Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಪಟ್ಟಣ, ನಂದಿಕೂರ ಜಿಲ್ಲಾ ಪಂಚಾಯಿತಿ...

ಪಟ್ಟಣ, ನಂದಿಕೂರ ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಎಸ್‌ಸಿ ಮೀಸಲಾತಿಗೆ ಒಳಪಡಿಸಿ: ಗುಂಡಪ್ಪ ಲಂಡನಕರ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 Oct 2026 12:14 PM IST
share
ಪಟ್ಟಣ, ನಂದಿಕೂರ ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಎಸ್‌ಸಿ ಮೀಸಲಾತಿಗೆ ಒಳಪಡಿಸಿ: ಗುಂಡಪ್ಪ ಲಂಡನಕರ್ ಆಗ್ರಹ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಪಟ್ಟಣ ಹಾಗೂ ನಂದಿಕೂರ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ, ಮೀಸಲಾತಿ ರೋಸ್ಟರ್‌ನಲ್ಲಿನ ಪಾರದರ್ಶಕತೆ ಹಾಗೂ ನ್ಯಾಯಸಮ್ಮತ ಹಂಚಿಕೆಯನ್ನು ಖಚಿತಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಗುಂಡಪ್ಪ ಲಂಡನಕರ್ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣ ಜಿಲ್ಲಾ ಪಂಚಾಯಿತಿ ಕ್ಷೇತ್ರ ಆರಂಭವಾದಾಗಿನಿಂದ ಈವರೆಗೆ ಪರಿಶಿಷ್ಟ ಜಾತಿಗೆ ಮೀಸಲಾತಿ ಕಲ್ಪಿಸಿಲ್ಲ. ಕಳೆದ 35 ವರ್ಷಗಳಿಂದ ಈ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯಿತಿ ಅಥವಾ ತಾಲೂಕು ಪಂಚಾಯಿತಿ ಮಟ್ಟದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿ ದೊರೆತಿಲ್ಲ. ಇದರಿಂದ ಪರಿಶಿಷ್ಟ ಜಾತಿಯ ಜನರಿಗೆ ಸಾಮಾಜಿಕ ಹಾಗೂ ರಾಜಕೀಯವಾಗಿ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಹೀಗಾಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ನಿಗದಿಪಡಿಸುವಾಗ ಸಂಬಂಧಿತ ಕಾನೂನು, ಸರ್ಕಾರದ ನಿಯಮಗಳು, ಮೀಸಲಾತಿ ರೋಸ್ಟರ್ ಪದ್ಧತಿ ಹಾಗೂ ಅಧಿಕೃತ ಜನಸಂಖ್ಯೆಯ ಅಂಕಿಅಂಶಗಳನ್ನು ಪಾರದರ್ಶಕವಾಗಿ ಪರಿಗಣಿಸಬೇಕು ಎಂದು ಹೇಳಿದರು.

ಈ ತಿಂಗಳಲ್ಲಿ ಪಟ್ಟಣ ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಮೊದಲು ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರವೆಂದು ಪ್ರಕಟಿಸಿ, ಕೇವಲ ಎರಡು ದಿನಗಳಲ್ಲೇ ಸಾಮಾನ್ಯ ಕ್ಷೇತ್ರವೆಂದು ಬದಲಾಯಿಸಲಾಗಿದೆ ಎಂದು ಲಂಡನಕರ್ ಆರೋಪಿಸಿದರು. ಈ ಹಿಂದೆಯೂ ಎರಡು ಬಾರಿ ಮಹಿಳಾ ಮೀಸಲಾತಿ ಎಂದು ಪ್ರಕಟಿಸಿ, ಬಳಿಕ ಬದಲಾವಣೆ ಮಾಡಲಾಗಿದೆ ಎಂದು ದೂರಿದರು.

ಪಟ್ಟಣ ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಪರಿಶಿಷ್ಟ ಜಾತಿಗೆ ಮೀಸಲಿಡುವ ಮೂಲಕ ದಲಿತ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ ಅವರು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ, ಮುಖ್ಯ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ, ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಿಗೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಶರಣಬಸಪ್ಪ ಎಸ್. ದೊಡ್ಡಮನಿ, ಮಂಜುನಾಥ ಭಂಡಾರಿ, ಅನಿಲಕುಮಾರ ಡಾಂಗೆ, ಸಂಜುಕುಮಾರ ಜವರಕರ್, ಚಂದ್ರಕಾಂತ ಬಾಲಿ ಹಾಗೂ ಧರ್ಮಣ್ಣ ಪಟ್ಟಣಕರ ಉಪಸ್ಥಿತರಿದ್ದರು.

Tags

NandikoorZilla Panchayat constituencyGundappa LandankarSC
share
ವಾರ್ತಾಭಾರತಿ
ವಾರ್ತಾಭಾರತಿ
Next Story
X