ಮೇ 22ರಂದು ಕಲಬುರಗಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಕಲಬುರಗಿ : ಕಲಬುರಗಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಕಲಬುರಗಿ ತಾಲೂಕಿಗೆ ಸಂಬಂಧಿಸಿದಂತೆ ಮೇ 22ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಲಬುರಗಿ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಕಲಬುರಗಿಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಬಿ.ಕೆ.ಉಮೇಶ ಅವರು ತಿಳಿಸಿದ್ದಾರೆ.
ಕಲಬುರಗಿ ಕರ್ನಾಟಕ ಲೋಕಾಯುಕ್ತ ಡಿ.ಎಸ್.ಪಿ. ಗೀತಾ ಟಿ.ಬೇನಹಾಳ (ಮೊಬೈಲ್ ಸಂಖ್ಯೆ 9364062569) ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಅರುಣ ಮುರಗುಂಡಿ (ಮೊಬೈಲ್ ಸಂಖ್ಯೆ 9364062669) ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡುತ್ತಿದ್ದರೆ, ಕಾರಣ ಇಲ್ಲದೆ ಅರ್ಜಿ ತಿರಸ್ಕರಿಸುತ್ತಿದ್ದರೆ ಅಥವಾ ಕಚೇರಿಗೆ ಅಲೆದಾಡಿಸುತ್ತಿದ್ದಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ಯಾರಾದರೂ ಲಂಚ ಕೇಳಿದ್ದಲ್ಲಿ ಕಲಬುರಗಿ ಕರ್ನಾಟಕ ಲೋಕಾಯುಕ್ತರ ಗಮನಕ್ಕೆ ತರಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಕಚೇರಿ, ಐವಾನ್ ಶಾಹಿ, ಕಂಪೌಂಡ್, ಕಲಬುರಗಿ-585102 ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-295364ಗೆ ಸಂಪರ್ಕಿಸಲು ಕೋರಲಾಗಿದೆ.







