Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಜಿಲ್ಲೆಗೆ 375 ಕೋಟಿ ರೂ. ಗೂ...

ಕಲಬುರಗಿ ಜಿಲ್ಲೆಗೆ 375 ಕೋಟಿ ರೂ. ಗೂ ಅಧಿಕ ಬೆಳೆ ವಿಮೆ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಡಿಸಿ ಇಕ್ರಮ್‌ ಶರೀಫ್

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ25 Nov 2026 9:26 PM IST
share
ಕಲಬುರಗಿ ಜಿಲ್ಲೆಗೆ 375 ಕೋಟಿ ರೂ. ಗೂ ಅಧಿಕ ಬೆಳೆ ವಿಮೆ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಡಿಸಿ ಇಕ್ರಮ್‌ ಶರೀಫ್

ಕಲಬುರಗಿ, ನ. 25: ಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ಉಂಟಾಗಿ, ಬಿತ್ತನೆ ಮಾಡಿರುವ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದೆ. ಇದರಿಂದ ಇಳುವರಿಯಲ್ಲಿ ಗಣನೀಯ ಪ್ರಮಾಣದ ಕುಸಿತ ಉಂಟಾಗಿದ್ದು, ರೈತರಿಗೆ ಆಗಿರುವ ಆರ್ಥಿಕ ನಷ್ಟವನ್ನು ತಗ್ಗಿಸುವ ಹಾಗೂ ಸಕಾಲದಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಗೆ 375 ಕೋಟಿ ರೂ. ಗೂ ಅಧಿಕ ಮೊತ್ತದ ಬೆಳೆ ವಿಮೆ ಪರಿಹಾರ ಅನುದಾನ ಮಂಜೂರು ಮಾಡುವಂತೆ ಸರ್ಕಾರಕ್ಕೆ ಸಮಗ್ರ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆ ಉಂಟಾಗಿ ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಸರ್ಕಾರವು ಜಿಲ್ಲೆಯ ಎಲ್ಲ 11 ತಾಲ್ಲೂಕುಗಳನ್ನು ಈಗಾಗಲೇ ಅಧಿಕೃತವಾಗಿ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿದೆ. ಜಿಲ್ಲೆಯ ಪ್ರಮುಖ ಬೆಳೆಗಳಾದ ಹೆಸರು, ಉದ್ದು, ಸೋಯಾಬೀನ್, ತೊಗರಿ, ಹತ್ತಿ ಸೇರಿದಂತೆ ಇತರೆ ಬೆಳೆಗಳಿಗೆ ಮಳೆ ಕೊರತೆಯಿಂದ ಉಂಟಾದ ಹಾನಿ ಹಾಗೂ ಬೆಳೆಗಳ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಗಣಿಸಿ, ಬೆಳೆ ವಿಮೆ ಯೋಜನೆಯಡಿ ರೈತರಿಗೆ ಪರಿಹಾರ ಕಲ್ಪಿಸಲು ಮಧ್ಯಂತರ ಬೆಳೆ ವಿಮೆ ಪರಿಹಾರದ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ವಿಮಾ ಸಂಸ್ಥೆಯಾದ ಇಂಡಸ್‌ಇಂಡ್ ಜನರಲ್ ಇನ್ಶೂರೆನ್ಸ್ ಕಂಪನಿಯೂ ಸಮ್ಮತಿ ಸೂಚಿಸಿದೆ ಎಂದು ತಿಳಿಸಿದ್ದಾರೆ.

ಮಧ್ಯಂತರ ಬೆಳೆ ವಿಮೆ ಪರಿಹಾರದ ಪ್ರಸ್ತಾವನೆಗೆ ಸರ್ಕಾರದಿಂದ ಅನುಮೋದನೆ ದೊರೆತು ಪರಿಹಾರ ಮಂಜೂರಾದಲ್ಲಿ, ರೈತರು ತಮ್ಮ ವಂತಿಕೆಯಾಗಿ ಪಾವತಿಸಿರುವ 67.82 ಕೋಟಿ ರೂ. ಪ್ರೀಮಿಯಂ ಮೊತ್ತಕ್ಕೆ ಪ್ರತಿಯಾಗಿ ಸುಮಾರು ಆರು ಪಟ್ಟು ಹೆಚ್ಚು, ಅಂದರೆ 375 ಕೋಟಿ ರೂ. ಗೂ ಅಧಿಕ ಮೊತ್ತದ ಮಧ್ಯಂತರ ಬೆಳೆ ವಿಮೆ ಪರಿಹಾರವನ್ನು ಜಿಲ್ಲೆಯ ಅರ್ಹ ರೈತರು ಪಡೆಯುವ ನಿರೀಕ್ಷೆಯಿದೆ. ಇದರಿಂದ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಗಣನೀಯ ಪ್ರಮಾಣದ ಆರ್ಥಿಕ ನೆರವು ದೊರೆಯಲಿದ್ದು, ಮುಂದಿನ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಬೆಳೆ ವಿಮೆ ನೋಂದಣಿಯಲ್ಲಿ ಕಲಬುರಗಿ ಜಿಲ್ಲೆಗೆ ಪ್ರಥಮ ಸ್ಥಾನ :

ಮುಂಗಾರು ಹಂಗಾಮಿನಲ್ಲಿ ರೈತರ ಬೆಳೆಗಳಿಗೆ ಪ್ರಕೃತಿ ವಿಕೋಪ, ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇತರೆ ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಆರ್ಥಿಕ ನಷ್ಟದಿಂದ ರಕ್ಷಣೆ ಒದಗಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ.

2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 4,52,609 ರೈತರು 5,35,820.48 ಹೆಕ್ಟೇರ್ ಪ್ರದೇಶಕ್ಕೆ ಬೆಳೆ ವಿಮೆ ನೋಂದಣಿ ಮಾಡಿಸಿ, 67.82 ಕೋಟಿ ರೂ. ಪ್ರೀಮಿಯಂ ಮೊತ್ತ ಪಾವತಿಸಿದ್ದಾರೆ. ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರಂತರ ಪ್ರಯತ್ನ ಹಾಗೂ ಜಾಗೃತಿಯಿಂದ ಇದು ಸಾಧ್ಯವಾಗಿದೆ. ರಾಜ್ಯದಲ್ಲಿಯೇ ಬೆಳೆ ವಿಮೆ ನೋಂದಣಿಯಲ್ಲಿ ಕಲಬುರಗಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್ ತಿಳಿಸಿದ್ದಾರೆ.

ಹಿಂಗಾರು ಬೆಳೆ ವಿಮೆ ನೋಂದಣಿಗೆ ನ. 30 ಕೊನೆಯ ದಿನ :

ಪ್ರಸಕ್ತ 2026-27ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಬೆಳೆಯಲಾಗುವ ಕಡಲೆ, ಜೋಳ, ಗೋಧಿ, ಕುಸುಬೆ ಸೇರಿದಂತೆ ಇತರೆ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ನೋಂದಾಯಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ರೈತರು ಕೊನೆಯ ದಿನದವರೆಗೆ ಕಾಯದೆ ತಮ್ಮ ಹತ್ತಿರದ ಬ್ಯಾಂಕ್, ಗ್ರಾಮ ಒನ್ ಅಥವಾ ಸಿಎಸ್‌ಸಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು. ಬೆಳೆ ಸಾಲ ಹೊಂದಿರುವ ರೈತರು ತಾವು ಸಾಲ ಪಡೆದಿರುವ ಬ್ಯಾಂಕ್‌ಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್ ಮನವಿ ಮಾಡಿದ್ದಾರೆ.

Tags

insuranceKalaburagiIkram Shariff
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X