Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬಸವ ತತ್ವ ವಿರೋಧಿಗಳ ವಿರುದ್ಧ ಜೂ.28ರಂದು...

ಬಸವ ತತ್ವ ವಿರೋಧಿಗಳ ವಿರುದ್ಧ ಜೂ.28ರಂದು ಬಸವಕಲ್ಯಾಣದಲ್ಲಿ ಪ್ರತಿಭಟನಾ ಸಭೆ

ವಾರ್ತಾಭಾರತಿವಾರ್ತಾಭಾರತಿ26 Jun 2026 8:23 PM IST
share
ಬಸವ ತತ್ವ ವಿರೋಧಿಗಳ ವಿರುದ್ಧ ಜೂ.28ರಂದು ಬಸವಕಲ್ಯಾಣದಲ್ಲಿ ಪ್ರತಿಭಟನಾ ಸಭೆ

ಕಲಬುರಗಿ: ಬಸವ ತತ್ವಗಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ಸೋಗಲಾಡಿಗಳ ನಿಜಸ್ವರೂಪವನ್ನು ಜನರ ಮುಂದಿಡುವ ಉದ್ದೇಶದಿಂದ ಜೂನ್ 28ರಂದು ಬೆಳಿಗ್ಗೆ 10 ಗಂಟೆಗೆ ಬಸವಕಲ್ಯಾಣದಲ್ಲಿ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಸವ ಧರ್ಮ ಸಂರಕ್ಷಣ ಹೋರಾಟ ಸಮಿತಿಯ ಮುಖಂಡರಾದ ಆರ್.ಜಿ. ಶೆಟಗಾರ ಹಾಗೂ ಚಿಂತಕಿ ಡಾ. ಮೀನಾಕ್ಷಿ ಬಾಳಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶರಣ ತತ್ವ ಮತ್ತು ಸನಾತನ ತತ್ವಗಳ ನಡುವಿನ ತಾತ್ವಿಕ ಸಂಘರ್ಷವು ಬಸವಣ್ಣನವರ ಕಾಲದಿಂದಲೇ ಆರಂಭವಾಗಿದ್ದು, ಇಂದಿಗೂ ಮುಂದುವರಿದಿದೆ. ಯಾವುದೇ ಕಾರಣಕ್ಕೂ ಬಸವ ತತ್ವಗಳನ್ನು ತಿರುಚಲು ಅವಕಾಶ ನೀಡುವುದಿಲ್ಲ. ಪ್ರಾಣ ತ್ಯಾಗ ಮಾಡಬೇಕಾದರೂ ಶರಣ ತತ್ವಗಳ ರಕ್ಷಣೆಗಾಗಿ ಹೋರಾಟ ಮುಂದುವರಿಸಲಾಗುವುದು ಎಂದು ಹೇಳಿದರು.

ಬಸವಾದಿ ಶರಣರು ಪ್ರತಿಪಾದಿಸಿದ ಸಮಾನತೆ, ಮಾನವೀಯತೆ ಹಾಗೂ ‘ದೇಹವೇ ದೇವಾಲಯ’ ಎಂಬ ತತ್ವಗಳು ಇಂದು ವಿಶ್ವದಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಅವುಗಳತ್ತ ಜನರು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಇದೇ ಕಾರಣದಿಂದ ಕೆಲವು ಸನಾತನವಾದಿ ಶಕ್ತಿಗಳಲ್ಲಿ ಆತಂಕ ಉಂಟಾಗಿದೆ ಎಂದು ಆರೋಪಿಸಿದರು.

ಮೌಢ್ಯ, ಕಂದಾಚಾರ, ಜ್ಯೋತಿಷ್ಯ ಸೇರಿದಂತೆ ವಿವಿಧ ಆಚರಣೆಗಳ ಮೂಲಕ ಸಮಾಜದಲ್ಲಿ ಅಸಮಾನತೆಯನ್ನು ಉಳಿಸಿಕೊಂಡು ಬಂದಿರುವವರ ಸ್ವಾರ್ಥಕ್ಕೆ ಬಸವ ತತ್ವಗಳು ಅಡ್ಡಿಯಾಗುತ್ತವೆ. ಜಾತಿ, ವರ್ಣ ಹಾಗೂ ಲಿಂಗಭೇದ ರಹಿತ ಸಮಾಜ ನಿರ್ಮಾಣಕ್ಕಾಗಿ ಶರಣರು ಪ್ರತಿಪಾದಿಸಿದ ಮೌಲ್ಯಗಳು ಸಂಪೂರ್ಣವಾಗಿ ಜಾರಿಯಾದರೆ ಶೋಷಣೆಯ ವ್ಯವಸ್ಥೆಗೆ ಅಂತ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಭಾರತದ ಸಂವಿಧಾನದಿಂದ ಶಿಕ್ಷಣ ವ್ಯಾಪಕಗೊಂಡ ಪರಿಣಾಮ ಇಂದು ಸಾವಿರಾರು ಜನರು ವಚನ ಸಾಹಿತ್ಯವನ್ನು ಅಧ್ಯಯನ ಮಾಡಿ ಬಸವ ತತ್ವಗಳನ್ನು ಅರ್ಥೈಸಿಕೊಂಡು ಅನುಸರಿಸುತ್ತಿದ್ದಾರೆ. ಆದ್ದರಿಂದ ಶರಣ ತತ್ವಗಳನ್ನು ಹತ್ತಿಕ್ಕುವ ಯಾವುದೇ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೂನ್ 28ರಂದು ಬಸವಕಲ್ಯಾಣದಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಯಲ್ಲಿ ಬಸವ ತತ್ವವನ್ನು ನಂಬುವ ಸಂಘಟನೆಗಳು, ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಪ್ರೊ. ಆರ್.ಕೆ. ಹುಡಗಿ, ಅಶೋಕ ಘೂಳಿ, ರವೀಂದ್ರ ಶಾಬಾದಿ ಸೇರಿದಂತೆ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Tags

Basavakalyanam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X