Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅತನೂರು ಹೆದ್ದಾರಿ ತಡೆದು ಸೆ.3ರಂದು ರೈತರ...

ಅತನೂರು ಹೆದ್ದಾರಿ ತಡೆದು ಸೆ.3ರಂದು ರೈತರ ಪ್ರತಿಭಟನೆ: ಸಂತೋಷ್ ಜಿ. ಮಲಗೊಂಡ

ವಾರ್ತಾಭಾರತಿವಾರ್ತಾಭಾರತಿ31 Aug 2026 8:04 PM IST
share
ಅತನೂರು ಹೆದ್ದಾರಿ ತಡೆದು ಸೆ.3ರಂದು ರೈತರ ಪ್ರತಿಭಟನೆ: ಸಂತೋಷ್ ಜಿ. ಮಲಗೊಂಡ

ಅಫಜಲಪುರ: ಭೀಮಾ ಏತ ನೀರಾವರಿ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಸೆಪ್ಟೆಂಬರ್ 3ರಂದು ಅತನೂರು ಹೆದ್ದಾರಿಯಲ್ಲಿ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಅಧ್ಯಕ್ಷ ಸಂತೋಷ್ ಜಿ. ಮಲಗೊಂಡ ತಿಳಿಸಿದ್ದಾರೆ.

ಪಟ್ಟಿಯಲ್ಲಿ ತಾಲೂಕ ತಹಸೀಲ್ದಾರ ಸಂಜೀವಕುಮಾರ ದಾಸರವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು ಅತನೂರು, ಇಂಗಳಗಿ (ಬಿ), ಅವರಾದ, ತೆಲ್ಲೂರು, ಕೆರಕನಹಳ್ಳಿ, ಬಟಗೇರಿ, ಸಿನ್ನೂರ, ಭೋಗನಹಳ್ಳಿ, ಧಣ್ಣೂರ್ ಹಾಗೂ ಅಂಕಲಗಿ ಗ್ರಾಮಗಳ ರೈತರ ಜಮೀನುಗಳಿಗೆ ಭೀಮಾ ಏತ ನೀರಾವರಿ ಕಾಲುವೆಗಳ ಮೂಲಕ ಸಮರ್ಪಕವಾಗಿ ನೀರು ತಲುಪದೆ ಹಲವು ವರ್ಷಗಳಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಈ ವರ್ಷವೂ ಮಳೆಯ ಕೊರತೆಯಿಂದ ಬೆಳೆಗಳು ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಉಲ್ಬಣವಾಗಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ಮುಖಂಡರು ತಿಳಿಸಿದ್ದಾರೆ.

ಸೆಪ್ಟೆಂಬರ್ 3ರಂದು ಬೆಳಿಗ್ಗೆ 9 ಗಂಟೆಗೆ ಅತನೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಾಗುವುದು ಎಂದು ತಿಳಿಸದರು.

ಪ್ರತಿಭಟನೆಯಲ್ಲಿ ಭೀಮಾ ಏತ ನೀರಾವರಿ ಕಾಲುವೆಗಳಿಗೆ ತಕ್ಷಣ ನೀರು ಹರಿಸುವುದು, ಬಡದಾಳ–ಅರ್ಜುಣಗಿ ಬಳಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಹಾನಿಗೊಳಗಾದ ಪೈಪ್‌ಲೈನ್ ದುರಸ್ತಿ, 2024–25ನೇ ಸಾಲಿನ ಬೆಳೆ ವಿಮೆ ಹಣವನ್ನು ಅರ್ಹ ರೈತರಿಗೆ ಬಿಡುಗಡೆ, ಕಾಲುವೆ ಕಾಮಗಾರಿ ನಡೆಸಿದ ರೈತರಿಗೆ ಬಾಕಿ ಹಣ ಪಾವತಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ, ಅಫಜಲಪುರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಕಲಬುರಗಿ ಜಿಲ್ಲೆಗೆ ರೂ.1,000 ಕೋಟಿ ವಿಶೇಷ ಪರಿಹಾರ ಪ್ಯಾಕೇಜ್ ನೀಡುವುದು, ಕಬ್ಬಿಗೆ ಪ್ರತಿ ಟನ್‌ಗೆ ರೂ. 5,000 ಕನಿಷ್ಠ ಬೆಂಬಲ ಬೆಲೆ (MSP) ಹಾಗೂ ₹900 ರಾಜ್ಯ ಸಲಹಾ ಬೆಲೆ (SAP) ಜಾರಿಗೊಳಿಸುವುದು, ಕೊರಳ್ಳಿ ಡ್ಯಾಂನಿಂದ ಅಮರ್ಜಾ ಹಳ್ಳಕ್ಕೆ ಜಾನುವಾರುಗಳ ಕುಡಿಯುವ ನೀರಿಗಾಗಿ ನೀರು ಹರಿಸುವುದು ಹಾಗೂ ಭಾರತ್‌ಮಾಲಾ ರಸ್ತೆಯಿಂದ ಬಂದ್ ಮಾಡಿರುವ ರೈತರ ಹೊಲಗಳ ಪ್ರವೇಶ ದಾರಿಗಳನ್ನು ತೆರವುಗೊಳಿಸಿ ರಸ್ತೆ ಸಂಪರ್ಕ ಕಲ್ಪಿಸುವಂತೆ ಆಗ್ರಹಿಸಲಾಗುವುದು.

ಬೇಡಿಕೆಗಳಿಗೆ ಸರ್ಕಾರ ಸೂಕ್ತ ಸ್ಪಂದನೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಸಿದ್ದು ದಣ್ಣೂರ, ಜಿಲ್ಲಾಧ್ಯಕ್ಷ ರಾಜು ಶೆಟ್ಟಿ,ಬಸವಂತ್ರಾಯಗೌಡ ಬಿರಾದಾರ, ಸಿದ್ದು ದಣ್ಣೂರ,ಅಶೋಕ ಹೂಗಾರ,ಚಂದ್ರಕಾಂತ ಅತನೂರ,ದತ್ತು ಹೇರೂರ,ಬೀರಣ್ಣ ಮೋಟಗಿ, ವಿಶ್ವನಾಥ ಹೂಗಾರ,ತಮ್ಮಣ್ಣಗೌಡ ಪಾಟೀಲ ಸೇರಿದಂತೆ ಅನೇಕರಿದ್ದರು.

Tags

Santhosh G. MalagondafarmersKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X