Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಲ್ಯಾಣ ಕರ್ನಾಟಕ...

Kalaburagi | ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವೈಜ್ಞಾನಿಕ ಸಂಶೋಧನೆಗಳು ಆಧಾರವಾಗಲಿ: ಪ್ರೊ.ಬಟ್ಟು ಸತ್ಯನಾರಾಯಣ

ಕರ್ನಾಟಕ ಕೇಂದ್ರೀಯ ವಿವಿಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 Sept 2026 8:27 PM IST
share
Kalaburagi | ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವೈಜ್ಞಾನಿಕ ಸಂಶೋಧನೆಗಳು ಆಧಾರವಾಗಲಿ: ಪ್ರೊ.ಬಟ್ಟು ಸತ್ಯನಾರಾಯಣ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ವೈಜ್ಞಾನಿಕ ಅಧ್ಯಯನ ಮತ್ತು ಸಂಶೋಧನೆಗಳು ಆಧಾರವಾಗಬೇಕು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.

79ನೇ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

1947ರ ಆಗಸ್ಟ್ 15ರಂದು ದೇಶಕ್ಕೆ ಸ್ವಾತಂತ್ರ್ಯ ದೊರೆತರೂ, ನಿಜಾಮರ ಆಡಳಿತದಲ್ಲಿದ್ದ ಈ ಪ್ರದೇಶವು 1948ರ ಸೆಪ್ಟೆಂಬರ್ 17ರಂದು ಭಾರತ ಒಕ್ಕೂಟಕ್ಕೆ ವಿಲೀನಗೊಂಡಿತು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಸಿಯುಕೆ ಪ್ರಮುಖ ಪಾತ್ರ ವಹಿಸಬೇಕಿದ್ದು, ಈ ಭಾಗದ ಹಿಂದುಳಿಯುವಿಕೆಗೆ ಕಾರಣವಾಗಿರುವ ಅಂಶಗಳನ್ನು ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಅಧ್ಯಯನ ನಡೆಸಬೇಕು ಎಂದು ಕರೆ ನೀಡಿದರು.

ಸಂಶೋಧನೆಯ ಆಧಾರದ ಮೇಲೆ ಸಿದ್ಧವಾಗುವ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸುವ ಮೂಲಕ ಪರಿಣಾಮಕಾರಿ ನೀತಿ ರೂಪಣೆಗೆ ಕೊಡುಗೆ ನೀಡಬೇಕು. ವಿಶ್ವವಿದ್ಯಾಲಯದ ಸಂಶೋಧನಾ ಚಟುವಟಿಕೆಗಳು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವೇಗ ನೀಡುವಂತಾಗಬೇಕು ಎಂದು ಅವರು ತಿಳಿಸಿದರು.

ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ್ ಮಾತನಾಡಿ, ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳು ಅಪಾರ ನೈಸರ್ಗಿಕ ಸಂಪನ್ಮೂಲಗಳು ಮತ್ತು ಮಾನವ ಸಾಮರ್ಥ್ಯವನ್ನು ಹೊಂದಿವೆ. ಆ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಈ ಭಾಗದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಪ್ರೊ.ಚನ್ನವೀರ ಆರ್.ಎಂ., ಡಾ. ಸಫಿಯಾ ಪರ್ವಿನ್, ಸಂಶೋಧನಾ ವಿದ್ಯಾರ್ಥಿ ಮಲ್ಲಿಕಾರ್ಜುನ ಹಾಗೂ ಛಾಯಾಚಿತ್ರಕಾರ ಶ್ರವಣ್ ಕುಮಾರ್ ಹಿರೇಮಠ ಮಾತನಾಡಿದರು.

ಕಾರ್ಯಕ್ರಮದ ಸಂಯೋಜಕರಾದ ಪ್ರೊ. ಪಾಂಡುರಂಗ ಪತ್ತಿ ಸ್ವಾಗತಿಸಿ, ವಂದನಾರ್ಪಣೆ ಸಲ್ಲಿಸಿದರು. ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಂದೇ ಮಾತರಂ ಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮ ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಂಡಿತು.

Tags

Kalyana KarnatakaKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X