Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕೇಂದ್ರ, ರಾಜ್ಯ ಸರಕಾರಗಳ ಜನವಿರೋಧಿ ನೀತಿ...

ಕೇಂದ್ರ, ರಾಜ್ಯ ಸರಕಾರಗಳ ಜನವಿರೋಧಿ ನೀತಿ ಖಂಡಿಸಿ ಮೇ 14ರಂದು ಬೆಂಗಳೂರಿನಲ್ಲಿ ಪ್ರತಿಭಟನೆ : ಎಂ.ಶಶಿಧರ್

ವಾರ್ತಾಭಾರತಿವಾರ್ತಾಭಾರತಿ9 May 2025 8:31 AM IST
share
ಕೇಂದ್ರ, ರಾಜ್ಯ ಸರಕಾರಗಳ ಜನವಿರೋಧಿ ನೀತಿ ಖಂಡಿಸಿ ಮೇ 14ರಂದು ಬೆಂಗಳೂರಿನಲ್ಲಿ ಪ್ರತಿಭಟನೆ : ಎಂ.ಶಶಿಧರ್

ಕಲಬುರಗಿ : ಕೇಂದ್ರ ಮತ್ತು ರಾಜ್ಯ ಸರಕಾರಗಳ ಬೆಲೆ ಏರಿಕೆ ಸೇರಿದಂತೆ ಇತರೆ ಜನವಿರೋಧಿ ನೀತಿಗಳನ್ನು ಖಂಡಿಸಿ ಮೇ 14 ರಂದು ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಷ್ಟ್) ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಮಿತಿಯ ಸೆಕ್ರೆಟೆರಿಯೇಟ್ ಸದಸ್ಯ ಎಂ.ಶಶಿಧರ್ ಹೇಳಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಉದ್ಯೋಗ ಖಾತ್ರಿ ಯೋಜನೆಯ ಅಡಿ ಕೆಲಸ ಮಾಡುವ ಗ್ರಾಮೀಣ ಕೃಷಿ ಕಾರ್ಮಿಕರಿಗೆ ಕೆಲಸದ ದಿನಗಳನ್ನು 200ಕ್ಕೆ ಹೆಚ್ಚಿಸಿ, ಅವರ ಕೂಲಿಯನ್ನು 600 ರೂ. ನಿಗದಿಗೊಳಿಸಬೇಕು, ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತ ಸಮುದಾಯಕ್ಕೆ ಸರಕಾರದಿಂದ ನೆರವು ನೀಡಿ ಮತ್ತು ರೈತರ ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು, ವಿದ್ಯುತ್ ಮಸೂದೆ - 2022 (ತಿದ್ದುಪಡಿ) ಯನ್ನು ಹಿಂಪಡೆದು ಅಳವಡಿಸುತ್ತಿರುವ ಸ್ಮಾರ್ಟ್ ಮೀಟರ್ ಅನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು.

ಇತ್ತೀಚೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿಸಿರುವ ಎಲ್ಲಾ ಬೆಲೆಗಳನ್ನು ಈ ಕೂಡಲೇ ವಾಪಸ್ ಪಡೆಯಬೇಕು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಅವಶ್ಯಕ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಬೇಕು, ಆಶಾ, ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಘೋಷಿಸಿ, ಕನಿಷ್ಟ ವೇತನ ಪಾವತಿಸಿ, ಎಲ್ಲಾ ಇಲಾಖೆಗಳಲ್ಲಿರುವ ಗುತ್ತಿಗೆ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಬೇಕೆಂದು ಒತ್ತಡ ಹೇರಿದರು.

ರಾಜ್ಯದಲ್ಲಿ 6000ಕ್ಕೂ ಹೆಚ್ಚು ಸರಕಾರಿ ಶಾಲೆಗಳನ್ನು ಮುಚ್ಚುವ ಸರ್ಕಾರದ ನಿರ್ಧಾರವನ್ನು ಕೂಡಲೇ ಕೈಬಿಟ್ಟು ಅವುಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ನೀಡಿ, ಶಿಕ್ಷಕ ಸಿಬ್ಬಂದಿಯನ್ನು ಒದಗಿಸಬೇಕು, ನಿರುದ್ಯೋಗದಿಂದ ತತ್ತರಿಸಿರುವ ಯುವಜನರಿಗೆ ಉದ್ಯೋಗ ನೀಡಲು ತಕ್ಷಣವೇ ಸರ್ಕಾರಿ ಇಲಾಖೆಗಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ. ಕೆಪಿಎಸ್ಸಿ ಸೇರಿದಂತೆ ನೇಮಕಾತಿಯಲ್ಲಿ ನಡೆಯುವ ಎಲ್ಲಾ ಎಲ್ಲಾ ಹಂತದ ಭ್ರಷ್ಟಾಚಾರವನ್ನು ಮಟ್ಟಹಾಕಬೇಕು ಎಂದು ಹೇಳಿದರು.

ಒಂದು ವೇಳೆ ಬೇಡಿಕೆಗಳನ್ನು ಕೂಡಲೇ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಕೈಗೊಳ್ಳುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್.ಕೆ.ವೀರಭದ್ರಪ್ಪ, ಜಿಲ್ಲಾ ಸಮಿತಿಯ ಸದಸ್ಯರಾದ ವಿ.ನಾಗಮ್ಮಾಕ್, ಮಹೇಶ್ ನಾಡಗೌಡ, ಎಸ್.ಎಂ.ಶರ್ಮಾ, ಮಹೇಶ್ ಎಸ್.ಬಿ., ಜಗನ್ನಾಥ್ ಎಸ್.ಎಚ್., ಡಾ. ಸೀಮಾ ದೇಶಪಾಂಡೆ, ಹಣಮಂತ್ ಎಸ್.ಎಚ್. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X