Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳನ್ನು...

ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳನ್ನು ಕೆಇಎ ಮೂಲಕ ಆದ್ಯತೆ ಮೇರೆಗೆ ಭರ್ತಿ ಮಾಡಿ: ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ6 Nov 2026 6:33 PM IST
share
ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳನ್ನು ಕೆಇಎ ಮೂಲಕ ಆದ್ಯತೆ ಮೇರೆಗೆ ಭರ್ತಿ ಮಾಡಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ, ನ. 6: ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವ್ಯಾಪ್ತಿಯಿಂದ ಹೊರಗಿರಿಸಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಆದ್ಯತೆ ಮೇರೆಗೆ ಭರ್ತಿ ಮಾಡಿಕೊಳ್ಳಬೇಕು ಎಂದು ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಇಂದು ವಿಕಾಸಸೌಧದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿ ಹಾಗೂ ಸಂವಿಧಾನದ 371(ಜೆ) ವಿಧಿಯ ಅನುಷ್ಠಾನ ಕುರಿತ ಉಪಸಮಿತಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಈ ಭಾಗದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ನ್ಯಾಯಯುತ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸಂವಿಧಾನದ 371(ಜೆ) ವಿಧಿಯನ್ನು ಜಾರಿಗೆ ತರಲಾಗಿದೆ. ಈ ಮಹತ್ವದ ಸಂವಿಧಾನಾತ್ಮಕ ಆಶಯವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಕಾಯ್ದೆಯ ಅನುಷ್ಠಾನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ವಿಳಂಬ ಸಲ್ಲದು ಎಂದು ಸಚಿವರು ಎಚ್ಚರಿಸಿದರು.

ಸಂವಿಧಾನದತ್ತ ಹಕ್ಕು, ಭಿಕ್ಷೆಯಲ್ಲ :

371(ಜೆ) ಕಾಯ್ದೆಯು ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿ ಮತ್ತು ಹಕ್ಕುಗಳ ರಕ್ಷಣೆಗಾಗಿ ಸಾಕಷ್ಟು ಶ್ರಮ ವಹಿಸಿ ಜಾರಿಗೆ ತಂದಿರುವ ಮಹತ್ವದ ಸಂವಿಧಾನಾತ್ಮಕ ಕ್ರಮವಾಗಿದೆ. ಆದರೆ, ಈ ಕಾಯ್ದೆಯ ಆಶಯಕ್ಕೆ ಅನುಗುಣವಾಗಿ ಸೌಲಭ್ಯಗಳನ್ನು ಒದಗಿಸುವ ವಿಚಾರದಲ್ಲಿ ಅಧಿಕಾರಿಗಳು ನಿರೀಕ್ಷಿತ ಗಂಭೀರತೆ ತೋರುತ್ತಿಲ್ಲ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕದ ಜನರು ಈ ಕಾಯ್ದೆಯಡಿ ಶಿಕ್ಷಣ, ಉದ್ಯೋಗ ಸೇರಿದಂತೆ ತಮಗೆ ದೊರೆಯಬೇಕಾದ ಸೌಲಭ್ಯಗಳನ್ನು ಅಧಿಕಾರಯುತವಾಗಿ ಕೇಳುತ್ತಿದ್ದಾರೆಯೇ ಹೊರತು ಯಾರ ಬಳಿಯೂ ಭಿಕ್ಷೆ ಬೇಡುತ್ತಿಲ್ಲ. ಇದು ಸಂವಿಧಾನವೇ ನೀಡಿರುವ ಅವರ ಹಕ್ಕು. ಹೀಗಾಗಿ, 371(ಜೆ) ವಿಧಿಯ ಅನುಷ್ಠಾನವನ್ನು ಅಧಿಕಾರಿಗಳು ಹಗುರವಾಗಿ ಪರಿಗಣಿಸಬಾರದು. ಕಾಯ್ದೆಯ ಆಶಯವನ್ನು ಸಂಪೂರ್ಣವಾಗಿ ಜಾರಿಗೊಳಿಸುವ ಹೊಣೆಗಾರಿಕೆಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಪ್ರತಿಪಾದಿಸಿದರು.

ಕಳೆದ ಸಭೆಯ ನಿರ್ದೇಶನಗಳ ಅನುಷ್ಠಾನಕ್ಕೆ ನಿರ್ಲಕ್ಷ್ಯವೇಕೆ? :

ಹಿಂದಿನ ಸಭೆಯಲ್ಲಿ ಅಧಿಕಾರಿಗಳು ನೀಡಿದ್ದ ಅಂಕಿ-ಅಂಶಗಳಿಗೂ ಇಂದಿನ ಸಭೆಯಲ್ಲಿ ಸಲ್ಲಿಸಿರುವ ಮಾಹಿತಿಗೂ ಯಾವುದೇ ಗಮನಾರ್ಹ ವ್ಯತ್ಯಾಸ ಕಂಡುಬರುತ್ತಿಲ್ಲ. ಕಳೆದ ಸಭೆಯಲ್ಲಿ ಸ್ಪಷ್ಟವಾಗಿ ನೀಡಿದ್ದ ನಿರ್ದೇಶನಗಳ ಅನುಷ್ಠಾನದಲ್ಲಿ ಪ್ರಗತಿ ಸಾಧಿಸದಿರುವುದು, ಅಧಿಕಾರಿಗಳು ಆ ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದನ್ನು ತೋರಿಸುತ್ತದೆ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ನೀಡುವ ನಿರ್ದೇಶನಗಳು ಕೇವಲ ದಾಖಲೆಗಳಿಗೆ ಸೀಮಿತವಾಗಬಾರದು. ಅವುಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸಿ, ಮುಂದಿನ ಸಭೆಯಲ್ಲಿ ಸಾಧಿಸಿರುವ ಪ್ರಗತಿಯ ಸ್ಪಷ್ಟ ಅಂಕಿ-ಅಂಶಗಳನ್ನು ಸಲ್ಲಿಸಬೇಕು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳಲ್ಲಿ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ವೇಗ ನೀಡುವುದರ ಜತೆಗೆ, 371(ಜೆ) ಅಡಿಯಲ್ಲಿ ಈ ಭಾಗದ ಜನರಿಗೆ ದೊರೆಯಬೇಕಾದ ಸಾಂವಿಧಾನಿಕ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದರು.

Tags

Priyank KhargeKEAKalyana Karnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X