Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Sedam | ಖರ್ಗೆ ಅವರಿಗೆ ಅವಮಾನ ಖಂಡಿಸಿ...

Sedam | ಖರ್ಗೆ ಅವರಿಗೆ ಅವಮಾನ ಖಂಡಿಸಿ ಸೇಡಂನಲ್ಲಿ ಕಾಂಗ್ರೆಸ್‌ನಿಂದ ರಸ್ತೆ ತಡೆ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ19 Aug 2026 10:02 PM IST
share
Sedam | ಖರ್ಗೆ ಅವರಿಗೆ ಅವಮಾನ ಖಂಡಿಸಿ ಸೇಡಂನಲ್ಲಿ ಕಾಂಗ್ರೆಸ್‌ನಿಂದ ರಸ್ತೆ ತಡೆ ಪ್ರತಿಭಟನೆ

ಸೇಡಂ: ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ದೊರಕಿಸಲು ಪ್ರಮುಖ ಪಾತ್ರ ವಹಿಸಿದ ಹಿರಿಯ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಕೃಷಿ ಸಮಾಜದ ರಾಜ್ಯ ಪ್ರತಿನಿಧಿ ಬಸವರಾಜ ಪಾಟೀಲ ಊಡಗಿ ಮಾತನಾಡಿ, ದೇಶ ಹಾಗೂ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸುವ ಮೂಲಕ ಅವಮಾನಿಸಿರುವುದು ಅಕ್ಷಮ್ಯ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದರು. ಘಟನೆ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಂಬಂಧಪಟ್ಟವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ್ವರರಾವ ಮಾಲಿಪಾಟೀಲ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು ದೇಶ ಹಾಗೂ ಜನರಿಗಾಗಿ ನಿರಂತರವಾಗಿ ಸೇವೆ ಸಲ್ಲಿಸಿರುವ ಜನನಾಯಕರು. ಅವರಿಗೆ ಈ ರೀತಿಯಲ್ಲಿ ಅವಮಾನ ಮಾಡಿರುವುದು ಖಂಡನೀಯ. ಇಂತಹ ಸಂಕುಚಿತ ಹಾಗೂ ಅವಹೇಳನಕಾರಿ ಪ್ರವೃತ್ತಿಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಜಗನ್ನಾಥ ಚಿಂತಪಳ್ಳಿ ಮಾತನಾಡಿ, 21ನೇ ಶತಮಾನದಲ್ಲಿಯೂ ಇಂತಹ ಸಂಕುಚಿತ ಮನಸ್ಥಿತಿ ಹಾಗೂ ಅನಿಷ್ಟ ಪದ್ಧತಿಗಳ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವುದು ಖಂಡನೀಯ. ಇಂತಹ ಸಮಾಜವಿರೋಧಿ ಕೃತ್ಯಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಪ್ಪಿತಸ್ಥರ ವಿರುದ್ಧ ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ನಂದಿಗಾಂ, ಮುಖಂಡರಾದ ರಾಜಶೇಖರ ಪುರಾಣಿಕ, ಜೈಭೀಮ್ ಊಡಗಿ, ಬಸವರಾಜ ರೇವಗೊಂಡ, ವಿಶ್ವನಾಥ ಪಾಟೀಲ ಬೊಮ್ನಳ್ಳಿ, ಸೈಯ್ಯದ್ ನಾಜಿಮೊದ್ದಿನ್, ಅಬ್ದುಲ್ ಗಫೂರ, ಅಶೋಕ ಮಹಾಡಿಕ್, ಮೆಹಮೂದ್ ಮದನಾ, ಸೇಡಂ ಬ್ಲಾಕ್ ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷ ಸತೀಶ ಪೂಜಾರಿ, ಮುಧೋಳ ಬ್ಲಾಕ್ ಅಧ್ಯಕ್ಷ ವೆಂಕಟೇಶ ನಾಡೇಪಲ್ಲಿ, ಸೇಡಂ ಬ್ಲಾಕ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ ವಿಲಾಸಗೌತಂ, ರಾಮಯ್ಯ ಪೂಜಾರಿ, ವೆಂಕಟರೆಡ್ಡಿ ಪಾಟೀಲ ಕಡತಾಲ, ಲಕ್ಷ್ಮೀಕಾಂತ ಕುಲಕರ್ಣಿ, ವೆಂಕಟರಾವ ಖೇವಜಿ, ಗುರುನಾಥರೆಡ್ಡಿ ಪಾಟೀಲ, ಜಗದೇವಪ್ಪ ಪಾಟೀಲ ಕೊಂಕನಹಳ್ಳಿ, ಮಹ್ಮದ್ ಗೌಸ್, ಬಾಬಾ ಲಿಂಗಂಪಲ್ಲಿ, ನಾಗರಾಜ್ ನಂದೂರು, ಈರಣ್ಣ ರೆಮಣ್ಣಿ, ಹೇಮ್ಲಾನಾಯಕ, ರಾಜಕುಮಾರ ರಾಠೋಡ್, ಹಾಜಿ ನಾಡೇಪಲ್ಲಿ, ಲಿಂಗರಾಜ ಕುಪನೂರ, ವಿರೇಂದ್ರ ರುದ್ನೂರ, ಭೀಮಾಶಂಕರ ಕೊಳ್ಳಿ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

CongressSedam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X