Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ʼಸ್ಟಿಂಗ್ ಆಪರೇಷನ್ʼ ಪ್ರಕರಣ:...

ʼಸ್ಟಿಂಗ್ ಆಪರೇಷನ್ʼ ಪ್ರಕರಣ: ತಪ್ಪಿತಸ್ಥರು ಯಾರೇ ಆಗಿರಲಿ ಕ್ರಮ ಕೈಗೊಳ್ಳುತ್ತೇವೆ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ18 Oct 2026 1:44 PM IST
share
ʼಸ್ಟಿಂಗ್ ಆಪರೇಷನ್ʼ ಪ್ರಕರಣ: ತಪ್ಪಿತಸ್ಥರು ಯಾರೇ ಆಗಿರಲಿ ಕ್ರಮ ಕೈಗೊಳ್ಳುತ್ತೇವೆ : ಪ್ರಿಯಾಂಕ್ ಖರ್ಗೆ

ಕಲಬುರಗಿ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಹಾಗೂ ತಮ್ಮ ಕುಟುಂಬದ ವಿರುದ್ಧ ಮಾಡುತ್ತಿರುವ ಆರೋಪಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಆರೋಪಗಳಿಗೆ ದಾಖಲೆಗಳಿದ್ದರೆ ಅವುಗಳನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ರವಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಜನರ ಹಿತಾಸಕ್ತಿಗಿಂತ ತಮ್ಮ ಸ್ವಹಿತಾಸಕ್ತಿಗಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

ಕುಮಾರಸ್ವಾಮಿ ಅವರು ಪಾದಯಾತ್ರೆ ಮಾಡಿಕೊಂಡು ಆರೋಗ್ಯವಾಗಿರಲಿ. ಅವರ ಬಳಿ ಇರುವ ಎಲ್ಲ ಪುರಾವೆಗಳನ್ನು ಪಾಂಪ್ಲೆಟ್‌ಗಳ ಮೂಲಕ ಜನರಿಗೆ ಹಂಚಲಿ. ನಮ್ಮ ಕುಟುಂಬದ ವಿರುದ್ಧ ಆರೋಪ ಮಾಡುವ ಬದಲು ದಾಖಲೆಗಳನ್ನು ಬಿಡುಗಡೆ ಮಾಡಲಿ. ತಪ್ಪು ನಡೆದಿದ್ದರೆ ತನಿಖೆ ನಡೆಸಲಿ. ತನಿಖಾ ಸಂಸ್ಥೆಗಳು ಅವರ ಬಳಿಯೇ ಇವೆ ಎಂದು ಖರ್ಗೆ ಹೇಳಿದರು.

ಯಾರ ಮೇಲಾದರೂ ಆರೋಪ ಬಂದಾಗ ತನಿಖೆ ನಡೆಸಬಾರದು ಎನ್ನುವುದು ಹೇಗೆ ಸಾಧ್ಯ? ಇದೀಗ ಕುಮಾರಸ್ವಾಮಿ ಅವರ ಕಾರ್ಯಕರ್ತರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಅದನ್ನೂ ಮಾಡಬಾರದು ಎಂದರೆ ಹೇಗೆ? ಕುಮಾರಸ್ವಾಮಿ ಅವರು ಎಲ್ಲ ವಿಚಾರಗಳಲ್ಲೂ ಆರೋಪ ಮಾಡುತ್ತಾರೆ. ಅವರು ಮಾಡುವ ಪ್ರತಿಯೊಂದು ಆರೋಪಕ್ಕೂ ಉತ್ತರ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿದರು.

ದಲಿತರು ಬಲಿಷ್ಠರಾಗುವುದನ್ನು ಸಹಿಸಲು ಆಗುತ್ತಿಲ್ಲ:

ಕುಮಾರಸ್ವಾಮಿ ಅವರು ತಮ್ಮನ್ನು 'ಬಲಿತ ದಲಿತ' ಎಂದು ಕರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಖರ್ಗೆ, ದಲಿತರು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಬಲಿಷ್ಠರಾಗುವುದನ್ನು ಕಂಡು ಕೆಲವರಿಗೆ ಯಾಕೆ ಕಣ್ಣುರಿ ಎಂದು ಪ್ರಶ್ನಿಸಿದರು.

"ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರು ಸಿನಿಮಾ ನಿರ್ಮಾಪಕರಾಗಬಹುದು, ನಿರ್ದೇಶಕರಾಗಬಹುದು, 'ಜಾಗ್ವಾರ್' ಆಗಿ ನಟಿಸಬಹುದು, ರಿಯಲ್ ಎಸ್ಟೇಟ್ ಉದ್ಯಮ ಮಾಡಬಹುದು, ಐಷಾರಾಮಿ ಕಾರುಗಳಲ್ಲಿ ಓಡಾಡಬಹುದು. ಆದರೆ ದಲಿತರು ಕೋಟ್ ಹಾಕಿಕೊಂಡು, ಇಂಗ್ಲಿಷ್ ಮಾತನಾಡಿಕೊಂಡು ಉನ್ನತ ಸ್ಥಾನಕ್ಕೇರಿದರೆ ಇವರಿಗೆ ಕಣ್ಣು ಕುಕ್ಕುತ್ತದೆಯೇ? ದಲಿತರು ಗೃಹ ಸಚಿವರಾಗಬಾರದೇ, ಆರ್ಥಿಕವಾಗಿ ಬಲಿಷ್ಠರಾಗಬಾರದೇ?" ಎಂದು ಪ್ರಶ್ನಿಸಿದರು.

ದಲಿತರು ಉನ್ನತ ಸ್ಥಾನಗಳನ್ನು ಅಲಂಕರಿಸುವುದು ಮತ್ತು ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದನ್ನು ಸಹಿಸದ ಮನೋಭಾವ ಸರಿಯಲ್ಲ. ನಾವು ಸ್ವಾಭಿಮಾನಿಗಳು. ನಮ್ಮ ಕುಟುಂಬದ ವಿರುದ್ಧ ಆರೋಪ ಮಾಡುವವರು ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಹೇಳಿದರು.

ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧ ಏನೆಲ್ಲ ಮಾತನಾಡಿದ್ದರು ಎಂಬುದನ್ನು ಜನರು ನೆನಪಿಸಿಕೊಳ್ಳಬೇಕು. ಈಗ ಸಿದ್ದರಾಮಯ್ಯ ಅವರ ಮೇಲೆ ಪ್ರೀತಿ ತೋರಿಸುತ್ತಿರುವುದರ ಹಿಂದಿನ ರಾಜಕೀಯ ಉದ್ದೇಶವೇನು ಎಂಬುದನ್ನು ಜನರು ಅರ್ಥಮಾಡಿಕೊಳ್ಳುತ್ತಾರೆ ಎಂದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕಣ್ಣೀರು ಹಾಕುವ ಪ್ರಯತ್ನದಿಂದ ಅವರಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಿದೆ. ಕುಮಾರಸ್ವಾಮಿ ಅವರಿಗೆ ತಮ್ಮ ಕುರ್ಚಿ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಅದನ್ನು ಉಳಿಸಿಕೊಳ್ಳಲು ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಮೀಸಲು ಕ್ಷೇತ್ರದಿಂದ ಗೆದ್ದು ಶಾಸಕರಾಗಿರುವ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಖರ್ಗೆ, "ಕುಮಾರಸ್ವಾಮಿ ಅವರು ಕಲಬುರಗಿ ಅಥವಾ ಕರಾವಳಿ ಭಾಗದಲ್ಲಿ ಬಂದು ಚುನಾವಣೆಗೆ ಸ್ಪರ್ಧಿಸಿ ಗೆದ್ದು ತೋರಿಸಲಿ" ಎಂದು ಸವಾಲು ಹಾಕಿದರು.

ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ವೈಜ್ಞಾನಿಕವಾಗಿ ತನಿಖೆ ನಡೆಸಲಾಗುವುದು. ನಮ್ಮ ಪಕ್ಷದವರೇ ಆಗಿರಲಿ ಅಥವಾ ಬೇರೆ ಪಕ್ಷದವರೇ ಆಗಿರಲಿ, ತಪ್ಪು ಮಾಡಿರುವುದು ಸಾಬೀತಾದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು.

ಕರ್ನಾಟಕ ಪೊಲೀಸರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಕರಣಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದರು.

Tags

Sting Operation CasePriyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X