Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Sedam | ಪಂಚಲಿಂಗೇಶ್ವರ ದೇವಸ್ಥಾನದಲ್ಲಿ...

Sedam | ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದಸರಾ ಉತ್ಸವಕ್ಕೆ ಚಾಲನೆ

ಅಸತ್ಯದ ವಿರುದ್ಧ ಸತ್ಯದ ವಿಜಯದ ಸಂಕೇತ ದಸರಾ: ಬಸವರಾಜ ಪಾಟೀಲ ಊಡಗಿ

ವಾರ್ತಾಭಾರತಿವಾರ್ತಾಭಾರತಿ12 Oct 2026 4:40 PM IST
share
Sedam | ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದಸರಾ ಉತ್ಸವಕ್ಕೆ ಚಾಲನೆ

ಸೇಡಂ: ದಸರಾ ಹಬ್ಬವು ಅಸತ್ಯದ ವಿರುದ್ಧ ಸತ್ಯದ ವಿಜಯದ ಸಂಕೇತವಾಗಿದ್ದು, ನವರಾತ್ರಿಯ ಒಂಬತ್ತು ದಿನಗಳು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಕೂಡಿರುತ್ತವೆ ಎಂದು ರಾಜ್ಯ ಕೃಷಿಕ ಸಮಾಜದ ನಿರ್ದೇಶಕ ಬಸವರಾಜ ಪಾಟೀಲ ಊಡಗಿ ಹೇಳಿದರು.

ನಗರದ ಪುರಾತನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ಶಾಂಭವಿ ರಂಗಮಂಟಪದಲ್ಲಿ ಆಯೋಜಿಸಿದ್ದ 45ನೇ ವರ್ಷದ ದಸರಾ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅನಾದಿಕಾಲದಿಂದಲೂ ದುಷ್ಟಶಕ್ತಿಗಳನ್ನು ಸಂಹರಿಸಿ, ಜಗತ್ತಿನ ಉದ್ಧಾರಕ್ಕಾಗಿ ವಿವಿಧ ಅವತಾರಗಳನ್ನು ತಾಳಿದ ದುರ್ಗಾಮಾತೆಯ ಆರಾಧನೆ ನವರಾತ್ರಿಯ ಸಂದರ್ಭದಲ್ಲಿ ಮನೆಮನೆಗಳಲ್ಲಿ ಭಕ್ತಿಭಾವದಿಂದ ನಡೆಯುತ್ತದೆ. ಸೇಡಂನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಅಂಬಾ ಭವಾನಿಯ ಘಟಸ್ಥಾಪನೆ ನೆರವೇರಿಸಿ, ಒಂಬತ್ತು ದಿನಗಳ ಕಾಲ ವೈವಿಧ್ಯಮಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಇದು ಇತರರಿಗೂ ಮಾದರಿಯಾಗಿದೆ ಎಂದು ಹೇಳಿದರು.

ಮುಖ್ಯ ಪ್ರವಚನ ನೀಡಿದ ಕೋಡ್ಲಾ ಶ್ರೀ ಶಂಭುಲಿಂಗೇಶ್ವರ ಮಠದ ಶಂಭುಲಿಂಗ ಮಹಾಸ್ವಾಮಿಗಳು ಮಾತನಾಡಿ, ತಾಯಿಯ ಶಕ್ತಿ ಸರ್ವಶ್ರೇಷ್ಠವಾದುದು. ಗಣೇಶ, ಶಿವ ಸೇರಿದಂತೆ ದೇವಲೋಕದ ದೇವತೆಗಳ ಆರಾಧನೆಯೊಂದಿಗೆ ತಾಯಿ ಶಾಂಭವಿ ಹಾಗೂ ದೇವಿ ದುರ್ಗೆಯ ಸ್ವರೂಪವಾದ ಸ್ತ್ರೀಶಕ್ತಿಗೆ ಭಾರತೀಯ ಪರಂಪರೆಯಲ್ಲಿ ಅತ್ಯಂತ ಪೂಜ್ಯ ಸ್ಥಾನವಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಡಾ. ವಿನೋದ ಸಂಗಾವಿ ಮಾತನಾಡಿ, ದಸರಾ ಹಾಗೂ ನವರಾತ್ರಿ ಉತ್ಸವಗಳು ಭಾರತೀಯ ಸಾಂಸ್ಕೃತಿಕ ಪರಂಪರೆ, ಧಾರ್ಮಿಕ ನಂಬಿಕೆ ಮತ್ತು ಸಂಪ್ರದಾಯಗಳನ್ನು ಮತ್ತೆ ಮತ್ತೆ ಎತ್ತಿಹಿಡಿಯುತ್ತವೆ. ಪಂಚಲಿಂಗೇಶ್ವರ ದೇವಸ್ಥಾನ ಸಮಿತಿ ಹಾಗೂ ದಸರಾ ಉತ್ಸವ ಸಮಿತಿಯವರು ಒಂಬತ್ತು ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನರ ದೈನಂದಿನ ಒತ್ತಡದ ಬದುಕಿಗೆ ವಿರಾಮ ನೀಡಿ, ಆಧ್ಯಾತ್ಮಿಕ ನೆಮ್ಮದಿ ಪಡೆಯಲು ಅವಕಾಶ ಕಲ್ಪಿಸುತ್ತಿರುವುದು ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಶಿವಶಂಕರೇಶ್ವರ ಮಠದ ಶಿವಶಂಕರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಕೊತ್ತಲ ಬಸವೇಶ್ವರ ದೇವಸ್ಥಾನದ ಸದಾಶಿವ ಸ್ವಾಮಿಗಳು ಹಾಗೂ ದಸರಾ ಉತ್ಸವ ಸಮಿತಿ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ ಉಪಸ್ಥಿತರಿದ್ದರು.

ಸಮಿತಿ ಕಾರ್ಯದರ್ಶಿ ಹಾಗೂ ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್, ಸಂತೋಷ ಕುಲಕರ್ಣಿ, ಅನಂತರೆಡ್ಡಿ ಪಾಟೀಲ, ಸುಧಾಕರ ಕುಲಕರ್ಣಿ, ನಾಗಭೂಷಣ ಯಲಗಾರ, ರಾಘವೇಂದ್ರ ಅಗನೂರು, ಆನಂದರೆಡ್ಡಿ ತುಳೇರ, ಜನಾರ್ಧನರೆಡ್ಡಿ ತುಳೇರ ಹಾಗೂ ಸಿದ್ದಪ್ರಸಾದರೆಡ್ಡಿ ಸೇರಿದಂತೆ ಸಮಿತಿಯ ಸದಸ್ಯರು ಮತ್ತು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Tags

templeDasara festivalSedam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X