Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ ಪಪಂ ಅಧ್ಯಕ್ಷೆಯಾಗಿ ಸಾಲಿಯಾಬೇಗಂ,...

ಕಾಳಗಿ ಪಪಂ ಅಧ್ಯಕ್ಷೆಯಾಗಿ ಸಾಲಿಯಾಬೇಗಂ, ಉಪಾಧ್ಯಕ್ಷರಾಗಿ ಶರಣು ಬೆಲೂರ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ12 Oct 2026 6:28 PM IST
share
ಕಾಳಗಿ ಪಪಂ ಅಧ್ಯಕ್ಷೆಯಾಗಿ ಸಾಲಿಯಾಬೇಗಂ, ಉಪಾಧ್ಯಕ್ಷರಾಗಿ ಶರಣು ಬೆಲೂರ ಅಧಿಕಾರ ಸ್ವೀಕಾರ

ಕಾಳಗಿ: ಸ್ಥಳೀಯ ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಸೋಮವಾರ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆಯಿತು. ನೂತನ ಅಧ್ಯಕ್ಷೆಯಾಗಿ ಸಾಲಿಯಾಬೇಗಂ ಮಹೆಬೂಬಬೇಗ್ ಬಿಜಾಪುರ ಹಾಗೂ ಉಪಾಧ್ಯಕ್ಷರಾಗಿ ಶರಣು ಬೆಲೂರ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿದ್ದರಾಮೇಶ್ವರ ಶಾಖಾಪೂರ ಹಾಗೂ ಸಿಬ್ಬಂದಿ ನೂತನ ಅಧ್ಯಕ್ಷೆ, ಉಪಾಧ್ಯಕ್ಷ ಮತ್ತು ಸದಸ್ಯರನ್ನು ಸನ್ಮಾನಿಸಿ ಸ್ವಾಗತಿಸಿದರು.

ನೂತನ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಸಾಲಿಯಾಬೇಗಂ ಮಹೆಬೂಬಬೇಗ್ ಬಿಜಾಪುರ ಮಾತನಾಡಿ, ಕಾಳಗಿ ಪಟ್ಟಣದ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಉಪಾಧ್ಯಕ್ಷ ಶರಣು ಬೆಲೂರ ಮಾತನಾಡಿ, ಪಟ್ಟಣ ಪಂಚಾಯಿತಿಯ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ನಮ್ಮ ನಾಯಕರಾದ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಹಾಗೂ ರಾಜೇಶ್ ಗುತ್ತೇದಾರ ಅವರ ಮಾರ್ಗದರ್ಶನದಲ್ಲಿ ಕಾಳಗಿ ಪಟ್ಟಣವನ್ನು ರಾಜ್ಯದಲ್ಲಿಯೇ ಮಾದರಿ ಪಟ್ಟಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ನಂತರ ನೂತನ ಅಧ್ಯಕ್ಷೆ ಸಾಲಿಯಾಬೇಗಂ ಮಹೆಬೂಬಬೇಗ್ ಬಿಜಾಪುರ, ಉಪಾಧ್ಯಕ್ಷ ಶರಣು ಬೆಲೂರ ಹಾಗೂ ಸದಸ್ಯರನ್ನು ಪಟ್ಟಣದ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರಾಜೇಶ್ ಗುತ್ತೇದಾರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿದ್ದರಾಮೇಶ್ವರ ಶಾಖಾಪೂರ, ಸಮುದಾಯ ಸಂಘಟಕ ಅಧಿಕಾರಿ ಡಾ. ರೇಣುಕಾ ಕಾಬಾ, ಸಹಾಯಕ ಅಭಿಯಂತರ ಆಕಾಶ ರಾಠೋಡ, ಪಟ್ಟಣ ಪಂಚಾಯಿತಿ ಸದಸ್ಯರಾದ ಗುರುರಾಜ ಮದ್ದರೂ, ಬಸವರಾಜ ಮಡಿವಾಳ, ಜಿತೇಂದ್ರ ಚವ್ಹಾಣ, ಅಂಬವ್ವ ಕಾಳಪ್ಪ ರಾಜಾಪೂರ, ಲಲಿತಾಬಾಯಿ ಕಮಲಾಪೂರ, ಚಂದ್ರಕಲಾ ಚವ್ಹಾಣ, ಪಾರ್ವತಿ ವಿಠ್ಠಲ, ಪಂಚಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ರಾಘವೇಂದ್ರ ಗುತ್ತೇದಾರ, ನೀಲಕಂಠ ಗುತ್ತೇದಾರ, ಶಿವಶರಣಪ್ಪ ಕಮಲಾಪೂರ, ಗುಡುಸಾಬ ಕಮಲಾಪೂರ, ವೇದಪ್ರಕಾಶ ಮೊಟಗಿ, ಅಸ್ಲಾಂಬೇಗ್ ಬಿಜಾಪುರ, ಸಂತೋಷ ಪತಂಗೆ, ಅನೀಲಕುಮಾರ ಮಾಲಿಪಾಟೀಲ, ರವಿದಾಸ ಪತಂಗೆ, ಮುನೀರಬೇಗ ಬಿಜಾಪುರ, ಮಹೇಶ ಗುತ್ತೇದಾರ, ದತ್ತು ಗುತ್ತೇದಾರ, ಸತೀಶ್ ಕಮಲಾಪೂರ ಹಾಗೂ ಮಹೆಬೂಬಬೇಗ್ ಬಿಜಾಪುರ ಸೇರಿದಂತೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಮತ್ತು ಅನೇಕ ಮುಖಂಡರು ಉಪಸ್ಥಿತರಿದ್ದರು.

ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಚುನಾಯಿತ ಸದಸ್ಯರು ಸಾಂಪ್ರದಾಯಿಕವಾಗಿ ಟೋಪಿ ಮತ್ತು ಟವಲ್ ತೊಡಿಸಿ ಸ್ವಾಗತಿಸಿದರು. ಇದೇ ವೇಳೆ ನೂತನ ಅಧ್ಯಕ್ಷೆ, ಉಪಾಧ್ಯಕ್ಷ ಹಾಗೂ ಎಲ್ಲ ಸದಸ್ಯರು ಟೋಪಿ–ಟವಲ್ ಧರಿಸಿ ಅಧಿಕಾರ ಸ್ವೀಕರಿಸಿದರು.

ಕಾಳಗಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಒಟ್ಟು 11 ಸದಸ್ಯರ ಪೈಕಿ 10 ಸದಸ್ಯರು ಹಾಜರಿದ್ದರು. ಪಟ್ಟಣದ ಐದನೇ ವಾರ್ಡ್‌ನ ಬಿಜೆಪಿ ಸದಸ್ಯ ರಮೇಶ್ ಕಿಟ್ಟದ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು.

Tags

town panchayatKalagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X