Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸಿದ್ದರಾಮಯ್ಯ ಆಡಳಿತದ ಜಾತಿ ಸಮೀಕ್ಷೆ...

ಸಿದ್ದರಾಮಯ್ಯ ಆಡಳಿತದ ಜಾತಿ ಸಮೀಕ್ಷೆ ಫಲಶ್ರುತಿ ಶೂನ್ಯ: ಪ್ರಮೋದ್ ಮಧ್ವರಾಜ್

ವಾರ್ತಾಭಾರತಿವಾರ್ತಾಭಾರತಿ8 July 2026 1:08 PM IST
share
ಸಿದ್ದರಾಮಯ್ಯ ಆಡಳಿತದ ಜಾತಿ ಸಮೀಕ್ಷೆ ಫಲಶ್ರುತಿ ಶೂನ್ಯ: ಪ್ರಮೋದ್ ಮಧ್ವರಾಜ್

ಕಲಬುರಗಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ಹಿಂದುಳಿದ ವರ್ಗಗಳ ರಕ್ಷಕರು ಹಾಗೂ ಅಭಿವೃದ್ಧಿಯ ಹರಿಕಾರರು ಎಂದು ಹೇಳುತ್ತಲೇ 600 ಕೋಟಿ ರೂ. ವೆಚ್ಚ ಮಾಡಿ ಆಯೋಗಗಳು ಸಲ್ಲಿಸಿದ ವರದಿ ಫಲ ಶ್ರುತಿ ಶೂನ್ಯವಾಗಿದೆ, ಹಿಂದುಳಿದ ವರ್ಗದವರಿಗೆ ಭಾರೀ ಮೋಸವೆಸಗಿದ್ದಾರೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತೀವ್ರ ಆರೋಪಿಸಿದ್ದಾರೆ.

ಕಲಬುರಗಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ ಶೇ. 35ರಷ್ಟು ಇರುವ ಪ್ರವರ್ಗ ಒಂದು ಮತ್ತು ಎರಡು ಹಾಗೂ ಹಿಂದುಳಿದ ವರ್ಗಗಳ ಕುರಿತಾದ ಕಾಂತರಾಜ್ ವರದಿ, ಜಯಪ್ರಕಾಶ್ ಹೆಗಡೆ ವರದಿ, ಮಧುಸೂದನ ನಾಯಕ್ ವರದಿ ಸಿದ್ಧಪಡಿಸಲು 600 ಕೋಟಿ ರೂ. ವೆಚ್ಚ ಮಾಡಿ ಜನರ ತೆರಿಗೆ ಹಣವನ್ನು ಲೂಟಿ ಮಾಡಿದ ಸಿದ್ದರಾಮಯ್ಯ 12 ವರ್ಷಗಳ ಕಾಲ ಜಾತಿ ಗಣತಿ ಹೆಸರಲ್ಲಿ ಕಾಲಹರಣ ಮಾಡಿದರು. ಆದರೆ ಫಲಿತಾಂಶ ಮಾತ್ರ ಶೂನ್ಯವಾಗಿದೆ. ಇದರಿಂದ ಹಿಂದುಳಿದ ವರ್ಗಕ್ಕೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ದ್ರೋಹ ಬಗೆದಿದೆ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಹುಲ್ ಗಾಂಧಿ ಆದೇಶ ನೀಡಿದ ಮರುದಿನ ಮೇ 27ರಂದು ತರಾತುರಿಯಲ್ಲಿ ಮಧುಸೂದನ ನಾಯಕ್ ವರದಿಯನ್ನು ಸ್ವೀಕರಿಸುವ ಶಾಸ್ತ್ರ ಮಾಡಿ ಮುಂಗೈಗೆ ಬೆಲ್ಲ ಹಚ್ಚುವ ರಾಜಕೀಯ ಹುನ್ನಾರ ನಡೆಸಿದರು.ಯಾವುದೇ ಬದ್ಧತೆಯು ಇಲ್ಲದೆ ವರದಿ ಬಹಿರಂಗಪಡಿಸಲು ಕೂಡ ಸಾಧ್ಯವಾಗಿಲ್ಲ. ಅವರು ಹಿಂದುಳಿದ ವರ್ಗಗಳಿಗೆ ಕಣ್ಣಿಗೆ ಮಣ್ಣೆರಚ್ಚುವ ಕೆಲಸ ಮಾಡಿದರು. ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೂಡ ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ ಎಂದು ಮಧ್ವರಾಜ್ ದೂರಿದರು.

ಮಧುಸೂದನ್ ನಾಯಕ ವರದಿ ವಿಷಯ ಈಗ ಹೈಕೋರ್ಟು ಮೆಟ್ಟಿಲೇರಿದ್ದು ವಾದವನ್ನು ಆಗಸ್ಟ್ 20 ಕ್ಕೆ ಮುಂದೂಡಲಾಗಿದೆ. ಸಿದ್ದರಾಮಯ್ಯ ಅವರು ಈಗ ಹೈಕೋರ್ಟಿನತ್ತ ಬೊಟ್ಟು ಮಾಡಲು ಹುನ್ನಾರ ನಡೆಸಿದ್ದಾರೆ ಎಂದು ದೂರಿದರು.

2027ರ ಜನಗಣತಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಾತಿ ಸಮೀಕ್ಷೆ ನಡೆಸಲು ಸೂಚನೆ ನೀಡಿರುವುದು ಉತ್ತಮ ಬೆಳವಣಿಗೆಯಾಗಿದ್ದು ಹಿಂದುಳಿದ ವರ್ಗದವರಿಗೆ ಉತ್ತಮ ಭವಿಷ್ಯ ನಿರ್ಮಾಣ ಮಾಡಲು ಇದರಿಂದ ಸಾಧ್ಯ. 1931ರಲ್ಲಿ ಬ್ರಿಟಿಷರು ಮಾಡಿದ ಕೊನೆಯ ಜಾತಿ ಗಣತಿಯ ನಂತರ ಪ್ರಧಾನ ಮಂತ್ರಿ ನೂರು ವರ್ಷಗಳ ನಂತರ ಮತ್ತೆ ಜಾತಿ ಗಣತಿಗೆ ಆದೇಶ ನೀಡಿರುವುದು ಉತ್ತಮ ಬೆಳವಣಿಗೆಯಾಗಿದೆ. ರಾಜ್ಯ ಸರಕಾರವು ಜಾತಿ ಗಣತಿ ವರದಿ ಬಹಿರಂಗಪಡಿಸಲು ಒತ್ತಾಯಿಸಿ ದೊಡ್ಡ ಮಟ್ಟದಲ್ಲಿ ಹಿಂದುಳಿದ ವರ್ಗಗಳ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಓಬಿಸಿ ಮೋರ್ಚಾದ ವೆಂಕಟೇಶ ಉಪ್ಪಾರ, ಮಾಜಿ ಶಾಸಕ ಸುಭಾಷ್ ಆರ್. ಗುತ್ತೇದಾರ್, ಅವ್ವಣ್ಣ ಮ್ಯಾಕೇರಿ, ಶರಣಪ್ಪ ತಳವಾರ ಈರಣ್ಣ ಹಡಪದ, ಲಿಂಗರಾಜ ಬಿರಾದಾರ, ವಿದ್ಯಾಧರ ಮಂಗಳೂರ, ಸಂಗಣ್ಣ ಹುಳಗುಳಕರ, ದೇವೇಂದ್ರ ಮತಕೂಡ, ಶರಣಗೌಡ ಪಾಟೀಲ್ ಬಸವರಾಜ ಗುಂಡಲಗೇರಿ ರೇವಣಸಿದ್ದಪ್ಪ ಸಂಕಾಲಿ ಮತ್ತಿತರರು ಉಪಸ್ಥಿತರಿದ್ದರು.

Tags

Pramod MadhwarajKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X