Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯನ್ನು ಪ್ರಾದೇಶಿಕ ವಿಮಾನ ಹಬ್...

ಕಲಬುರಗಿಯನ್ನು ಪ್ರಾದೇಶಿಕ ವಿಮಾನ ಹಬ್ ಆಗಿ ಅಭಿವೃದ್ಧಿಪಡಿಸಲು ಪ್ರಸ್ತಾವನೆ

ವಾರ್ತಾಭಾರತಿವಾರ್ತಾಭಾರತಿ2 Jun 2026 10:17 PM IST
share
ಕಲಬುರಗಿಯನ್ನು ಪ್ರಾದೇಶಿಕ ವಿಮಾನ ಹಬ್ ಆಗಿ ಅಭಿವೃದ್ಧಿಪಡಿಸಲು ಪ್ರಸ್ತಾವನೆ
ಜೂ.10ರಿಂದ ಕಲಬುರಗಿ–ಬೆಂಗಳೂರು ಸ್ಟಾರ್ ಏರ್ ವಿಮಾನ ಸೇವೆ ಪುನರಾರಂಭ

ಕಲಬುರಗಿ: Star Air ಸಂಸ್ಥೆಯ ಪ್ರಾದೇಶಿಕ ವಿಮಾನ ಹಬ್ ಆಗಿ ಕಲಬುರಗಿಯನ್ನು ಅಭಿವೃದ್ಧಿಪಡಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದರಿಂದ ಭವಿಷ್ಯದಲ್ಲಿ ಇನ್ನಷ್ಟು ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಲು ಅವಕಾಶ ಸಿಗಲಿದೆ ಎಂದು ಮೊಹಮ್ಮದ್ ಸೋಹೈಲ್ ಅಹ್ಮದ್ ತಿಳಿಸಿದ್ದಾರೆ.

ನಗರದ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪ್ರವಾಸ ಮತ್ತು ಪ್ರವಾಸೋದ್ಯಮ ಏಜೆಂಟರೊಂದಿಗೆ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.

ಜೂನ್ 10ರಿಂದ ಕಲಬುರಗಿ–ಬೆಂಗಳೂರು ನಡುವಿನ ಸ್ಟಾರ್ ಏರ್ ವಿಮಾನ ಸೇವೆ ಪುನರಾರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿಮಾನ ಸೇವೆ ಪುನರಾರಂಭಕ್ಕೆ ಕೆಕೆಸಿಸಿಐ ನೀಡಿದ ಸಹಕಾರ ಹಾಗೂ ಸರ್ಕಾರದೊಂದಿಗೆ ನಡೆಸಿದ ನಿರಂತರ ಸಮನ್ವಯಕ್ಕೆ ಧನ್ಯವಾದ ಸಲ್ಲಿಸಿದರು. ಪ್ರವಾಸ ಏಜೆಂಟರಿಂದ ಬಂದಿರುವ ಸಲಹೆಗಳನ್ನು ಪರಿಶೀಲಿಸಿ ಸಾಧ್ಯತೆಗಳ ಅಧ್ಯಯನ ನಡೆಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಭಾಗವಹಿಸಿದ್ದ ಪ್ರವಾಸ ಏಜೆಂಟರು ಗೋವಾ, ತಿರುಪತಿ, ಘಾಜಿಯಾಬಾದ್, ಅಹಮದಾಬಾದ್ ಹಾಗೂ ಜೈಪುರ ನಗರಗಳಿಗೆ ನೇರ ವಿಮಾನ ಸೇವೆ ಆರಂಭಿಸುವಂತೆ ಮನವಿ ಮಾಡಿದರು. ಈ ಕುರಿತು ಸಂಸ್ಥೆ ಸಕಾರಾತ್ಮಕವಾಗಿ ಪರಿಗಣಿಸಲಿದೆ ಎಂದು ಸ್ಟಾರ್ ಏರ್ ಪ್ರತಿನಿಧಿಗಳು ಭರವಸೆ ನೀಡಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೆಕೆಸಿಸಿಐ ಗೌರವ ಕಾರ್ಯದರ್ಶಿ ಶಿವರಾಜ್ ವಿ. ಇಂಗಿನಶೆಟ್ಟಿ, ಕಲಬುರಗಿ–ಬೆಂಗಳೂರು ವಿಮಾನ ಸೇವೆ ಪುನರಾರಂಭದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಪ್ರತಿನಿಧಿಗಳೊಂದಿಗೆ ಅಭಿಪ್ರಾಯ ವಿನಿಮಯ ನಡೆಸುವ ಉದ್ದೇಶದಿಂದ ಸಭೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಎಂ. ಪಪ್ಪಾ ಮಾತನಾಡಿ, ಸುಮಾರು ಎಂಟು ತಿಂಗಳ ಬಳಿಕ ಕಲಬುರಗಿಗೆ ವಿಮಾನ ಸೇವೆ ಮರುಪ್ರಾರಂಭವಾಗುತ್ತಿರುವುದು ಈ ಭಾಗದ ಜನತೆಗೆ ಸಂತಸದ ವಿಷಯವಾಗಿದೆ ಎಂದರು. ವಿಮಾನ ಸೇವೆ ಪುನರಾರಂಭಕ್ಕಾಗಿ ಕೆಕೆಸಿಸಿಐ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಪ್ರಯತ್ನ ನಡೆಸಿದ್ದು, ರಾಜ್ಯ ಸರ್ಕಾರದಿಂದ ಸ್ಟಾರ್ ಏರ್ ಸಂಸ್ಥೆಗೆ ವೈಯಬಿಲಿಟಿ ಗ್ಯಾಪ್ ಫಂಡಿಂಗ್ (ವಿಜಿಎಫ್) ನೆರವು ದೊರೆತಿರುವುದರಿಂದ ಸೇವೆ ಪುನರಾರಂಭ ಸಾಧ್ಯವಾಗಿದೆ ಎಂದು ಹೇಳಿದರು.

ಪ್ರಯಾಣಿಕರ ಅನುಕೂಲಕ್ಕಾಗಿ ವಿಮಾನ ಹಾರಾಟದ ವೇಳೆಯನ್ನು ಸಂಜೆ ಬದಲಾಗಿ ಬೆಳಿಗ್ಗೆ ನಿಗದಿಪಡಿಸಿರುವ ಸ್ಟಾರ್ ಏರ್ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದ ಅವರು, ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಸೌಲಭ್ಯ ಕಲ್ಪಿಸುವುದು ಹಾಗೂ ಇನ್ನಷ್ಟು ನಗರಗಳಿಗೆ ವಿಮಾನ ಸಂಪರ್ಕ ವಿಸ್ತರಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಪ್ರವಾಸೋದ್ಯಮ ಇಲಾಖೆಯ ಸಹಾಯಕ ಅಭಿಯಂತರ ಯೋಗೇಶ್ ಮಾತನಾಡಿ, ಸನ್ನತಿ ಮತ್ತು ಕಣಗನಹಳ್ಳಿ ಸೇರಿದಂತೆ ಐತಿಹಾಸಿಕ ಹಾಗೂ ಪಾರಂಪರಿಕ ತಾಣಗಳ ಅಭಿವೃದ್ಧಿಗೆ ಉತ್ತಮ ವಿಮಾನ ಸಂಪರ್ಕ ಅಗತ್ಯವಾಗಿದೆ ಎಂದು ತಿಳಿಸಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪ್ರವಾಸೋದ್ಯಮ ಮಾಹಿತಿ ಕೇಂದ್ರ (ಕಿಯೋಸ್ಕ್) ಸ್ಥಾಪಿಸುವಂತೆ ಸಲಹೆ ನೀಡಿದರು.

ಪ್ರವಾಸ ಮತ್ತು ಪ್ರವಾಸೋದ್ಯಮ ಏಜೆಂಟರ ಸಂಘದ ಅಧ್ಯಕ್ಷ ಸಂದ್ಯಾರಾಜ್ ಮಾತನಾಡಿ, ಆನ್‌ಲೈನ್ ಯುಗದಲ್ಲಿಯೂ ಪ್ರವಾಸ ಏಜೆಂಟರ ಪಾತ್ರ ಮಹತ್ವದ್ದಾಗಿದ್ದು, ಅವರಿಗೆ ವಿಶೇಷ ರಿಯಾಯಿತಿಗಳು ಹಾಗೂ ಉತ್ತೇಜನ ನೀಡಿದರೆ ವಿಮಾನ ಸೇವೆಗಳ ಪ್ರಚಾರ ಮತ್ತಷ್ಟು ವಿಸ್ತರಿಸಲಿದೆ ಎಂದು ಹೇಳಿದರು.

ಅಪ್ಪ ವಿಶ್ವವಿದ್ಯಾಲಯದ ಪ್ರವಾಸೋದ್ಯಮ ವಿಭಾಗದ ಅಧ್ಯಕ್ಷ ಡಾ. ಕಲ್ಯಾಣರಾವ್ ಪಾಟೀಲ್ ವಿದ್ಯಾರ್ಥಿಗಳಿಗೆ ಸ್ಟಾರ್ ಏರ್ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಬೇಬಿ ಮೊಗರ್, ಸ್ಟಾರ್ ಏರ್ ಪ್ರಾಂತ್ಯೀಯ ವ್ಯವಸ್ಥಾಪಕ ಮೊಹಮ್ಮದ್ ಸೋಹೈಲ್ ಅಹ್ಮದ್, ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಎಂ. ಪಪ್ಪಾ, ಗೌರವ ಕಾರ್ಯದರ್ಶಿ ಶಿವರಾಜ್ ವಿ. ಇಂಗಿನಶೆಟ್ಟಿ, ಪ್ರವಾಸೋದ್ಯಮ ಉಪಸಮಿತಿ ಅಧ್ಯಕ್ಷ ವಿನಯ್ ಚಿಕಟವಾರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಸಭೆಯಲ್ಲಿ ಕೆಕೆಸಿಸಿಐ ಸದಸ್ಯರಾದ ಮಂಜುನಾಥ ಜೇವರ್ಗಿ, ರವಿಶಂಕರ್ ಜಾಮದಾರಖಾನಿ, ಅಭಿಜಿತ್ ಪಡಶೆಟ್ಟಿ, ಜಗದೀಶ್ ಪಾಟೀಲ್, ರಾಹುಲ್ ತೆಂಗಳಿ, ರವಿ ಕೆ. ಪಾಟೀಲ್, ಶಾಂತರಡ್ಡಿ ಪೆಟ್ಸಿರೂರ್, ಅಮೃತ್ ಸಂಘವಿ ಸೇರಿದಂತೆ ಪ್ರವಾಸ ಮತ್ತು ಪ್ರವಾಸೋದ್ಯಮ ಕ್ಷೇತ್ರದ ಪ್ರತಿನಿಧಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ಪ್ರವಾಸೋದ್ಯಮ ಉಪಸಮಿತಿ ಅಧ್ಯಕ್ಷ ವಿನಯ್ ಚಿಕಟವಾರ್ ವಂದಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X