Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲ್ಯಾಣ ಕರ್ನಾಟಕದ ಸರ್ಕಾರಿ ಶಾಲೆಗಳ...

ಕಲ್ಯಾಣ ಕರ್ನಾಟಕದ ಸರ್ಕಾರಿ ಶಾಲೆಗಳ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಪ್ರತಿಭಟನೆ; ಸಿಎಂ ಗೆ ಮುತ್ತಿಗೆ ಯತ್ನ; ಎಸ್‌ಎಫ್‌ಐ ಹೋರಾಟಗಾರರು ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ17 Sept 2026 10:07 AM IST
share
ಕಲ್ಯಾಣ ಕರ್ನಾಟಕದ ಸರ್ಕಾರಿ ಶಾಲೆಗಳ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಪ್ರತಿಭಟನೆ;  ಸಿಎಂ ಗೆ ಮುತ್ತಿಗೆ ಯತ್ನ; ಎಸ್‌ಎಫ್‌ಐ ಹೋರಾಟಗಾರರು ಪೊಲೀಸ್ ವಶಕ್ಕೆ

ಕಲಬುರಗಿ: ಕಲ್ಯಾಣ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಸಮಸ್ಯೆಗಳು ತೀವ್ರವಾಗಿದ್ದು, ರಾಜ್ಯ ಸರ್ಕಾರ ತಕ್ಷಣ ಅವುಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ನಗರದ ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆಯಿತು.

ರಾಜ್ಯ ಸರ್ಕಾರದ ಅಂಕಿಅಂಶಗಳ ಪ್ರಕಾರ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 8,706 ಸರ್ಕಾರಿ ಶಾಲಾ ಕೊಠಡಿಗಳು ಶಿಥಿಲಗೊಂಡಿವೆ. ಈ ಪೈಕಿ 7,419 ಪ್ರಾಥಮಿಕ ಹಾಗೂ 1,287 ಪ್ರೌಢಶಾಲಾ ಕೊಠಡಿಗಳು ಅಸುರಕ್ಷಿತ ಸ್ಥಿತಿಯಲ್ಲಿವೆ. ಶಿಥಿಲ ಕಟ್ಟಡಗಳಲ್ಲಿಯೇ ತರಗತಿಗಳು ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸುರಕ್ಷತೆ ಕುರಿತು ಗಂಭೀರ ಆತಂಕವಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾವಾರು ಅಂಕಿಅಂಶದಂತೆ ಕಲಬುರಗಿಯಲ್ಲಿ 2,334, ಯಾದಗಿರಿಯಲ್ಲಿ 1,451, ಬೀದರ್‌ನಲ್ಲಿ 1,315, ವಿಜಯನಗರದಲ್ಲಿ 1,075, ಕೊಪ್ಪಳದಲ್ಲಿ 1,036, ಬಳ್ಳಾರಿಯಲ್ಲಿ 756 ಹಾಗೂ ರಾಯಚೂರಿನಲ್ಲಿ 739 ಶಾಲಾ ಕೊಠಡಿಗಳು ಶಿಥಿಲಗೊಂಡಿವೆ ಎಂದು ಅವರು ತಿಳಿಸಿದರು.

371(ಜೆ) ಸಮರ್ಪಕವಾಗಿ ಜಾರಿಗೊಳಿಸಲು ಆಗ್ರಹ:

ಎಸ್‌ಎಫ್‌ಐ ಕೇಂದ್ರ ಸಮಿತಿ ಸದಸ್ಯೆ ಸುಜಾತ ವೈ. ಮಾತನಾಡಿ, ಸಂವಿಧಾನದ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ನೀಡಿರುವ ವಿಶೇಷ ಸ್ಥಾನಮಾನದ ಉದ್ದೇಶ ಈ ಭಾಗದ ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ವಿಶೇಷ ಅವಕಾಶಗಳನ್ನು ಖಾತ್ರಿಪಡಿಸುವುದಾಗಿದೆ. ಆದರೆ 371(ಜೆ) ಅನುಷ್ಠಾನದಲ್ಲಿನ ಹಲವು ಸಮಸ್ಯೆಗಳಿಂದಾಗಿ ವಿದ್ಯಾರ್ಥಿಗಳು ತಮ್ಮ ಹಕ್ಕಿನ ಅವಕಾಶಗಳನ್ನು ಪಡೆಯಲು ಪರದಾಡುವಂತಾಗಿದೆ ಎಂದು ಆರೋಪಿಸಿದರು.

ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಸರ್ವೇಶ್ ಪಿ. ಮಾವಿನಕರ್ ಮಾತನಾಡಿ, ಕಲ್ಯಾಣ ಕರ್ನಾಟಕದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳ ಮೂಲಸೌಕರ್ಯ ಕೊರತೆ, ಶಿಕ್ಷಕರು ಮತ್ತು ಉಪನ್ಯಾಸಕರ ಖಾಲಿ ಹುದ್ದೆಗಳು, ಹಾಸ್ಟೆಲ್‌ಗಳ ಕೊರತೆ, ವಿದ್ಯಾರ್ಥಿವೇತನ ವಿಳಂಬ ಹಾಗೂ ಸಾರಿಗೆ ಸಮಸ್ಯೆಗಳು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗುತ್ತಿವೆ ಎಂದರು.

ಎಸ್‌ಎಫ್‌ಐ ರಾಜ್ಯ ಸಮಿತಿ ಸದಸ್ಯ ಇಮಾಮ್‌ಸಾಬ್ ನದಾಫ್ ಮಾತನಾಡಿ, ದೂರದ ಗ್ರಾಮಗಳಿಂದ ಪ್ರತಿದಿನ ಶಾಲಾ-ಕಾಲೇಜುಗಳಿಗೆ ಪ್ರಯಾಣಿಸುವುದು ಕಷ್ಟವಾಗಿರುವುದರಿಂದ ಅನೇಕ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಬಸ್‌ಗಳ ಕೊರತೆ ಹಾಗೂ ಸಮಯಕ್ಕೆ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದಿರುವುದು ವಿದ್ಯಾರ್ಥಿಗಳ ಹಾಜರಾತಿ ಮತ್ತು ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ಸರ್ಕಾರ ಕೂಡಲೇ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಬಂದ್‌ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಕೇಂದ್ರ ಸಮಿತಿ ಸದಸ್ಯೆ ಸುಜಾತ ವೈ, ಜಿಲ್ಲಾಧ್ಯಕ್ಷ ಸರ್ವೇಶ್ ಪಿ. ಮಾವಿನಕರ್, ರಾಜ್ಯ ಸಮಿತಿ ಸದಸ್ಯ ಇಮಾಮ್‌ಸಾಬ್ ನದಾಫ್, ಜಿಲ್ಲಾ ಸಮಿತಿ ಸದಸ್ಯ ಮಂಜುನಾಥ್, ಮುಖಂಡರಾದ ಬೃಂದಾ ಎಸ್. ಧನ್ನಿ, ತಾಯಣ್ಣ ಟೋಕಪೂರ್, ಪ್ರದೀಪ್ ಮ್ಯಾಗಡಿ, ಬಾಬಾಸಾಹೇಬ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X