Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರದ ಕೆರೆಗಳಿಗೆ ನೀರು ಹರಿಸುವಂತೆ...

ಅಫಜಲಪುರದ ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 Sept 2026 7:24 PM IST
share
ಅಫಜಲಪುರದ ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಅಫಜಲಪುರ: ತಾಲೂಕಿನ 13 ಕೆರೆಗಳು ಹಾಗೂ ಕಾಲುವೆಗಳಿಗೆ ನೀರು ಹರಿಸದೆ ಆಳಂದ ತಾಲೂಕಿನ ಕೆರೆಗಳಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಅಫಜಲಪುರ ತಾಲೂಕಿನ ರೈತರು ಸೋಮವಾರ ಮಲ್ಲಾಬಾದ್ ಬಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಸುಮಾರು ನಾಲ್ಕು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು.

ತಾಲೂಕಿನ ಕೆರೆಗಳು ನೀರಿಲ್ಲದೆ ಬರಿದಾಗಿರುವ ಸಂದರ್ಭದಲ್ಲಿ ಸ್ಥಳೀಯ ಕೆರೆಗಳು ಹಾಗೂ ಕಾಲುವೆಗಳಿಗೆ ಆದ್ಯತೆ ನೀಡದೆ ಆಳಂದ ಭಾಗಕ್ಕೆ ನೀರು ಹರಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಯಿತು.

ಅಫಜಲಪುರ ತಾಲೂಕಿನ ಕೆರೆಗಳಿಗೆ ತಕ್ಷಣ ನೀರು ಹರಿಸಿ ರೈತರ ಬೆಳೆ ಹಾಗೂ ಜಾನುವಾರುಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಹಾಂತೇಶ ಜಮಾದಾರ ಮಾತನಾಡಿ, ರೈತರ ಸಮಸ್ಯೆಗಳ ಕುರಿತು ತುರ್ತು ಸಭೆ ಕರೆಯಬೇಕು. ಅಫಜಲಪುರ ತಾಲೂಕಿನ ಕೆರೆಗಳು ಮತ್ತು ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕು. ಅರ್ಜುಣಗಿ ಗ್ರಾಮದ ಮೂಲಕ ಹಾದುಹೋಗಿರುವ ಮುಖ್ಯ ಪೈಪ್‌ಲೈನ್‌ಗೆ ಜಾಕ್‌ವೆಲ್ ನಿರ್ಮಿಸಬೇಕು. ಕೆರೆಗಳಿಗೆ ಅಳವಡಿಸಿರುವ ಸಣ್ಣ ಗಾತ್ರದ ಪೈಪ್‌ಗಳ ಬದಲಿಗೆ 12 ಇಂಚಿನ ಪೈಪ್ ಅಳವಡಿಸಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳನ್ನು ಒಂದು ತಿಂಗಳೊಳಗೆ ಈಡೇರಿಸದಿದ್ದರೆ ಶಾಸಕರ ಮನೆಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ರೈತ ಮುಖಂಡ ಹಾಗೂ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ ಮಾತನಾಡಿ, ಅಫಜಲಪುರದ ಕಾಲುವೆಗಳಿಗೆ ನೀರು ಹರಿಸದೆ ಪಕ್ಕದ ಆಳಂದ ತಾಲೂಕಿನ ಕೆರೆಗಳಿಗೆ ನೀರು ಹರಿಸಿರುವುದು ರೈತರಿಗೆ ಮಾಡಿರುವ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ನಿತಿನ್ ಗುತ್ತೇದಾರ ಮಾತನಾಡಿ, ಅಫಜಲಪುರದಲ್ಲೇ ನೀರಿನ ಕೊರತೆ ಇರುವ ಸಂದರ್ಭದಲ್ಲಿ ಅಧಿಕಾರಿಗಳು ರೈತರ ಹಿತ ಕಾಪಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಸೊನ್ನ ಅಣೆಕಟ್ಟಿಗೆ ಮುತ್ತಿಗೆ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಸಿದರು.

ಕರವೇ ಅಧ್ಯಕ್ಷ ಶ್ರೀಕಾಂತ್ ದಿವಾಣಜಿ ಮಾತನಾಡಿದರು.

ಪ್ರತಿಭಟನಾ ಸ್ಥಳಕ್ಕೆ ತಹಸೀಲ್ದಾರ್ ಸಂಜೀವಕುಮಾರ ದಾಸರ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ರೈತರೊಂದಿಗೆ ಮಾತುಕತೆ ನಡೆಸಿದರು. ಕೆರೆಗಳಿಗೆ ನೀರು ಹರಿಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆಯಲ್ಲಿ ಸಂತೋಷ ಮಲಗೊಂಡ ಕೆ.ಜಿ. ಪೂಜಾರಿ, ದತ್ತು ಪೂಜಾರಿ, ಮಂಜುನಾಥ ನಯ್ಕೋಡಿ, ಶ್ರೀಶೈಲ ಗೋಳೆ, ಉಮೇಶ್ ಅಂದೋಡಗಿ, ಸೋಮು ನಾಯ್ಕೋಡಿ, ಲತೀಫ್ ಪಟೇಲ್, ಮಹಾಂತಗೌಡ ಪಾಟೀಲ , ಲಕ್ಷ್ಮೀಪುತ್ರ ಜಮಾದಾರ, ಅರವಿಂದ ದೊಡ್ಮನಿ ಸೇರಿದಂತೆ ರೈತ ಸಂಘಟನೆಗಳ ಮುಖಂಡರು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

Tags

Afzalpurwaterprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X