ಕಲಬುರಗಿ | ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ರೇಣುಕಾ ಸಿಂಗೆ ನೇಮಕ

ಕಲಬುರಗಿ: ಕಲಬುರಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ರೇಣುಕಾ ಸಿಂಗೆ ಅವರನ್ನು ನೇಮಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಐದು ಜಿಲ್ಲೆಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಹೆಸರು ಸೇರಿದಂತೆ ಪದಾಧಿಕಾರಿಗಳ ಮೊದಲ ಪಟ್ಟಿಯನ್ನು ಸೌಮ್ಯ ರೆಡ್ಡಿ ಶಿಫಾರಸ್ಸು ಮಾಡಿದ್ದರು. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ, ಸೌಮ್ಯ ರೆಡ್ಡಿ ಮಾಡಿರುವ ಶಿಫಾರಸ್ಸನ್ನು ಅಂಗೀಕರಿಸಿದ್ದಾರೆ.
ಇದಲ್ಲದೆ ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾರ್ಯದರ್ಶಿ ಒಳಗೊಂಡಂತೆ ಒಟ್ಟು 48 ಮಂದಿ ರಾಜ್ಯ ಕಾಂಗ್ರೆಸ್ ಮಹಿಳಾ ಕಾರ್ಯದರ್ಶಿಗಳನ್ನು ನೇಮಿಸಿದ್ದಾರೆ.
Next Story





