Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಇಂದಿರಾಗಾಂಧಿ ಮಾಡಿದ ಅರ್ಧ ಕೆಲಸವನ್ನಾದರೂ...

ಇಂದಿರಾಗಾಂಧಿ ಮಾಡಿದ ಅರ್ಧ ಕೆಲಸವನ್ನಾದರೂ ಮೋದಿಯವರು ಮಾಡಲಿ : ಪ್ರಿಯಾಂಕ್ ಖರ್ಗೆ

"ಮನ್ ಕಿ ಬಾತ್ ಕೇಳಿ ಸಾಕಾಗಿದೆ, ಕಾಮ್ ಕಿ ಬಾತ್ ಮಾಡಲಿ"

ವಾರ್ತಾಭಾರತಿವಾರ್ತಾಭಾರತಿ28 July 2025 3:00 PM IST
share
ಇಂದಿರಾಗಾಂಧಿ ಮಾಡಿದ ಅರ್ಧ ಕೆಲಸವನ್ನಾದರೂ ಮೋದಿಯವರು ಮಾಡಲಿ : ಪ್ರಿಯಾಂಕ್ ಖರ್ಗೆ

ಕಲಬುರಗಿ : ʼಮಾಜಿ ಪ್ರಧಾನಿ ಇಂದಿರಾಗಾಂಧಿ ಮಾಡಿದ ಕೆಲಸದಲ್ಲಿ ಅರ್ಧದಷ್ಟಾದರೂ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿ ತೋರಿಸಲಿʼ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿ ಬ್ಯಾಂಕ್‌ಗಳ ರಾಷ್ಟ್ರೀಕರಣ, ಭೂಮಿ ಉಳುಮೆಗೆ ತಂದ ಸುಧಾರಣೆ ಹಾಗೂ ಪಾಕಿಸ್ತಾನವನ್ನು ಎರಡು ಭಾಗ ಮಾಡಿದ್ದು ಸೇರಿದಂತೆ ಹಲವಾರು‌‌ ಕ್ರಾಂತಿಕಾರಿ ಬದಲಾವಣೆ ಮಾಡಿದ್ದಾರೆ. ಇಂದಿರಾಗಾಂಧಿ‌ ಅವರು 44 ಬಾರಿ ಪತ್ರಿಕಾಗೋಷ್ಠಿ ಮಾಡಿದ್ದಾರೆ, ಇವರೇನು ಮಾಡಿದ್ದಾರೆ? ಶೂನ್ಯ ಎಂದು ವ್ಯಂಗ್ಯವಾಡಿದರು. ʼಮೊನ್ನೆ ರಾಹುಲ್ ಗಾಂಧಿ ಹೇಳಿದಂತೆ ಮೋದಿಯವರ ಬಗ್ಗೆ ಕೆಲ ಗೋದಿ ಮೀಡಿಯಾಗಳು ಹೈಪ್ ಮಾಡುತ್ತಿದ್ದಾರೆ ಅಷ್ಟೇ, ಎಂದು ವಾಗ್ದಾಳಿ ನಡೆಸಿದರು.

ಕೇಂದ್ರಿಯ ವಿವಿಗಳು ಆರೆಸ್ಸೆಸ್‌ ಶಾಖೆಗಳಾಗಿವೆ:

ಕೇಂದ್ರಿಯ ವಿಶ್ವವಿದ್ಯಾಲಯಗಳು ಆರೆಸ್ಸೆಸ್‌ ಶಾಖೆಗಳಾಂತಾಗಿವೆ ಎಂದು ಆರೋಪಿಸಿದ ಖರ್ಗೆ, ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮ ನಡೆಸಲು ನಮಗೆ ಅನುಮತಿ ನಿರಾಕರಿಸಲಾಗಿದೆ. ಖರ್ಗೆ ಸಾಹೇಬರು ಈ ಭಾಗಕ್ಕೆ ಅನುಕೂಲ ಆಗಲಿ ಎಂದು ಜಿಲ್ಲೆಗೆ ಕೇಂದ್ರೀಯ ವಿವಿ ತಂದರು. ಆದರೆ, ಅದು ಆರೆಸ್ಸೆಸ್‌ ಶಾಖೆ ಮಾಡಲು ಅನುಕೂಲ ಮಾಡಿಕೊಟ್ಟಂತಾಗಿದೆ ಎಂದು ಟೀಕಿಸಿದರು.

ಮೋದಿ ಕೊಡುಗೆ ನೀಡಲಿ, ಆಮೇಲೆ ಮನ್ ಕಿ ಬಾತ್ ಮಾಡಲಿ:

'ಮೋದಿ ಮನ್ ಕಿ ಬಾತ್‌' ಕೇಳಿ ಕೇಳಿ ಸಾಕಾಗಿದೆ. ಏನಾದರೂ ಕೊಡುಗೆ ಕೊಟ್ಟು ಮೋದಿ ಮಾತನಾಡಲಿ. ಈ ಹಿಂದೆ ಕಲಬುರಗಿ ರೊಟ್ಟಿ ಬಗ್ಗೆ ಮಾತನಾಡಿದ್ದರು, ಏನಾದರೂ‌ ಕೊಡುಗೆ ಕೊಟ್ಟಿದ್ದಾರೆಯೇ? ಈಗ ಕಲಬುರಗಿ ಕೋಟೆ ಬಗ್ಗೆ ಮಾತನಾಡಿದ್ದಾರೆ. ಮುಂದಿನ ದಿನ ಮತ್ತೊಂದು‌ ವಿಷಯದ‌ ಬಗ್ಗೆ ಮಾತನಾಡುತ್ತಾರೆ. ಕೊಡುಗೆ ನೀಡಿ ಆಮೇಲೆ ಮಾತನಾಡಲಿ ಎಂದು ಕುಟುಕಿದರು.

ಬಾಡಿಗೆ ಭಾಷಣಕಾರರ‌ ಬಗ್ಗೆ ಏನು ಹೇಳಲಿ?:

ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅಯೋಗ್ಯ ಪದ ಬಳಸಿದ್ದಕ್ಕೆ ಚಕ್ರವರ್ತಿ ಸೂಲಿಬೆಲೆ ಅವರ ಮೇಲೆ ದಾಖಲಾದ ಎಫ್‌ಐಆರ್‌ಅನ್ನು ಸುಪ್ರೀಂ ಕೊರ್ಟ್ ರದ್ದು ಮಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಾಡಿಗೆ ಭಾಷಣಕಾರರ ಬಗ್ಗೆಯಾಗಲೀ, ಅವರ ಬಾಸ್ ಗಳ ಬಗ್ಗೆಯಾಗಲೀ ನಾನೇನು ಉತ್ತರಿಸಲಿ ?. ನಾನು ಯಾವುದಾದರೂ ಎಫ್ ಐ ಆರ್ ಹಾಕಿದ್ದರೆ ತೋರಿಸಲಿ. ಯಾರೋ ಒಬ್ಬರು ಅಲ್ಲಿನ ಸ್ಥಳೀಯ ನಾಯಕರು ಹಾಕಿದ್ದರೆ, ಅದಕ್ಕೆ‌ ನಾನೇನು ಹೇಳಲಿ? ಎಂದರು.

ಸಂತೋಷ್ ಸಭೆ ತೆಗೆದುಕೊಳ್ಳಬೇಕೇ ? :

ರಣದೀಪ್ ಸುರ್ಜೆವಾಲ ಅವರು ಸಚಿವರ ಸಭೆ ಕರೆದಿರುವುದಕ್ಕೆ ಬಿ.ಎಲ್.ಸಂತೋಷ್‌ ಆಕ್ಷೇಪ ವ್ಯಕ್ತಪಡಿಸಿರುವುದರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಸುರ್ಜೆವಾಲ ಬದಲಿಗೆ ದತ್ತಾತ್ರೇಯ ಹೊಸಬಾಳೆ ಅಥವಾ ಸಂತೋಷ್ ಸಭೆ ತೆಗೆದುಕೊಳ್ಳಬೇಕೇ ? ಎಂದು ಪ್ರಶ್ನಿಸಿದರು.

ದಲಿತರಿಗೆ ಮೀಸಲಿಟ್ಟ ಅನುದಾನ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ:

SCP/ TSP ಅನುದಾನ ಡೈವೋರ್ಟ್ ಆಗಿದ್ದರೆ‌ ಆ ಬಗ್ಗೆ ಬಿಜೆಪಿ ದಾಖಲೆ ನೀಡಲಿ. ಹಾಗೆ ಆಗಿದ್ದರೆ ಕ್ರಮ‌ ಜರುಗಿಸಲಾಗುವುದು ಎಂದರು.

ಯೂರಿಯಾ ಸರಬರಾಜಿಗೆ ಕೇಂದ್ರಕ್ಕೆ ಮನವಿ :

ಯೂರಿಯಾ ಕೊರತೆ ಅಷ್ಟೊಂದು ಕಾಣಿಸುತ್ತಿಲ್ಲ. ಕಳೆದ ಒಂದೂವರೆ ತಿಂಗಳ ಹಿಂದೆ ಕೇಂದ್ರ ಕೃಷಿ‌ ಸಚಿವರನ್ನು ಭೇಟಿ ಮಾಡಿ‌ದ ಕೃಷಿ‌ ಸಚಿವ ಚೆಲುವರಾಯಸ್ವಾಮಿ‌ ಯೂರಿಯಾ ಗೊಬ್ಬರ ಸರಬರಾಜಿಗೆ ಆದ್ಯತೆ ನೀಡುವಂತೆ ಮನವಿ‌ ಸಲ್ಲಿಸಿದ್ದರು.

ಈ ಸಲ ನಮಗೆ ಅಗತ್ಯವಿರುವ ಗೊಬ್ಬರ ಸರಬರಾಜು ಮಾಡಿಲ್ಲ. ರಾಜ್ಯದ ಓಪಿನಿಂಗ್ ಬ್ಯಾಲೆನ್ಸನ್ನು‌ ಬೇಡಿಕೆಯಲ್ಲಿ ಕಡಿತಗೊಳಿಸಿದ ಕೇಂದ್ರ ಸರಕಾರ ಉಳಿದ ರಸಗೊಬ್ಬರ ಸರಬರಾಜು‌ ಮಾಡಿದೆ. ಈ ಹಿಂದೆ ರಾಜ್ಯದ ಓಪಿನಿಂಗ್ ಬ್ಯಾಲೆನ್ಸ್ ನ್ನು‌ ಪರಿಗಣಿಸುತ್ತಿರಲಿಲ್ಲ ಎಂದರು.

ಕಲಬುರಗಿ ಜಿಲ್ಲೆಯಲ್ಲಿ ಈ ಸಲ ಶೇ.100 ಬಿತ್ತನೆಯಾಗಿದೆ. 500 ಟನ್ ಗೊಬ್ಬರ ಬೇಡಿಕೆ ಇದ್ದು, 200 ಟನ್ ಗೊಬ್ಬರವನ್ನು ಬಾಗಲಕೋಟೆಯಿಂದ ತರಿಸಲಾಗುತ್ತಿದೆ. ಉಳಿದ 300 ಟನ್ ರಸಗೊಬ್ಬರವನ್ನು ಆದಷ್ಟು ಬೇಗ ತರಿಸಲಾಗುವುದು. ರಸಗೊಬ್ಬರ ವಿಚಾರದಲ್ಲಿ ಇಲ್ಲಿ ಪ್ರತಿಭಟನೆ ಮಾಡುವ ಬದಲು ಬಿಜೆಪಿಗರು ದಿಲ್ಲಿಯಲ್ಲಿ ಪ್ರತಿಭಟನೆ ಮಾಡಿ ರಾಜ್ಯಕ್ಕೆ ಗೊಬ್ಬರ ತರಿಸಿಕೊಡಲಿ ಎಂದು ಸಲಹೆ ನೀಡಿದರು.

ಬೇಸರ ಇಲ್ಲ:

ರಾಜ್ಯ ಸಭಾ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ತಮಗೆ ಸಿಎಂ ಹುದ್ದೆ ಸಿಗದಿರುವ ಬಗ್ಗೆ ಹೇಳಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಂಪೂರ್ಣ ವಿಡಿಯೋ ನೋಡಿದಾಗ ಮಾತ್ರ ಅವರ ಮಾತಿನ ಅರ್ಥ ಆಗುತ್ತದೆ. ಪಕ್ಷಕ್ಕಾಗಿ ಅವರು ದುಡಿದಿದ್ದಾರೆ. ಇಲ್ಲಿಂದ ದಿಲ್ಲಿಯವರೆಗೆ ಅವರು ಮುಟ್ಟಿದ್ದಾರೆ. ಸಿಎಂ ಹುದ್ದೆ ತಪ್ಪಿರುವ ಬಗ್ಗೆ ಅವರಿಗೆ ಯಾವುದೇ ಬೇಸರ ಇಲ್ಲ ಎಂದರು.

ಬಿಜೆಪಿ ಪಕ್ಷ ಚುನಾವಣೆ ಆಯೋಗವನ್ನು ತಮ್ಮ‌‌ ಕೈಗೊಂಬೆಯನ್ನಾಗಿ ಮಾಡಿಕೊಂಡಿದೆ ಎಂದು ಆರೋಪಿಸಿದ ಖರ್ಗೆ, ಕರ್ನಾಟಕದಲ್ಲಿ‌ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಹಾಗೆ ಮಹಾರಾಷ್ಟ್ರದಲ್ಲಿಯೂ ಆಗಿದೆ. ಈ ಬಗ್ಗೆ ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಇಂದಿನಿಂದ ʼಆಪರೇಷನ್‌ ಸಿಂದೂರ್‌ʼ ಬಗ್ಗೆ ಚರ್ಚೆ ಆಗುತ್ತದೆ. ನಂತರ ಚುನಾವಣೆ ಅಕ್ರಮದ ಬಗ್ಗೆ ಎಲ್ಲವೂ ದಾಖಲೆ ಸಮೇತ ಮಾತನಾಡುತ್ತೇವೆ‌ ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ್, ಕುಡಾ ಅಧ್ಯಕ್ಷ ಮಝಹರ್ ಖಾನ್ ಆಲಂ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X