Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಾಡಿ ಪಟ್ಟಣದಲ್ಲಿ ಸರಕಾರಿ ಕಾಲೇಜು...

ವಾಡಿ ಪಟ್ಟಣದಲ್ಲಿ ಸರಕಾರಿ ಕಾಲೇಜು ಸ್ಥಾಪಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆಗೆ ಪತ್ರಕರ್ತರ ಮನವಿ

ವಾರ್ತಾಭಾರತಿವಾರ್ತಾಭಾರತಿ14 March 2025 2:33 PM IST
share
ವಾಡಿ ಪಟ್ಟಣದಲ್ಲಿ ಸರಕಾರಿ ಕಾಲೇಜು ಸ್ಥಾಪಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆಗೆ ಪತ್ರಕರ್ತರ ಮನವಿ

ಕಲಬುರಗಿ : ವಾಡಿ ಪಟ್ಟಣದಲ್ಲಿ ಸರಕಾರಿ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯ ಸ್ಥಾಪಿಸುವಂತೆ ಕೋರಿ ವಾಡಿಯ ಸ್ಥಳೀಯ ಪತ್ರಕರ್ತರು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಗುರುವಾರ ಬೆಂಗಳೂರಿನ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ವಿವಿಧ ಮಾಧ್ಯಮಗಳ ವರದಿಗಾರರು, ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಕಾಲೇಜು ಬೇಡಿಕೆ ಈಡೇರಿಕೆಗೆ ತಕ್ಷಣ ಕ್ರಮಕೈಗೊಳ್ಳುವಂತೆ ಕೋರಿದ್ದಾರೆ.

ಒಟ್ಟು 13 ಪ್ರಾಥಮಿಕ ಶಾಲೆ ಮತ್ತು ರಾವೂರ, ಇಂಗಳಗಿ, ಲಾಡ್ಲಾಪುರ ಗ್ರಾಮಗಳು ಸೇರಿದಂತೆ ವಾಡಿ ನಗರದಲ್ಲಿ ಒಟ್ಟು 17 ಪ್ರೌಢ ಶಾಲೆಗಳಿವೆ. ಪ್ರತಿವರ್ಷ ಸುಮಾರು 600 ವಿದ್ಯಾರ್ಥಿಗಳು 10ನೇ ತರಗತಿ ಉತ್ತೀರ್ಣರಾಗುತ್ತಾರೆ. ಈ ವಿದ್ಯಾರ್ಥಿಗಳ ಮುಂದಿನ ಶಿಕ್ಷಣಕ್ಕೆ ಸ್ಥಳೀಯವಾಗಿ ಸರ್ಕಾರಿ ಕಾಲೇಜು ಸೌಲಭ್ಯ ಇಲ್ಲ. ಪರಿಣಾಮ ಕಳೆದ ಆರು ದಶಕಗಳಿಂದ ಪ್ರೌಢ ಶಿಕ್ಷಣ ಮುಗಿಸಿದ ವಿದ್ಯಾರ್ಥಿಗಳು ದೂರದ ಕಲಬುರಗಿ, ಯಾದಗಿರಿ, ವಿಜಯಪುರ, ಹೈದರಾಬಾದ್‌, ಬೀದರ್, ರಾಯಚೂರು ಅಥವಾ ಬೆಂಗಳೂರು ನಗರಗಳ ಕಾಲೇಜುಗಳಿಗೆ ಪ್ರವೇಶ ಪಡೆಯಲು ದುಬಾರಿ ಬೆಲೆ ಪಾವತಿಸಿ ಕಷ್ಟಪಡುತ್ತಿದ್ದಾರೆ. ಬಡಕುಟುಂಬದ ವಿದ್ಯಾರ್ಥಿಗಳು ನಗರಗಳ ಖಾಸಗಿ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯಲು ಸಾಧ್ಯವಾಗದೆ ಶಿಕ್ಷಣ ಅಭ್ಯಾಸ ಕೈಬಿಡುತ್ತಿದ್ದಾರೆ. ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯವಂತೂ ಘನಘೋರವಾಗಿದೆ. 10ನೇ ತರಗತಿಗೆ ಶಿಕ್ಷಣ ಸ್ಥಗಿತಗೊಳಿಸುತ್ತಿದ್ದಾರೆ. ಇದು ಹೆಣ್ಣು ಮಕ್ಕಳ ಕಲಿಕಾ ಭವಿಷ್ಯಕ್ಕೆ ದೊಡ್ಡ ಪೆಟ್ಟು ಬೀಳುತ್ತಿದೆ ಎಂದು ಪತ್ರಕರ್ತರು ಕಳವಳ ವ್ಯಕ್ತಪಡಿಸಿದ್ದಾರೆ.

ಪುರಸಭೆ ಆಡಳಿತ ಕೇಂದ್ರ ಸ್ಥಾನವಾಗಿರುವ ವಾಡಿ ಪಟ್ಟಣದಲ್ಲಿ ಸರಕಾರಿ ಕಾಲೇಜು ಅತ್ಯಗತ್ಯವಾಗಿ ಬೇಕಿದೆ. ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಭೂಮಿಯ ಸೌಲಭ್ಯವಿದೆ. ವಿದ್ಯಾರ್ಥಿಗಳ ಸಂಖ್ಯೆಯೂ ದೊಡ್ಡ ಮಟ್ಟದಲ್ಲಿದೆ. ಹೀಗಾಗಿ ವಾಡಿ ಪಟ್ಟಣಕ್ಕೆ ಸರಕಾರಿ ಕಾಲೇಜು ಮಂಜೂರು ಮಾಡಿಸಬೇಕು ಎಂದು ಪತ್ರಕರ್ತರು ಸಚಿವರಲ್ಲಿ ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ವಾಡಿ ಪಟ್ಟಣದಲ್ಲಿ ಸರಕಾರಿ ಕಾಲೇಜು ಸ್ಥಾಪನೆ ಮಾಡುವ ಅಗತ್ಯತೆಯಿದೆ. ಇದಕ್ಕಾಗಿ ನಾನೂ ಸಹ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಸಿದ್ದೇನೆ ಎಂದು ತಿಳಿಸಿದರು.

ಪತ್ರಕರ್ತರಾದ ಮಡಿವಾಳಪ್ಪ ಹೇರೂರ, ಸಿದ್ಧರಾಜು ಮಲಕಂಡಿ, ದಯಾನಂದ ಖಜೂರಿ, ರಾಯಣ್ಣ ಕಮರವಾಡಿ ಅವರು ನಿಯೋಗದಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X