Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ಜೈಲಿನಲ್ಲಿ ದುಡಿದ ಹಣದಿಂದ...

ಕಲಬುರಗಿ: ಜೈಲಿನಲ್ಲಿ ದುಡಿದ ಹಣದಿಂದ ಬಂಧಮುಕ್ತನಾದ ಕೈದಿ!

ಬಿಡುಗಡೆಗೆ ಆದೇಶ ನೀಡಿದ್ದರೂ ದಂಡ ಕಟ್ಟಲು ಸಾಧ್ಯವಾಗದೇ ಜೈಲಿನಲ್ಲೇ ಉಳಿದಿದ್ದ ದುರ್ಗಪ್ಪ

ವಾರ್ತಾಭಾರತಿವಾರ್ತಾಭಾರತಿ5 Feb 2025 8:58 PM IST
share
ಕಲಬುರಗಿ: ಜೈಲಿನಲ್ಲಿ ದುಡಿದ ಹಣದಿಂದ ಬಂಧಮುಕ್ತನಾದ ಕೈದಿ!

ಕಲಬುರಗಿ: ಸನ್ನಡತೆಯ ಆಧಾರದ ಮೇಲೆ ಕೋರ್ಟ್ ಬಿಡುಗಡೆಯ ಆದೇಶ ನೀಡಿದರೂ ದಂಡದ ಹಣ ಕಟ್ಟಲು ಸಾಧ್ಯವಾಗದೇ ಜೈಲಿನಲ್ಲೇ ಉಳಿದಿದ್ದ ಕೈದಿ ಕೊನೆಗೆ ತಾನು ಜೈಲಿನಲ್ಲಿ ದುಡಿದ ಹಣದಿಂದ ಬಂಧಮುಕ್ತನಾಗಿರುವ ಅಪರೂಪದ ಘಟನೆ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಜಂತಾಪುರ ಗ್ರಾಮದ ದುರ್ಗಪ್ಪ (65) ಎಂಬವರೇ ಜೈಲಿನ ಅಧಿಕಾರಿ ಆರ್.ಅನಿತಾ ಅವರ ಸಹಾಯದಿಂದ ಬಿಡುಗಡೆಯಾಗಿ ಸಂಬಂಧಿಕರ ಮನೆ ಸೇರಿಕೊಂಡಿರುವ ಕೈದಿಯಾಗಿದ್ದಾರೆ.

ದುರ್ಗಪ್ಪ 2012ರಲ್ಲಿ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2013ರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದರು. ಜೊತೆಗೆ ರೂ. 1.10 ಲಕ್ಷವನ್ನು ದಂಡವಾಗಿ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿತ್ತು. ದಂಡದ ಹಣ ಕಟ್ಟದಿದ್ದರೆ ಒಂದು ವರ್ಷ ಆರು ತಿಂಗಳು ಹೆಚ್ಚುವರಿ ಶಿಕ್ಷೆ ಅನುಭವಿಸುವಂತೆಯೂ ಆದೇಶದಲ್ಲಿ ತಿಳಿಸಲಾಗಿತ್ತು.

ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಸಜಾ ಬಂಧಿಯಾಗಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ದುರ್ಗಪ್ಪನಿಗೆ 2024ರಲ್ಲಿ ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೆ ಆದೇಶ ಪ್ರಕಟವಾಗುತ್ತದೆ. ಬಿಡುಗಡೆಯಾದ ದುರ್ಗಪ್ಪನಿಗೆ ಸಂಬಂಧಿಕರು ಇದ್ದರೂ ಅವರು ಆರ್ಥಿಕವಾಗಿ ಸಂಕಷ್ಟದಲ್ಲಿರುವುದರಿಂದ ಪರಿಹಾರದ ಹಣ ನೀಡಲು ಮುಂದಾಗಿರುವುದಿಲ್ಲ ಎಂದು ತಿಳಿದುಬಂದಿದೆ.

ದುರ್ಗಪ್ಪ ಕಾರಾಗೃಹದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಬ್ಯಾಂಕ್ ಖಾತೆಯಲ್ಲಿ ಜೈಲಿನಲ್ಲಿ ಕೆಲಸ ಮಾಡಿದ ಕೂಲಿ ಮೊತ್ತ ಹಾಗೂ ಉಳಿತಾಯದ ಹಣ ರೂ. 2.80 ಲಕ್ಷದಷ್ಟಿರುವುದನ್ನು ಜೈಲು ಅಧಿಕಾರಿ ಆರ್. ಅನಿತಾ ಅವರು ಗಮನಕ್ಕೆ ಬಂದಿದೆ. ಆದರೆ, ಬೇರೆ ಕಡೆ ಬ್ಯಾಂಕ್ ಖಾತೆಯಲ್ಲಿದ್ದುದರಿಂದ ಅದನ್ನು ಡ್ರಾ ಮಾಡುವುದು ಕಷ್ಟವಾಗಿತ್ತು. ಈ ಕುರಿತಾಗಿ ಆ ಬ್ಯಾಂಕಿನ ಅಧಿಕಾರಿಗಳನ್ನು ಸಂಪರ್ಕಿಸಿದ ಅಧಿಕಾರಿ ಅನಿತಾ ಅವರು, ದುರ್ಗಪ್ಪನೊಂದಿಗೆ ತಮ್ಮ ಸಿಬ್ಬಂದಿಯನ್ನು ಕಳಿಸಿ ಹಣವನ್ನು ಡ್ರಾ ಮಾಡಿಸಿ ರೂ. 1.10 ಲಕ್ಷ ದಂಡದ ಹಣವನ್ನು ಬ್ಯಾಂಕ್ ಮೂಲಕ ಪಾವತಿಸಲು ಸೂಚಿಸಿದ್ದಾರೆ. ಬ್ಯಾಂಕಿನಲ್ಲಿ ದಂಡ ಪಾವತಿಸಿದ ಬಳಿಕ ದುರ್ಗಪ್ಪನಿಗೆ ಬಿಡುಗಡೆಯ ಆದೇಶ ಪ್ರಕಟವಾಗಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X