Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕೈಗಾರಿಕಾ ಮಾಲಿನ್ಯ ಖಂಡಿಸಿ...

ಕೈಗಾರಿಕಾ ಮಾಲಿನ್ಯ ಖಂಡಿಸಿ ಹುಮನಾಬಾದ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ; ಶಾಶ್ವತ ಪರಿಹಾರಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ11 Aug 2026 8:22 PM IST
share
ಕೈಗಾರಿಕಾ ಮಾಲಿನ್ಯ ಖಂಡಿಸಿ ಹುಮನಾಬಾದ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ; ಶಾಶ್ವತ ಪರಿಹಾರಕ್ಕೆ ಆಗ್ರಹ

ಹುಮನಾಬಾದ್: ಪಟ್ಟಣದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದಿಂದ ಜನಜೀವನಕ್ಕೆ ಹಾನಿಯಾಗುತ್ತಿದೆ ಎಂದು ಆರೋಪಿಸಿ ಹಾಗೂ ಮಾಲಿನ್ಯ ಉಂಟುಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಂಡು ಸ್ವಚ್ಛ ಮತ್ತು ಆರೋಗ್ಯಕರ ವಾತಾವರಣ ನಿರ್ಮಿಸಬೇಕು ಎಂದು ಆಗ್ರಹಿಸಿ ಮಾಣಿಕನಗರದ ಆನಂದರಾಜ್ ಮಹಾರಾಜ್ ಅವರ ನೇತೃತ್ವದಲ್ಲಿ ಮಂಗಳವಾರ ಹುಮನಾಬಾದ್–ಕಲಬುರಗಿ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಕೈಗಾರಿಕಾ ಪ್ರದೇಶದ ಸಮೀಪದ ಮುಖ್ಯ ರಸ್ತೆಯಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ರಾಸಾಯನಿಕ ಕಾರ್ಖಾನೆಗಳನ್ನು ಬಂದ್ ಮಾಡಬೇಕು ಎಂದು ಘೋಷಣೆ ಕೂಗಿದರು. ರಸ್ತೆ ತಡೆ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಿಂದ ವಾಯು ಹಾಗೂ ಜಲಮಾಲಿನ್ಯ ಉಂಟಾಗುತ್ತಿದ್ದು, ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಚರ್ಮರೋಗ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಮಾಣಿಕನಗರದ ಗುರುಗಂಗೆ ಹಳ್ಳವೂ ಮಾಲಿನ್ಯದಿಂದ ಹಾಳಾಗಿದ್ದು, ಹಿಂದೆ ಭಕ್ತರು ಸ್ನಾನ ಮಾಡುತ್ತಿದ್ದ ಈ ಹಳ್ಳದಲ್ಲಿ ಇದೀಗ ನೀರಿನ ಗುಣಮಟ್ಟ ಹದಗೆಟ್ಟಿದೆ. ಮಾಲಿನ್ಯದಿಂದ ಕೃಷಿಗೂ ತೊಂದರೆಯಾಗುತ್ತಿದ್ದು, ರೈತರ ಬೆಳೆಗಳ ಮೇಲೂ ಪರಿಣಾಮ ಬೀರುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ನಿರಂತರ ಹೋರಾಟಗಳ ಹಿನ್ನೆಲೆಯಲ್ಲಿ ಈಗಾಗಲೇ ಮೂರು ಕಂಪನಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಆದರೆ, ಇನ್ನೂ ಕೆಲವು ಕಂಪನಿಗಳಿಂದ ಜನಜೀವನಕ್ಕೆ ಹಾನಿಯಾಗುತ್ತಿದೆ. ಅಂತಹ ಘಟಕಗಳ ವಿರುದ್ಧವೂ ಸೂಕ್ತ ಕ್ರಮ ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಶಾಶ್ವತ ಪರಿಹಾರಕ್ಕೆ ಸಚಿವರ ಭರವಸೆ :

ಸಚಿವ ಈಶ್ವರ ಖಂಡ್ರೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಹುಮನಾಬಾದ್ ಕ್ಷೇತ್ರದ ಜನರಿಗೆ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಮಾತನಾಡಿ, “ಪ್ರತಿಸಲ ಕಾರ್ಖಾನೆಗಳನ್ನು ಬಂದ್ ಮಾಡಲಾಗುತ್ತದೆ. ಆದರೆ ಕೆಲವೇ ದಿನಗಳಲ್ಲಿ ಮತ್ತೆ ಅವು ಕಾರ್ಯಾರಂಭಿಸುತ್ತವೆ. ಇದರಿಂದ ಜನಪ್ರತಿನಿಧಿಗಳ ಮೇಲಿನ ಜನರ ನಂಬಿಕೆ ಕಳೆದುಕೊಳ್ಳುವಂತಾಗಿದೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದರೆ ನನ್ನ ಇನ್ನೂ ಒಂದೂವರೆ ವರ್ಷ ಬಾಕಿ ಇರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಸಚಿವ ಈಶ್ವರ ಖಂಡ್ರೆ ಅವರಿಗೆ ಎಚ್ಚರಿಕೆ ನೀಡಿದರು.

ಈ ವೇಳೆ ಮಾಜಿ ಸಚಿವ ರಾಜಶೇಖರ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ್‌ ಪಾಟೀಲ್‌, ಯುವ ಕ್ರಾಂತಿ ಸಂಘಟನೆ ರಾಜ್ಯಧ್ಯಕ್ಷ ಗುಂಡು ರೆಡ್ಡಿ, ಆಪ್ ಪಕ್ಷದ ಮುಖಂಡ ಬ್ಯಾಂಕ್ ರೆಡ್ಡಿ ಬೆಂಬಲ ಸೂಚಿಸಿದರು. ಪ್ರತಿಭಟನೆಯಲ್ಲಿ ಹುಮನಾಬಾದ್, ಗಡವಂತಿ, ಮಾಣಿಕನಗರ, ಹುಡಗಿ ಸೇರಿದಂತೆ ಸುತ್ತಲಿನ ಹಲವಾರು ಹಳ್ಳಿಗಳ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು.

Tags

Humnabadprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X