ಸಲ್ಲಿಸುವುದಷ್ಟೇ ಸಾಕಾಗುವುದಿಲ್ಲ– ನೆಲಮಟ್ಟದ ವಾಸ್ತವಿಕತೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಸಂಶೋಧಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಇಲ್ಲಿನ ಸಂಶೋಧಕರಾದ ಮುಹಮ್ಮದ್ ಆಯಾಝುದ್ದೀನ್ ಪಟೇಲ್, ರೆಹಮಾನ್ ಪಟೇಲ್ ಹಾಗೂ ಮುಹಮ್ಮದ್ ಇಸ್ಮಾಯಿಲ್ ಅವರು, ಈ ಕಲಬುರಗಿ ಕೋಟೆಯೊಳಗೆ ಏಷ್ಯಾದಲ್ಲೇ ಎರಡನೇ ಅತಿ ದೊಡ್ಡ ಮಸೀದಿ ಇದೆ. ತನ್ನ ವೈಶಿಷ್ಟ್ಯಮಯ ವಾಸ್ತುಶೈಲಿಯಿಂದ ಖ್ಯಾತವಾಗಿರುವ ಈ ಮಸೀದಿಯ ಜೊತೆಗೆ, ವಿಶ್ವದ ಅತ್ಯಂತ ಉದ್ದದ ತೋಪುಗಳಲ್ಲಿ ಒಂದು ಇಲ್ಲಿಯ ಕೋಟೆಯ ಸಂಕೀರ್ಣದಲ್ಲಿದೆ. ಇಂತಹ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿದ ಈ ಸ್ಮಾರಕಗಳು ಇನ್ನೂ ನಿರ್ಲಕ್ಷ್ಯಕ್ಕೊಳಗಾಗಿವೆ ಎಂದಿದ್ದಾರೆ.

ಶೋಧಕರಾದ ಮುಹಮ್ಮದ್ ಆಯಾಝುದ್ದೀನ್ ಪಟೇಲ್, ರೆಹಮಾನ್ ಪಟೇಲ್ ಹಾಗೂ ಮುಹಮ್ಮದ್ ಇಸ್ಮಾಯಿಲ್ ಅವರ ಪ್ರಕಾರ, ಕಳೆದ ಐದು ವರ್ಷಗಳಿಂದ ಜಾಮಾ ಮಸೀದಿಯನ್ನು ಇಲಾಖೆ ನಿರ್ಲಕ್ಷ್ಯ ಮಾಡುತ್ತಿದೆ. ಮಳೆಗಾಲದಲ್ಲಿ ಮೇಲ್ಚಾವಣಿ ಜಿಗುಟಾಗಿ ನೀರು ಸೋರಿಕೆಯಾಗುತ್ತಿರುವುದು ಗಂಭೀರ ಚಿಂತನೆಗೆ ಉಂಟುಮಾಡಿದೆ. ತಕ್ಷಣದ ದುರಸ್ತಿ ಕೈಗೊಳ್ಳದಿದ್ದರೆ, ಈ ವಾಸ್ತುಶಿಲ್ಪದ ಅದ್ಭುತವು ಹಾನಿಗೊಳಗಾಗಿ ಯಾವಾಗಲಾದರೂ ಕುಸಿಯುವ ಅಪಾಯವಿದೆ. ಅದೇ ರೀತಿ, 2016ರಲ್ಲಿ “ವಿಶ್ವದ ಅತ್ಯಂತ ಉದ್ದದ ತೋಪು” ಎಂದು ಗುರುತಿಸಲ್ಪಟ್ಟಿರುವ ಈ ತೋಪು ಇನ್ನೂ ಗಿನ್ನೆಸ್ ದಾಖಲೆ ಪುಸ್ತಕದಲ್ಲಿ ಸ್ಥಾನ ಪಡೆಯಬೇಕಿದೆ. ಇಲಾಖೆಯ ನಿರ್ಲಕ್ಷ್ಯದಿಂದಾಗಿ ಶತಮಾನದಷ್ಟು ಕಾಲ ಬಹಮನಿ ಸಾಮ್ರಾಜ್ಯದ ರಾಜಧಾನಿಯಾಗಿ ಸೇವೆ ಸಲ್ಲಿಸಿದ ಈ 14ನೇ ಶತಮಾನದ ಸ್ಮಾರಕಗಳು ಜಾಗತಿಕ ಪ್ರವಾಸೋದ್ಯಮದಲ್ಲಿ ಅಗತ್ಯವಾದ ಸ್ಥಾನ ಪಡೆಯದೆ ಉಳಿದಿವೆ ಎಂದಿದ್ದಾರೆ.

ಸ್ಮಾರಕಗಳನ್ನು ಕೇವಲ ಪ್ರಶಂಸಿಸುವುದಕ್ಕಿಂತ ಅವುಗಳನ್ನು ಸಂರಕ್ಷಿಸಿ ಪುನಃಸ್ಥಾಪನೆ ಮಾಡುವ ನಿಜವಾದ ಕ್ರಮಗಳನ್ನು ಕೈಗೊಂಡಾಗ ಮಾತ್ರ ಪ್ರಧಾನಮಂತ್ರಿಯವರ ಮಾತಿನ ಅರ್ಥ ಸಾರ್ಥಕವಾಗುತ್ತದೆ ಮತ್ತು ಈ ಐತಿಹಾಸಿಕ ಸ್ಮಾರಕಗಳನ್ನು ಜಗತ್ತಿಗೆ ಪರಿಚಯಿಸುವ ಅವಕಾಶ ಒದಗುತ್ತದೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X