ಕಾಳಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಸಂತೋಷ ಕಲ್ಮೂಡ ಅಧ್ಯಕ್ಷರಾಗಿ ಆಯ್ಕೆ

ಕಾಳಗಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜರುಗಿದ್ದು, ಕಾಳಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸಂತೋಷ ಕಲ್ಮೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಅಣಿವೀರಪ್ಪ ತಿಳಿಸಿದ್ದಾರೆ.
ಸಂಘದ ಉಪಾಧ್ಯಕ್ಷರಾಗಿ ಹುಲಸಗೂಡ ಸರ್ಕಾರಿ ಶಾಲೆಯ ಮುಖ್ಯಗುರು ಪಿತಾಂಬರ್ ಮಡಿವಾಳ ಹಾಗೂ ಕೋರವಾರ ಸರ್ಕಾರಿ ಶಾಲೆಯ ಶಿಕ್ಷಕಿ ಜಯಶ್ರೀದೇವಿ ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ರಾಜಾಪೂರ ಸರ್ಕಾರಿ ಶಾಲೆಯ ಶಿಕ್ಷಕ ಬಸವಂತರಾಯ ಹಾಗೂ ಖಜಾಂಚಿಯಾಗಿ ತೊಂಚಿ ಸರ್ಕಾರಿ ಶಾಲೆಯ ಶಿಕ್ಷಕ ಮಹ್ಮದ್ ಯುಸುಫ್ ಖಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
Next Story




