Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮುಂದಿನ 10 ತಿಂಗಳ ಬರಸ್ಥಿತಿ ಎದುರಿಸಲು...

ಮುಂದಿನ 10 ತಿಂಗಳ ಬರಸ್ಥಿತಿ ಎದುರಿಸಲು ಸಿದ್ಧರಾಗಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ10 Aug 2026 8:19 PM IST
share
ಮುಂದಿನ 10 ತಿಂಗಳ ಬರಸ್ಥಿತಿ ಎದುರಿಸಲು ಸಿದ್ಧರಾಗಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ: ಪ್ರಸ್ತುತ ಬರಗಾಲ ಹಿಂದಿನ ಬರಗಾಲಕ್ಕೆ ಅಜಗಜಾಂತರ ವ್ಯತ್ಯಾಸವಿದೆ. ಸೂಪರ್ ಎಲ್ನಿನೋದಿಂದ ಬರದ ಛಾಯೆ ಮುನ್ಸೂಚನೆ ಇರುವ ಕಾರಣ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಹೀಟ್ ವೇವ್ ಗಳನ್ನು ಸಮರ್ಥವಾಗಿ ಎದುರಿಸಲು ಮುಂದಿನ 10 ತಿಂಗಳಿಗೆ ಬೇಕಾದ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳಿಗೆ ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ.-ಆಡಳಿತ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ (ಪ್ರಕೃತಿ ವಿಕೋಪ) ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.

ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರ ಪರಿಸ್ಥಿತಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇನ್ನು ಮಳೆಗಾಲ ಪೂರ್ಣಗೊಳ್ಳದ ಕಾರಣ ಎನ್.ಡಿ.ಆರ್.ಎಫ್. ನಿಯಮಾವಳಿ ಪ್ರಕಾರ ಘೋಷಣೆ ಮಾಡಿಲ್ಲ. ಮುಂದಿನ ದಿನದಲ್ಲಿ ಇದು ಹೀಗೆ ಮುಂದುವರೆದರೆ ಬರ ಘೋಷಿಸಿದಲ್ಲಿ ಅದಕ್ಕೆ ಪೂರಕವಾಗಿ ತಳ ಹಂತದಿಂದ ಕೆಲಸ ಕಾರ್ಯ ಮಾಡಲು ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಸಿದ್ಧರಿರಬೇಕು. ಜನ ಮತ್ತು ಜಾನುವಾರುಗಳಗೆ ನೀರು ಪೂರೈಕೆ ನಮ್ಮ ಮೊದಲ ಆದ್ಯತೆಯಾಗಿರಬೇಕು. ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ನೋಡಿಕೋಳ್ಳುವುದರ ಜೊತೆಗೆ ಗೋಶಾಲಾ ತೆರೆಯಲು ಊರು ಗುರತಿಸಬೇಕು ಎಂದರು.

ವಿಶೇಷವಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ನೀರಿನ ಸಮಸ್ಯೆ ಇರುವ ಹಳ್ಳಿಗಳಿಗೆ ಹೋಗಿ ಅವರ ಸಮಸ್ಯೆ ಆಲಿಸಬೇಕು. ಚಿತ್ತಾಪುರ, ಸೇಡಂ, ಚಿಂಚೋಳಿಯಿಂದ ಕುಡಿಯುವ ನೀರಿನ ಸಮಸ್ಯೆ ಕುರಿತು ಅಲ್ಲಿನ ಜನ ನನಗೆ ಕರೆ ಮಾಡುತ್ತಾರೆ. ಅನೇಕ ಅಧಿಕಾರಿಗಳು ಮೋಬೈಲ್ ಕರೆ ಸ್ವೀಕರಿಸಿಲ್ಲ ಎಂಬ ಆರೋಪವಿದೆ. ಸಚಿವನಾಗಿರುವ ನಾನೇ ಕರೆ ಸ್ವೀಕರಿಸಿ ಅವರೆ ಸಮಸ್ಯೆ ಆಲಿಸಬೇಕಾದರೆ ನಿಮಗೇನು ತೊಂದರೆ? ಎಂದು ಅಧಿಕಾರಿಗನ್ನು ಪ್ರಶ್ನಿಸಿದ ಸಚಿವರು, ಸಾರ್ವಜನಿಕರ ಸಮಸ್ಯೆಗಳಿಗೆ ಪ್ರಥಮಾದ್ಯತೆ ಮೇಲೆ ಸ್ಪಂದಿಸುವ ಮತ್ತು ಮಾನವೀಯತೆಯಿಂದ ಕಾರ್ಯನಿರ್ವಹಿಸುವ ಗುಣ ಅಧಿಕಾರಿಗಳು ಹೊಂದುವುದು ಅವಶ್ಯಕತೆ ಇದೆ ಎಂದರು.

ಜಿಲ್ಲಾ ಪಂಚಾಯತ್ ಸಿ.ಇ.ಒ ರಾಹುಲ್ ಸಂಕನೂರ ಮಾತನಾಡಿ, ಜಿಲ್ಲೆಯ 8 ತಾಲೂಕುಗಳ 35 ಗ್ರಾಮ ಪಂಚಾಯತಿಗಳ ವ್ಯಾಪ್ತಿಯ 41 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 5 ಟ್ಯಾಂಕರ್ ಮೂಲಕ 5 ಗ್ರಾಮಗಳಿಗೆ ಮತ್ತು 4 ಖಾಸಗಿ ಬೋರವೆಲ್ ಬಾಡಿಗೆಗೆ ಪಡೆದು 36 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನದಲ್ಲಿ ಬರದ ಕ್ಷಾಮ ಹೆಚ್ಚಾದಲ್ಲಿ ಅದಕ್ಕೂ ಬೇಕಾದ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದರು.

ರಸಗೊಬ್ಬರ ಅಂಗಡಿಗಳಲ್ಲಿ ದರ ಪ್ರದರ್ಶಿಸಿ:

ರಸಗೊಬ್ಬರ ಅಂಗಡಿಗಳ ಮಾಲಕರು ರೈತರಿಂದ ಹೆಚ್ಚಿನ ದರ ಪಡೆದು ರಸಗೊಬ್ಬರ ಮಾರಾಟ ಮಾಡಲಾಗುತ್ತದೆ ಎಂಬುದು ರೈತನ ಸಾಮಾನ್ಯ ದೂರು. ಇದಕ್ಕೆ ಅವಕಾಶ ನೀಡದ ರೀತಿಯಲ್ಲಿ ಪ್ರತಿ ಅಂಗಡಿಗಳ ಮುಂದೆ ಪ್ರತಿ ದಿನದ ದಾಸ್ತಾನು ಮತ್ತು ರಸಗೊಬ್ಬರ ದರ ನಮೂದಿಸಬೇಕು. ಕೃಷಿ ಅಧಿಕಾರಿಗಳು ನಿರಂತರವಾಗಿ ಇಂತಹ ಅಂಗಡಿಗಳನ್ನು ತಪಾಸಣೆ ಮಾಡಬೇಕು. ಕಾಳ ಸಂತೆಯಲ್ಲಿ ರಸಗೊಬ್ಬರ ಮಾರಾಟ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇನ್ನು ನಿಯಮ ಉಲ್ಲಂಘಿಸಿದ 7 ಅಂಗಡಿಗಳ ಅಮಾನತ್ತಿಗೆ ಈಗಾಗಲೆ ಪ್ರಸ್ತಾವನೆ ಸಲ್ಲಿಸಿರುವುದರಿಂದ ಕೂಡಲೆ ಸದರಿ ಅಂಗಡಿ ಅಮಾನತ್ತು ಮಾಡುವಂತೆ ಕೃಷಿ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.


ಆ.14 ರೊಳಗೆ ವರದಿ ಕೊಡಿ:

ಕಲಬುರಗಿ ನಗರದ ಸುಮಾರು 35 ವಾರ್ಡ್ಗಳಲ್ಲಿ ಇನ್ನು ಕುಡಿಯುವ ನೀರಿನ ಸಮಸ್ಯೆ ಇದೆ. ಜುಲೈ ಅಂತ್ಯದ ವರೆಗೆ ಸಮರ್ಪಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿತ್ತು. ಆಗಸ್ಟ್ 1 ರಿಂದ ಟ್ಯಾಂಕರ್ ನೀರು ಸ್ಥಗಿತಗೊಳಿಸಿದ್ದು ಸಮಸ್ಯೆಯಾಗಿದೆ ಎಂದು ಶಾಸಕ ಅಲ್ಲಮಪ್ರಭು ಪಾಟೀಲ ಮತ್ತು ಕನೀಜ್ ಫಾತಿಮಾ ಸಚಿವರ ಗಮನಕ್ಕೆ ತಂದರು.

ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಮಾತನಾಡಿ, ನಗರದಲ್ಲಿ ಬೇಡಿಕೆ ಇರುವ ವಾರ್ಡ್ಗಳಿಗೆ ಪ್ರತಿ ದಿನ 50 ಟ್ರಿಪ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಎಲ್ & ಟಿ ಕಂಪನಿಯವರು ಟ್ಯಾಂಕರ್ ಮೂಲಕ ನೀರು ಪೂರೈಕೆ ನಿಲ್ಲಿಸಿದ್ದರಿಂದ ಕೆಲವು ಬಡಾವಣೆಯಲ್ಲಿ ಸಮಸ್ಯೆ ಉದ್ಭವವಾಗಿದೆ ಎಂದರು.

ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, 50 ಟ್ಯಾಂಕ್ ನೀರು ಯಾವುದಕ್ಕೂ ಸಾಲುವುದಿಲ್ಲ. ಶಾಸಕರ ಸೂಚನೆಯಂತೆ ನೀರು ಪೂರೈಸಬೇಕು. ಪ್ರಸ್ತುತ ನಗರದಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಮಗ್ರವಾಗಿ ವರದಿ ಇದೇ ಆಗಸ್ಟ್ 14 ರೊಳಗೆ ನೀಡಿದಲ್ಲಿ ಅದಕ್ಕೆ ಸರ್ಕಾರದ ಹಂತದಲ್ಲಿ ಹೆಚ್ಚಿನ ಅನುದಾನ ಪಡೆದು ಪರಿಹಾರ ಕಂಡುಕೊಳ್ಳಲಾಗುವುದು. ಇನ್ನು ನೀರು ಪೂರೈಸಲು ವಿಫಲರಾಗಿರುವ ಎಲ್ & ಟಿ ಕಂಪನಿ ಮೇಲೆ ಕೂಡಲೆ ಕಾನೂನು ಕ್ರಮ ಕೈಗೊಳ್ಳಿ ಎಂದು ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರಿಗೆ ಸಚಿವರು ನಿರ್ದೇಶನ ನೀಡಿದರು.

ಮಧ್ಯಂತರ ಪರಿಹಾರ ಕೊಡಿ:

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ ಜಿಲ್ಲೆಯಲ್ಲಿ ಹೆಸರು, ಉದ್ದು, ಸೋಯಾಬಿನ್, ತೊಗರಿ ಹಾಳಾಗಿದೆ. ಬೆಳೆ ವಿಮೆ ಮಾಡಿಸಿದ ರೈತರಿಗೆ ಮಧ್ಯಂತರ ಪರಿಹಾರ ನೀಡಬೇಕು. ಇನ್ನು ರೈತರಿಗೆ ಡಿ.ಎ.ಪಿ. ಜೊತೆಗೆ ಇತರೆ ರಸಗೊಬ್ಬರ ಖರೀದಿಗೆ ಅಂಗಡಿಯವರು ಒತ್ತಾಯ ಮಾಡುತ್ತಿದ್ದು, ಇದು ಅನಗತ್ಯ ರೈತರಿಗೆ ಹೊರೆಯಾಗುತ್ತಿದೆ. ಇಂತಹ ಅಂಗಡಿಗಳ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಜಂಟಿ ಕೃಷಿ ನಿರ್ದೇಶಕರಿಗೆ ಸೂಚನೆ ನೀಡಿದರು. ಇದಕ್ಕೆ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಉತ್ತರಿಸುತ್ತಾ ಈಗಾಗಲೆ 37,051 ರೈತರಿಗೆ ಮಧ್ಯಂತರ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಮಾಹಿತಿ ನೀಡಿದರು.

ಕೃಷಿ ಇಲಾಖೆ ಚರ್ಚೆ ವೇಳೆ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಮಾತನಾಡಿ, ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಜೂನ್ ಅಂತ್ಯಕ್ಕೆ ಶೇ.36, ಜುಲೈ ಮತ್ತು ಆಗಸ್ಟ್ ಮಾಹೆಯಲ್ಲಿ ಶೇ.35ರಷ್ಟು ಮಳೆ ಕೊರತೆಯಾಗಿದೆ. ಪ್ರಸಕ್ತ ಮುಮಘಾರುಯ ಹಂಗಾಮಿನಲ್ಲಿ ವಾಡಿಕೆಗ್ಗಿಂತ ಮಳೆ ಕಡಿಮೆಯಾದ ಕಾರಣ 8.90 ಲಕ್ಷ ಹೆಕಟೇರ್‌ನಲ್ಲಿ ಕೇವಲ 5.37 ಲಕ್ಷ ಹೆಕ್ಟೇರ್ ಪ್ರದೇಶ ಮಾತ್ರ ಬಿತ್ತನೆ ಮಾಡಲು ಸಾಧ್ಯವಾಗಿದೆ. ಬೆಳೆ ವಿಮೆ ನೋಂದಣಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಇದೂವರೆಗೆ 4.52 ಲಕ್ಷ ರೈತರು ಸುಮಾರು 5.35 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಬೆಳೆ ವಿಮೆ ನೋಂದಣಿ ಮಾಡಿಕೊಂಡಿದ್ದಾರೆ ಎಂದರು.

ಸಭೆಯಲ್ಲಿ ಸಾಸಕರಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮಡು, ಅವಿನಾಶ ಜಾಧವ, ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಅರುಣಕುಮಾರ ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಹರವಾಳ, ಕಾಡಾ ಅಧ್ಯಕ್ಷ ಡಾ.ಅಬ್ದುಲ್ ರಶೀದ್, ಕಲಬುರಗಿ-ಬೀದರ ಹಾಗೂ ಯಾದಗಿರಿ ಹಾಲು ಒಕ್ಕೂಟದ ಅಧ್ಯಕ್ಷ ಆರ್.ಕೆ.ಪಾಟೀಲ, ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ವರ್ಷಾ ರಾಜೀವ ಜಾನೆ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಕಲಬುರಗಿ ನಗರ ಪೊಲೀಸರ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸುಲು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Tags

Priyank Khargedrought situation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X