ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಆ.31 ರಂದು ಸತ್ಯ ಯಾತ್ರೆ: ಬಾಲರಾಜ್ ಗುತ್ತೇದಾರ

ಕಲಬುರಗಿ : ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಆ.31 ರಂದು ಜಾತ್ಯತೀತ ಜನತಾದಳ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳಕ್ಕೆ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತರಯ ಭೇಟಿ ನೀಡಲಿದ್ದೇವೆ ಎಂದು ಹೇಳಿದರು.
ಕೋಟ್ಯಾಂತರ ಭಕ್ತರು ಧರ್ಮಸ್ಥಳ ಕ್ಷೇತ್ರಕ್ಕೆ ಹೋಗುತ್ತಾರೆ. ಧರ್ಮಸ್ಥಳದಲ್ಲಿ ಧರ್ಮ, ನ್ಯಾಯವಿದೆ ಇಂತಹ ಶ್ರೀ ಕ್ಷೇತ್ರ ಬಗ್ಗೆ ಪಿತೂರಿ ನಡೆದಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಕೃಷ್ಣ ರೆಡ್ಡಿ, ರಾಜಾ ಪಟೇಲ್, ಶ್ಯಾಮರಾವ್ ಸೂರನ್ ಸೇರಿದಂತೆ ಮತ್ತಿತರರು ಇದ್ದರು.
Next Story





