Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ‘ಕಲಬುರಗಿ ಸ್ಪೋರ್ಟ್ಸ್ ಹಬ್ಬ–2026’ಕ್ಕೆ...

‘ಕಲಬುರಗಿ ಸ್ಪೋರ್ಟ್ಸ್ ಹಬ್ಬ–2026’ಕ್ಕೆ ನೋಂದಣಿ ಆರಂಭ

ಸೆ.25, 26 ಮತ್ತು 27ರಂದು ಕ್ರೀಡಾ ಸಂಭ್ರಮದಲ್ಲಿ ಪಾಲ್ಗೊಳ್ಳಿ : ಸಚಿವ ಪ್ರಿಯಾಂಕ್ ಖರ್ಗೆ ಕರೆ

ವಾರ್ತಾಭಾರತಿವಾರ್ತಾಭಾರತಿ8 Sept 2026 10:41 AM IST
share
‘ಕಲಬುರಗಿ ಸ್ಪೋರ್ಟ್ಸ್ ಹಬ್ಬ–2026’ಕ್ಕೆ ನೋಂದಣಿ ಆರಂಭ

ಕಲಬುರಗಿ, ಸೆ. 8: ಜಿಲ್ಲೆಯ ಅತಿದೊಡ್ಡ ಕ್ರೀಡಾ ಉತ್ಸವವಾದ ‘ಕಲಬುರಗಿ ಸ್ಪೋರ್ಟ್ಸ್ ಹಬ್ಬ–2026’ಕ್ಕೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್ 25, 26 ಮತ್ತು 27ರಂದು ಮೂರು ದಿನಗಳ ಕಾಲ ಕ್ರೀಡಾ ಹಬ್ಬ ನಡೆಯಲಿದೆ.

ಜಿಲ್ಲಾಡಳಿತದ ನೇತೃತ್ವದಲ್ಲಿ ಕಲಬುರಗಿ ನೆಕ್ಸ್ಟ್ ಫೌಂಡೇಷನ್ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿರುವ ಈ ಕ್ರೀಡಾ ಹಬ್ಬದಲ್ಲಿ ಜಿಲ್ಲೆಯಾದ್ಯಂತದ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಹಾಗೂ ಕುಟುಂಬಗಳು ಭಾಗವಹಿಸಲಿದ್ದಾರೆ.

ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ, ಐಟಿ-ಬಿಟಿ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಲಬುರಗಿ ತನ್ನ ಅತಿದೊಡ್ಡ ಕ್ರೀಡಾ ಸಂಭ್ರಮಕ್ಕೆ ಸಜ್ಜಾಗುತ್ತಿದೆ ಎಂದು ತಿಳಿಸಿದ್ದಾರೆ.

ಕ್ರೀಡಾ ಹಬ್ಬದಲ್ಲಿ ಕ್ರಿಕೆಟ್, ಫುಟ್‌ಬಾಲ್, ವಾಲಿಬಾಲ್, ಬ್ಯಾಡ್ಮಿಂಟನ್, ಟೇಬಲ್ ಟೆನಿಸ್, ಚೆಸ್ ಸೇರಿದಂತೆ ಹಲವು ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ಸೈಕ್ಲಿಂಗ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಾರ್ವಜನಿಕರಿಗೆ ಭಾಗವಹಿಸುವ ಅವಕಾಶ ಕಲ್ಪಿಸಲಾಗಿದೆ.

ಕ್ರೀಡಾ ಸ್ಪರ್ಧೆಗಳ ಜೊತೆಗೆ ಮನರಂಜನಾ ಕಾರ್ಯಕ್ರಮಗಳು, ಸಮುದಾಯ ಚಟುವಟಿಕೆಗಳು ಹಾಗೂ ಎಲ್ಲ ವಯೋಮಾನದ ಜನರನ್ನು ಒಗ್ಗೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕ್ರೀಡೆಯನ್ನು ಕೇವಲ ಸ್ಪರ್ಧೆಯಾಗಿ ಅಲ್ಲ, ಇಡೀ ಸಮುದಾಯವನ್ನು ಒಗ್ಗೂಡಿಸುವ ಉತ್ಸವವನ್ನಾಗಿ ರೂಪಿಸುವ ಉದ್ದೇಶ ಈ ಹಬ್ಬದ ಹಿಂದಿದೆ ಎಂದು ಸಚಿವರು ತಿಳಿಸಿದ್ದಾರೆ.

ಯುವ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವುದರ ಜೊತೆಗೆ ಕ್ರೀಡಾ ಸ್ಫೂರ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಿಯಾಂಕ್ ಖರ್ಗೆ ಕರೆ ನೀಡಿದ್ದಾರೆ.

“ನಿಮ್ಮ ನೆಚ್ಚಿನ ಕ್ರೀಡೆಯನ್ನು ಆಯ್ಕೆ ಮಾಡಿಕೊಳ್ಳಿ, ನಿಮ್ಮ ತಂಡವನ್ನು ಕರೆತನ್ನಿ. ಬನ್ನಿ, ಕಲಬುರಗಿ – ಆಟವಾಡೋಣ!” ಎಂದು ಸಚಿವರು ಜಿಲ್ಲೆಯ ಜನರಿಗೆ ಆಹ್ವಾನ ನೀಡಿದ್ದಾರೆ. ಕ್ರೀಡೆಯ ಮೂಲಕ ಆರೋಗ್ಯಕರ, ಸಕ್ರಿಯ ಹಾಗೂ ಪ್ರತಿಭಾವಂತ ಸಮುದಾಯವನ್ನು ನಿರ್ಮಿಸುವ ನಿಟ್ಟಿನಲ್ಲಿ ಈ ಕ್ರೀಡಾ ಹಬ್ಬ ಮಹತ್ವದ ಹೆಜ್ಜೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

Registrations are now open for Kalaburagi Sports Habba 2026!

Kalaburagi is getting ready for its biggest sporting celebration, taking place on September 25, 26 and 27, 2026.

Organised by the district administration with the support of Kalaburagi Next Foundation, the Habba is… pic.twitter.com/uvbwgLPwdr

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 7, 2026

Tags

Sports FestivalSportsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X